HomePage_Banner_
HomePage_Banner_
HomePage_Banner_

ಸಿಎಂ ಸಿದ್ದರಾಮಯ್ಯ ಅವರ ಪುತ್ರ ರಾಕೇಶ್ ಸಿದ್ದರಾಮಯ್ಯ ನಿಧನ

Advt_NewsUnder_1

sidduuuu

sidduಜು.30ರಂದು ಸಿಎಂ ಸಿದ್ದರಾಮಯ್ಯ ಅವರ ಪುತ್ರ ರಾಕೇಶ್ ಸಿದ್ದರಾಮಯ್ಯ ಅವರು ಬೆಲ್ಜಿಯಂ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಕಳೆದ ಒಂದು ವಾರದಿಂದ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ರಾಕೇಶ್ ಬೆಲ್ಜಿಯಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.  ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪುತ್ರ ರಾಕೇಶ್ ಅವರು ಬೆಲ್ಜಿಯಂ ಪ್ರವಾಸದಲ್ಲಿದ್ದು, ಪ್ಯಾಂಕ್ರಿಯಸ್ ಕಾಯಿಲೆಯಿಂದ ಬಳಲುತ್ತಿದ್ದರು.
ಬೆಲ್ಜಿಯಂ ಪ್ರವಾಸದಲ್ಲಿರುವ ಪುತ್ರನ ಅನಾರೋಗ್ಯ ಸುದ್ದಿ ತಿಳಿಯುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರಿಗೆ ಕರೆ ಮಾಡಿ, ಪುತ್ರನ ಅನಾರೋಗ್ಯ ಕುರಿತು ಮಾಹಿತಿ ಪಡೆದುಕೊಂಡಿದ್ದರು. ಕರೆಗೆ ಸ್ಪಂಧಿಸಿರುವ ವಿದೇಶಾಂಗ ಸಚಿವಾಲಯದ ಅಧಿಕಾರಿಗಳು ರಾಕೇಶ್ ಅವರನ್ನು ಸಂಪರ್ಕಿಸಿ ಮಾಹಿತಿ ಪಡೆದಿದ್ದರು.
ರಾಕೇಶ್‌ರಲ್ಲಿ ಹೆಪಟೋ ರೆನಾಲ್ ಸಿಂಡ್ರೋಮ್ ಬೆಳವಣಿಗೆ ಕಂಡು ಬಂದಿದ್ದು 72 ಗಂಟೆಗಳ ತೀವ್ರ ನಿಗಾ ನಂತರ ಏನಾದರೂ ಹೇಳಬಹುದು ಎಂದು ಐಸಿಯು ಮುಖ್ಯಸ್ಥ ಫಿಲಿಫೆ ಜೊರೆನ್ಸ್ ದಿ ಹಿಂದೂಗೆ ಹೇಳಿದ್ದರು. ವಿವಿಧ ಅಂಗಾಂಗಗಳ ವೈಫಲ್ಯ ತಡೆಯಲು ಸತತ ಯತ್ನ ನಡೆಸಲಾಗುತ್ತಿತ್ತು.

Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.