ರಕ್ತದಾನದಿಂದ ಜೀವದಾನ – ಡಾ. ಬಿ.ಎ. ಕುಮಾರ ಹೆಗ್ಡೆ

Advt_NewsUnder_1
Advt_NewsUnder_1
Advt_NewsUnder_1

sdm rakthdana mahithi copy ಉಜಿರೆ: ರಕ್ತದಾನ ಮಾಡುವುದರಿಂದ ಪ್ರತಿಯೊಬ್ಬ ವ್ಯಕ್ತಿಯು ಆರೋಗ್ಯವಾಗಿರಲು ಸಾಧ್ಯ. ಕನಿಷ್ಟ ಪಕ್ಷ ವರ್ಷದಲ್ಲಿ ಎರಡು ಬಾರಿಯಾದರೂ ರಕ್ತದಾನ ಮಾಡುವುದು ಒಳಿತು ಹಾಗೂ ಇನ್ನೊಂದು ಜೀವವನ್ನು ಉಳಿಸಲು ಸಾಧ್ಯವಾಗುತ್ತದೆ ಎಂದು ಶ್ರೀ.ಧ.ಮಂ. ಮಹಾವಿದ್ಯಾಲಯದ ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಬಿ.ಎ. ಕುಮಾರ ಹೆಗ್ಡೆಯವರು ಹೇಳಿದರು.
ಅವರು ಶ್ರೀ ಧ.ಮಂ.ಪ.ಪೂ ಕಾಲೇಜಿನಲ್ಲಿ ಮಾನವಿಕ ಸಂಘ ಆಯೋಜಿಸಿದ ರಕ್ತದಾನದ ಅರಿವು ಮತ್ತು ಜಾಗೃತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತ ನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೋ. ಎನ್ ದಿನೇಶ್ ಚೌಟ ವಹಿಸಿದ್ದರು. ಈ ಸಂದರ್ಭದಲ್ಲಿ ಕಾರ್ಯಕ್ರಮದ ಅಂಗವಾಗಿ ಆಯ್ದ ವಿದ್ಯಾರ್ಥಿಗಳ ರಕ್ತದ ಗುಂಪು ಪರೀಕ್ಷೆಯನ್ನು ಶ್ರೀ ಧ.ಮಂ. ಉಜಿರೆ ಆಸ್ಪತ್ರೆಯ ಸಹಯೋಗದಿಂದ ನಡೆಸಲಾ ಯಿತು. ಮಾನವಿಕ ಸಂಘದ ಸಂಚಾಲಕ ರಾದ ಮತ್ತು ಅರ್ಥಶಾಸ್ತ್ರ ಉಪನ್ಯಾಸಕ ರಾದ ರಾಜು ಎ.ಎ. ಸ್ವಾಗತಿಸಿದರು, ಮನಃಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಸುಧೀರ್ ಕೆ.ವಿ. ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.