ಜಗತ್ತಿನಲ್ಲಿ ಭಾರತ ಬಲಿಷ್ಠ ರಾಷ್ಟ್ರವಾಗುತ್ತಿದೆ : ನಳಿನ್‌ಕುಮಾರ್ ಕಟೀಲ್

Advt_NewsUnder_1
Advt_NewsUnder_1
Advt_NewsUnder_1

BJP padagrahana copyಭಾಜಪ  ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಕೇಂದ್ರ ಸರಕಾರ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಗೆ ರೂ.೧೦ಸಾವಿರ ಕೋಟಿ ಮೀಸಲಿಟ್ಟಿದೆ. ಬಿ.ಸಿ.ರೋಡಿನಿಂದ ಶಿರಾಡಿ, ಸುಬ್ರಹ್ಮಣ್ಯದಿಂದ ಗುಂಡ್ಯ ಧರ್ಮಸ್ಥಳ ಹಾಗೂ ಧರ್ಮಸ್ಥಳದಿಂದ ಬೆಳ್ತಂಗಡಿ, ಗುರುವಾಯನಕೆರೆ ಕಾರ್ಕಳ ರಸ್ತೆ ಚುತುಷ್ಪಥ ರಸ್ತೆಯಾಗಿ ಮೇಲ್ದರ್ಜೆಗೆರಲಿದೆ ಇದಕ್ಕೆ ಈಗಾಗಲೇ ಒಪ್ಪಿಗೆ ಸಿಕ್ಕಿದೆ. ದೀನ ದಯಾಳ್ ಯೋಜನೆಯಲ್ಲಿ ಮುಂದಿನ ಆರು ತಿಂಗಳ ಒಳಗೆ ಜಿಲ್ಲೆಯ ಎಲ್ಲಾ ಮನೆಗಳಿಗೆ ವಿದ್ಯುತ್ ಸಂಪರ್ಕ ನೀಡಲಾಗುವುದು – ನಳಿನ್‌ಕುಮಾರ್ ಕಟೀಲ್

ಗುರುವಾಯನಕೆರೆ : ಭಾರತದಲ್ಲಿ ಪರಿವರ್ತನೆಯ ಗಾಳಿ ಬೀಸುತ್ತಿದ್ದು, ಇಂದು ಜಗತ್ತು ಭಾರತವನ್ನು ನೋಡುತ್ತಿದೆ. ಹಿಂದೆ ವಾಜಪೇಯಿ ಪ್ರಧಾನಿ ಇದ್ದಾಗ ಈ ಸ್ಥಿತಿ ಇತ್ತು. ಈಗ ಪ್ರಧಾನಿ ನರೇಂದ್ರ ಮೋದಿಯವರು ಜಗತ್ತಿನ ಎಲ್ಲಾ ದೇಶಗಳಲ್ಲಿ ಸಂಬಂಧವನ್ನು ಸುಧಾರಿಸುತ್ತಾ ಬರುತ್ತಿದ್ದಾರೆ. ಹಿಂದೆ ಒಬಾಮ ಏನು ಹೇಳುತ್ತಾರೆ ಎಂದು ಕೇಳುವ ಸ್ಥಿತಿಯಲ್ಲಿ ವಿಶ್ವವಿದ್ದರೆ, ಇಂದು ಒಬಾಮ ಕೂಡಾ ಮೋದಿ ಏನು ಹೇಳುತ್ತಾರೆ ಎಂದು ಕಾತರದಿಂದ ಕಾಯುವ ಸ್ಥಿತಿ ನಿರ್ಮಾಣವಾಗಿದೆ. ಜಗತ್ತಿನಲ್ಲಿ ಭಾರತ ಬಲಿಷ್ಠ ದೇಶವಾಗುತ್ತಿದೆ ಎಂದು ಸಂಸದ  ನಳಿನ್‌ ಕುಮಾರ್ ಕಟೀಲ್ ಹೇಳಿದರು.
ಅವರು ಆ.೬ರಂದು ಗುರುವಾಯನಕೆರೆಯ ಹವ್ಯಕ ಭವನದಲ್ಲಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಇದರ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.
ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಪಕ್ಷ ಸೋಲು ಕಂಡಿದೆ. ಆದರೆ ನಂತರ ನಡೆದ ಚುನಾವಣೆಯಲ್ಲಿ ಬೆಳ್ತಂಗಡಿ ಸೇರಿದಂತೆ ದ.ಕ. ಜಿಲ್ಲೆಯಲ್ಲಿ ಬಿಜೆಪಿ ಪ್ರಥಮ ಸ್ಥಾನದಲ್ಲಿದೆ. ಗ್ರಾ.ಪಂ, ತಾ.ಪಂ. ಮತ್ತು ಜಿ.ಪಂ. ಚುನಾವಣೆಯಲ್ಲಿ ಪಕ್ಷ ಉತ್ತಮ ಸಾಧನೆ ಮಾಡಿದೆ. ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಒಂದನೇ ಸ್ಥಾನದಲ್ಲಿದ್ದು, ಮುಂದಿನ ಚುನಾವಣೆಯಲ್ಲಿ ಬೆಳ್ತಂಗಡಿಯಲ್ಲಿ ಬಿಜೆಪಿ ಶಾಸಕರು ಆಯ್ಕೆಯಾಗಿ ರಾಜ್ಯದಲ್ಲಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸರಕಾರ ಬರುವುದು ನಿಶ್ಚಿತ ಎಂದರು.
ಕರ್ನಾಟಕ ರಾಜ್ಯ ಸರಕಾರದ ಆಡಳಿತದಿಂದ ಜನ ಬೇಸತ್ತು ಹೋಗಿದ್ದಾರೆ. ಕೇಂದ್ರ ಸರಕಾರ ಮೋದಿ ನೇತೃತ್ವದಲ್ಲಿ 62 ಹೊಸ ಯೋಜನೆಯನ್ನು ಜಾರಿಗೊಳಿಸುವ ಮೂಲಕ ದೇಶದ ಅಭಿವೃದ್ಧಿಗೆ ಮಹತ್ವವಾದ ಕೊಡುಗೆ ನೀಡಿದೆ. ದ.ಕ. ಜಿಲ್ಲೆಯ ಎಲ್ಲಾ ಮನೆಗಳ ವಿದ್ಯುತ್ ಸಂಪರ್ಕಕ್ಕಾಗಿ ದೀನದಯಾಳ್ ಯೋಜನೆಯಲ್ಲಿ 600 ಕೋಟಿ ರೂ. ಬಿಡುಗಡೆ ಮಾಡಿದೆ. ದೇಶದ ಆರು ಕೋಟಿ ಬಿಪಿಎಲ್ ಪಡಿತರದಾರರಿಗೆ ಉಚಿತ ಗ್ಯಾಸ್ ಸಂಪರ್ಕವನ್ನು ನೀಡುವ ಮೂಲಕ ಹೊಸ ಇತಿಹಾಸವನ್ನು ಸೃಷ್ಠಿಸಿದೆ. 14ನೇ ಹಣಕಾಸು ಯೋಜನೆಯಲ್ಲಿ ಗ್ರಾ.ಪಂ.ಗಳಿಗೆ ನೇರ ಅನುದಾನ ನೀಡಿದೆ ಇಂತಹ ಅನೇಕ ಜನಪರ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡಿದ್ದು, ಇದನ್ನು ಜನರ ಮನೆ-ಮನೆಗೆ ತಲುಪಿಸುವ ಕಾರ್ಯವನ್ನು ಕಾರ್ಯಕರ್ತರು ಮಾಡಬೇಕು ಎಂದು ಕರೆ ನೀಡಿದರು. ಬೆಳ್ತಂಗಡಿ ತಾಲೂಕಿನಲ್ಲಿ ನೂತನ ಅಧ್ಯಕ್ಷ ರಂಜನ್ ಗೌಡ ಅವರು ಪಕ್ಷವನ್ನು ಸಮರ್ಥವಾಗಿ ಮುನ್ನಡೆಸಲಿದ್ದಾರೆ. ಅವರ ನೇತೃತ್ವದಲ್ಲಿ ಪಕ್ಷ ಬಲಿಷ್ಠಗೊಳ್ಳಲಿದ್ದು, ಕಾರ್ಯಕರ್ತರಲ್ಲಿ ನವ ಚೈತನ್ಯ ತುಂಬಲಿದೆ ಎಂದು ಹೇಳಿದರು.
ಬಿಜೆಪಿ ಅಧಿಕಾರಕ್ಕೆ ಬರುವುದನ್ನು ತಡೆಯಲು ಸಾಧ್ಯವಿಲ್ಲ: ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಅವರು ಮಾತನಾಡಿ ಬೆಳ್ತಂಗಡಿ ತಾಲೂಕಿನಲ್ಲಿ ಶಿಸ್ತಿನ ತಂಡ ರಚನೆಯಾಗಿ ತಾಲೂಕಿನಲ್ಲಿ, ಜಿಲ್ಲೆಯಲ್ಲಿ ಹಾಗೂ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವಲ್ಲಿ ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಇದಕ್ಕಾಗಿ ಕಾರ್ಯಕರ್ತರು ಪಣತೊಡಬೇಕು ಎಂದರು.
ಊರಿನಲ್ಲಿ ನರೇಂದ್ರ ಮೋದಿಗಳಾಬೇಕು : ಭಾಜಪ ಒಂದು ಧ್ಯೇಯಗೋಸ್ಕರ ದುಡಿಯುವ ಪಕ್ಷ, ಅಧಿಕಾರಕ್ಕಾಗಿ ನಮ್ಮ ಹೋರಾಟವಲ್ಲ, ದೇಶದ ಪ್ರಧಾನಿ ನರೇಂದ್ರ ಮೋದಿಯವರು ಉತ್ತಮ ಕೆಲಸ ಮಾಡುತ್ತಿದ್ದು, ದಿನದಲ್ಲಿ 18 ಗಂಟೆಗಳ ಕಾಲ ದುಡಿಯುತ್ತಿದ್ದಾರೆ. ಒಬ್ಬ ಪ್ರಧಾನಿಯಿಂದ ಈ ದೇಶದ ಪ್ರಗತಿ ಸಾಧ್ಯವಿಲ್ಲ, ಯಾವಾಗ ಕಾರ್ಯಕರ್ತ ಗ್ರಾಮದ ವಿಕಾಸದ ಚಿಂತನೆ ಮಾಡುತ್ತಾನೆ ಆಗ ದೇಶದ ವಿಕಾಸವಾಗುತ್ತದೆ. ಇದಕ್ಕಾಗಿ ನಾವು ನಮ್ಮ ಊರಿನಲ್ಲಿ ನರೇಂದ್ರ ಮೋದಿಯಾಗಬೇಕು ಎಂದು ಹೇಳಿದರು.
ಬಿಜೆಪಿ ಜಿಲ್ಲಾ ಮಾಜಿ ಅಧ್ಯಕ್ಷ ಪ್ರತಾಪಸಿಂಹ ನಾಯಕ್ ಅವರು ಮಾತನಾಡಿ ಬಲಿಷ್ಠ ದೇಶದ ನಿರ್ಮಾಣ ನಮ್ಮ ಕನಸು ಅದು ಈಡೇರುವ ತನಕ ನಾವು ಹೋರಾಟ ಮಾಡಬೇಕಾಗುತ್ತದೆ. ಅಧಿಕಾರ ಬರುತ್ತದೆ, ಹೋಗುತ್ತದೆ ಆದರೆ ನಾವು ಅಧಿಕಾರದಿಂದ ಇಳಿಯುವಾಗ ಆ ಸ್ಥಾನಕ್ಕೆ ಬೆಲೆ ಕೊಟ್ಟಿದ್ದೇವೆಯೇ ಎಂದು ಯೋಚಿಸಬೇಕು ಜನ ಸೇವೆಯೇ ನಮ್ಮ ಗುರಿಯಾಗಬೇಕು ಎಂದರು. ಮಾಜಿ ಶಾಸಕ ಕೆ. ಪ್ರಭಾಕರ ಬಂಗೇರ ಮಾತನಾಡಿ ಬೆಳ್ತಂಗಡಿ ಕ್ಷೇತ್ರದಲ್ಲಿ ಮತ್ತೊಮ್ಮೆ ಬಿಜೆಪಿ ಶಾಸಕರು ಆಯ್ಕೆಯಾಗಿ ಬರುವಲ್ಲಿ ನಾವೆಲ್ಲ ಸೇರಿ ಶ್ರಮಿಸಬೇಕು ಎಂದು ಹೇಳಿದರು. ಜಿ.ಪಂ. ಉಪಾಧ್ಯಕ್ಷೆ ಕಸ್ತೂರಿ ಪಂಜ ಮಾತನಾಡಿ ಶುಭ ಕೋರಿದರು. ನೂತನ ಅಧ್ಯಕ್ಷ ರಂಜನ್ ಜಿ. ಗೌಡ ಮಾತನಾಡಿ ಸಿಕ್ಕಿದ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಲು ಎಲ್ಲಾ ಕಾರ್ಯಕರ್ತರ ಪೂರ್ಣ ಸಹಕಾರ ಬೇಕು. ಯಾವುದೇ ಸಮಸ್ಯೆಗಳು ಬಂದಲ್ಲಿ ಪಕ್ಷದ ಕಚೇರಿಗೆ ಬಂದರೆ ಬಗೆ ಹರಿಸಲು ಪ್ರಯತ್ನಿಸುವುದಾಗಿ ತಿಳಿಸಿದರು. ಅಧ್ಯಕ್ಷತೆ ವಹಿಸಿದ್ದ ಬಿಜೆಪಿ ತಾಲೂಕು ಅಧ್ಯಕ್ಷ ಬಾಲಕೃಷ್ಣ ವಿ. ಶೆಟ್ಟಿಯವರು ತನ್ನ ಅಧಿಕಾರ ಅವಧಿಯಲ್ಲಿ ಪಕ್ಷದ ಎಲ್ಲಾ ಕಾರ್ಯಕರ್ತರು, ಪದಾಧಿಕಾರಿಗಳು ಸಂಘಟಿತರಾಗಿ ಪೂರ್ಣ ಸಹಕಾರ ನೀಡಿದ್ದಾರೆ ಎಂದು ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ಪಕ್ಷಕ್ಕೆ ಸೇರ‍್ಪಡೆ : ಈ ಸಂದರ್ಭದಲ್ಲಿ ಇಂದಬೆಟ್ಟು ಗ್ರಾ.ಪಂ. ಅಧ್ಯಕ್ಷೆ ನೇತ್ರಾವತಿ, ಬಂದಾರಿನ ರುಕ್ಮಯ ಪೂಜಾರಿ, ಶರತ್ ಮೊದಲಾದವರು ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿಗೆ ಸೇರ‍್ಪಡೆಗೊಂಡರು. ಸಂಜೀವ ಮಠಂದೂರು ಅವರು ನಿಯೋಜಿತ ಅಧ್ಯಕ್ಷರ ಹೆಸರನ್ನು ಘೋಷಿಸಿದರು. ನೂತನ ತಾಲೂಕು ಅಧ್ಯಕ್ಷ ರಂಜನ್ ಜಿ. ಗೌಡ ವಿವಿಧ ಮೋರ್ಚಾಗಳ ಅಧ್ಯಕ್ಷ, ಪ್ರಧಾನ ಕಾರ್ಯದರ್ಶಿಗಳ ಹೆಸರನ್ನು ಘೋಷಿಸಿದರು. ವೇದಿಕೆಯಲ್ಲಿ ತಾ. ಪಂ. ಉಪಾಧ್ಯಕ್ಷೆ ವೇದಾವತಿ, ಮಾಜಿ ಸಚಿವ ಗಂಗಾಧರ ಗೌಡ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷೆ ಶಾರದಾ ಆರ್. ರೈ, ಪ್ರಧಾನ ಕಾರ್ಯದರ್ಶಿ ಕ್ಯಾ| ಬ್ರಿಜೇಶ್ ಚೌಟ, ಸುದರ್ಶನ್ ಎಂ, ಕಾರ್ಯದರ್ಶಿ ಕೊರಗಪ್ಪ ನಾಯ್ಕ, ಜಿಲ್ಲಾ ವಕ್ತಾರ ಜಿತೇಂದ್ರ ಕೊಟ್ಟಾರಿ, ತಾಲೂಕು ಪ್ರಧಾನ ಕಾರ್ಯದರ್ಶಿಗಳಾದ ಸೀತಾರಾಮ ಬಿ.ಎಸ್. ಸ್ವಾಗತಿಸಿದರು, ಭಾಸ್ಕರ ಸಾಲ್ಯಾನ್ ಕಾರ್ಯಕ್ರಮ ನಿರೂಪಿಸಿ, ತಾಲೂಕು ಪ್ರಧಾನ ಕಾರ್ಯದರ್ಶಿ ಜಯಂತ ಕೋಟ್ಯಾನ್ ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.