ಧರ್ಮಸ್ಥಳದಲ್ಲಿ ರುಡ್‌ಸೆಟ್ ಸಂಸ್ಥೆಗಳ ನಿರ್ದೇಶಕರುಗಳ ವಾರ್ಷಿಕ ಸಮ್ಮೇಳನ : ಸಾಮಾಜಿಕ ಪರಿವರ್ತನೆಯೊಂದಿಗೆ ಆರ್ಥಿಕ ಪ್ರಗತಿಯ ರೂವಾರಿಗಳು ರುಡ್‌ಸೆಟ್ ಸಂಸ್ಥೆಗಳು.

rudsetಧರ್ಮಸ್ಥಳ : ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಸ್ಥಳದಲ್ಲಿ ಶ್ರೀ ಸನ್ನಿಧಿ ಅತಿಥಿಗೃಹದಲ್ಲಿ ಗುರುವಾರ ರುಡ್‌ಸೆಟ್ ಸಂಸ್ಥೆಗಳ ನಿರ್ದೇಶಕರುಗಳ ವಾರ್ಷಿಕ ಸಮ್ಮೇಳನವನ್ನು ಉದ್ಘಾಟಿಸಿದರು.
ಕೇಂದ್ರ ಸರ್ಕಾರದ ಗ್ರಾಮಾಭಿವೃದ್ಧಿ ಸಚಿವಾಲಯದ ಉಪಕಾರ್ಯದರ್ಶಿ ಟಿ.ಸಿ. ನೌತಿಯಾಲ್, ಕೆನರಾ ಬ್ಯಾಂಕಿನ ಕಾರ್ಯನಿರ್ವಾಹಕ ನಿರ್ದೇಶಕ ದೀನಬಂಧು ಮಹಾಪಾತ್ರ ಉಪಸ್ಥಿತರಿದ್ದರು.
ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ಸಿಂಡಿಕೇಟ್ ಬ್ಯಾಂಕ್ ಮತ್ತು ಕೆನರಾ ಬ್ಯಾಂಕ್ ಸಹಭಾಗಿತ್ವದೊಂದಿಗೆ ಪ್ರಾರಂಭಿಸಲಾದ ಗ್ರಾಮಾಭಿವೃದ್ಧಿ ಮತ್ತು ಸ್ವ-ಉದ್ಯೋಗ ತರಬೇತಿ ಕೇಂದ್ರಗಳು ಸ್ಪೂರ್ತಿಯ ಸೆಳೆಯಾಗಿದ್ದು ಇದರ ಯಶಸ್ಸನ್ನು ಕೇಂದ್ರ ಸರ್ಕಾರ ಗಮನಿಸಿ ಅದೇ ಮಾದರಿಯಲ್ಲಿ ೫೨೩ ಆರ್‌ಸೆಟಿಗಳನ್ನು ಪ್ರಾರಂಭಿಸಿದೆ. ರುಡ್‌ಸೆಟ್ ನಾಯಕತ್ವದಲ್ಲಿ ಅದೇ ಮಾದರಿಯಲ್ಲಿ ಆರ್‌ಸೆಟಿಗಳು ಕೂಡಾ ಕೆಲಸ ಮಾಡುತ್ತಿವೆ. ಉಭಯ ಸಂಸ್ಥೆಗಳು ಸಾಮಾಜಿಕ ಪರಿವರ್ತನೆಯೊಂದಿಗೆ ಆರ್ಥಿಕ ಪ್ರಗತಿಯ ರೂವಾರಿಗಳಾಗಿವೆ ಎಂದು ಕೇಂದ್ರ ಸರ್ಕಾರದ ಗ್ರಾಮಾಭಿವೃದ್ಧಿ ಸಚಿವಾಲಯದ ಉಪಕಾರ್ಯದರ್ಶಿ ಟಿ.ಸಿ. ನೌತಿಯಾಲ್ ತಿಳಿಸಿದರು. ಅವರು ಧರ್ಮಸ್ಥದಲ್ಲಿ ಶ್ರೀ ಸನ್ನಿಧಿ ಅತಿಥಿಗೃಹದಲ್ಲಿ ಗುರುವಾರ ರುಡ್‌ಸೆಟ್ ಸಂಸ್ಥೆಗಳ ನಿರ್ದೇಶಕರುಗಳ ವಾರ್ಷಿಕ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.
ಸ್ವ-ಉದ್ಯೋಗಿಗಳಿಗೆ ಬ್ಯಾಂಕ್‌ಗಳು ನೀಡುವ ಸಾಲದ ಮೊತ್ತವನ್ನು ಹೆಚ್ಚಿಸಬೇಕು ಎಂದು ಅವರು ಕೋರಿದರು. ಯುವ ಜನತೆಯ ಪ್ರಗತಿಗಾಗಿ ಅನೇಕ ಹೊಸ ಕಾರ್ಯಕ್ರಮಗಳನ್ನು ಅಳವಡಿಸಲು ಉದ್ದೇಶಿಸಲಾಗಿದೆ ಎಂದು ಹೆಗ್ಗಡೆಯವರು ಹೇಳಿದರು. ರುಡ್‌ಸೆಟ್ ಸಂಸ್ಥೆಗಳ ಕೇಂದ್ರೀಯ ಕಚೇರಿಯ ಕಾರ್ಯನಿರ್ವಾಹಕ ನಿರ್ದೇಶಕ ವಿ.ಜೆ. ಅರುಣ್ ಸ್ವಾಗತಿಸಿದರು. ಉಜಿರೆ ರುಡ್‌ಸೆಟ್ ಸಂಸ್ಥೆಯ ನಿರ್ದೇಶಕ ಅಜಿತ್ ಕೆ. ರಾಜಣ್ಣವರ್ ಧನ್ಯವಾದವಿತ್ತರು. ಅನುಸೂಯ ಕಾರ್ಯಕ್ರಮ ನಿರ್ವಹಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.