ವೇಣೂರು: ಆ.31ರಂದು ಬೃಹತ್ ಸ್ವಚ್ಛತಾ ಅಭಿಯಾನ ಪೂರ್ವಭಾವಿ ಸಮಾಲೋಚನಾ ಸಭೆ

venur ವೇಣೂರು: ವೇಣೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಛ ಭಾರತ್ ಅಭಿಯಾನ್ ಯೋಜನೆಯಡಿ ಆ. 31ರಂದು ಜರಗಲಿರುವ ಬೃಹತ್ ಸ್ವಚ್ಛತಾ ಅಭಿಯಾನದ ಪೂರ್ವಭಾವಿ ಸಮಾಲೋಚನಾ ಸಭೆಯು ವೇಣೂರು ಗ್ರಾ.ಪಂ. ಸಭಾಂಗಣದಲ್ಲಿ ಜರಗಿತು.
ಸಭೆಯ ಅಧ್ಯಕ್ಷತೆಯನ್ನು ಗ್ರಾ.ಪಂ. ಅಧ್ಯಕ್ಷೆ ಮೋಹಿನಿ ವಿ. ಶೆಟ್ಟಿ ವಹಿಸಿದ್ದರು. ಗ್ರಾ.ಪಂ. ಉಪಾಧ್ಯಕ್ಷ ಅರುಣ್ ಕ್ರಾಸ್ತ ಅವರು ಕಾರ್ಯಕ್ರಮದ ರೂಪುರೇಶೆಯ ಬಗ್ಗೆ ಸವಿವರ ಮಾಹಿತಿ ನೀಡಿದರು. ಗ್ರಾ.ಪಂ. ಮಾಜಿ ಅಧ್ಯಕ್ಷ ಸತೀಶ್ ಹೆಗ್ಡೆ ಸೇರಿದಂತೆ ಪಂಚಾಯತು ವ್ಯಾಪ್ತಿಯ ವಿವಿಧ ಸಂಘ ಸಂಸ್ಥೆಯ ಪ್ರತಿನಿಧಿಗಳು, ಇಲಾಖಾಧಿಕಾರಿಗಳು, ಶಾಲಾ ಮುಖ್ಯೋಪಾಧ್ಯಾರು, ಶಾಲಾಭಿವೃದ್ಧಿ ಸಮಿತಿ ಪದಾಧಿಕಾರಿಗಳು, ಅಂಗನವಾಡಿ ಆರೋಗ್ಯ ಮತ್ತು ಆಶಾ ಕಾರ್ಯಕರ್ತೆಯರು, ವರ್ತಕರು ಹಾಗೂ ಪಂ. ಸದಸ್ಯರು ಉಪಸ್ಥಿತರಿದ್ದರು.
ಪಂ. ಅಭಿವೃದ್ಧಿ ಅಧಿಕಾರಿ ಕೆ. ವೆಂಕಟಕೃಷ್ಣರಾಜ ಸ್ವಾಗತಿಸಿ ಪಂ. ಸದಸ್ಯ ರಾಜೇಶ್ ಪೂಜಾರಿ ಮೂಡುಕೋಡಿ ವಂದಿಸಿದರು. ಪಂ. ಕಾರ್ಯದರ್ಶಿ ಲಕ್ಷ್ಮೀನಾರಾಯಣ ಕೆ. ಹಾಗೂ ಸಿಬ್ಬಂದಿ ಸಹಕರಿಸಿದರು.

Advt_NewsUnder_
Advt_NewsUnder_
Advt_NewsUnder_

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.