ಧರ್ಮಸ್ಥಳ : ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಬಿಡುಗಡೆ ಸಮಾರಂಭ

SDMಧರ್ಮಸ್ಥಳ : ಗಿನ್ನೆಸ್ ಪ್ರಶಸ್ತಿ ಪುರಸ್ಕೃತ ಸಂಸ್ಥೆ ಶಾಂತಿವನ ಟ್ರಸ್ಟ್ (ರಿ) ಶ್ರೀ.ಕ್ಷೇ.ಧರ್ಮಸ್ಥಳ ಮತ್ತು ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಸಾ.ಶಿ ಇಲಾಖೆ, ಕರ್ನಾಟಕ ಸರ್ಕಾರ ಇವರ ಸಹಯೋಗದಲ್ಲಿ 24ನೇ ವರ್ಷದ ಜ್ಞಾನ ಗಂಗಾ ಮತ್ತು ಜ್ಞಾನ ಸುಧಾ ಶಾಲೆಗಳ 2016ನೇ ಸಾಲಿನ ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಬಿಡುಗಡೆ ಸಮಾರಂಭವು ಧರ್ಮಸ್ಥಳ ಮಹೋತ್ಸವ ಸಭಾಭವನದಲ್ಲಿ ಇಂದು ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ ವೀರೇಂದ್ರ ಹೆಗ್ಗಡೆಯವಯರು ವಹಿಸಿದ್ದರು. ಬೆಂಗಳೂರು ಚಲನಚಿತ್ರ ನಿರ್ದೇಶಕಿ ಮತ್ತು ಖ್ಯಾತ ಅಂಕಣಕಾರರಾದ ಶ್ರೀಮತಿ ರೂಪಾ ಅಯ್ಯರ್ ಪುಸ್ತಕ ಬಿಡುಗಡೆ ಮಾಡಿದರು.
ಮುಖ್ಯ ಅತಿಥಿಗಳಾಗಿ ಶ್ರೀ.ಕ್ಷೇ.ಧರ್ಮಸ್ಥಳ ಶಾಂತಿವನ ಟ್ರಸ್ಟ್‌ನ ಟ್ರಸ್ಟಿ ಶ್ರೀಮತಿ ಹೇಮಾವತಿ ವೀ.ಹೆಗ್ಗಡೆ, ಶ್ರೀ.ಕ್ಷೇ.ಧರ್ಮಸ್ಥಳ ಶಾಂತಿವನ ಟ್ರಸ್ಟ್‌ನ ಟ್ರಸ್ಟಿ ಡಿ.ಹಷೇಂದ್ರ ಕುಮಾರ್ ಆಗಮಿಸಿದ್ದರು. ಶಾಂತಿವನ ಟ್ರಸ್ಟ್ ಕಾರ್ಯದರ್ಶಿ ಬಿ.ಸೀತಾರಾಮ ತೋಳ್ಪಾಡಿತ್ತಾಯ, ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ನಿರ್ದೇಶಕ ಡಾ.ಐ ಶಶಿಕಾಂತ್ ಜೈನ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.