ಮಕ್ಕಳಲ್ಲಿನ ಪ್ರತಿಭೆ ಅನಾವರಣಕ್ಕೆ ನಿರಂತರ ಪ್ರೋತ್ಸಾಹ ಅಗತ್ಯ: ಶಾಹುಲ್ ಹಮೀದ್

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

venur prathiba karanji copyವೇಣೂರು:  ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಕಲೋತ್ಸವ-2016

ವೇಣೂರು ಪ್ರೌಢ ಶಾಲೆ ಉತ್ತಮ ಶಿಕ್ಷಣ ನೀಡುವ ಶಾಲೆಯಾದ್ದರಿಂದ ಕಾರ್ಯಕ್ರಮದ ಯಶಸ್ವಿ ಸಾಧ್ಯವಾಗಿದೆ. ಮುಂದಿನ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿಯು ವಗ್ಗ ಪ.ಪೂ. ಕಾಲೇಜಿನಲ್ಲಿ ಜರಗಲಿದೆ.
– ರಾಧಾಕೃಷ್ಣ ಭಟ್, ಪ್ರತಿಭಾ ಕಾರಂಜಿ ಜಿಲ್ಲಾ ಮಾರ್ಗದರ್ಶಿ ಅಧಿಕಾರಿ

  ವೇಣೂರು: ಶಿಕ್ಷಕರ ಹಾಗೂ ಪೋಷಕರ ನಿರಂತರ ಪ್ರೋತ್ಸಾಹದಿಂದ ಮಾತ್ರ ಮಕ್ಕಳ ಪ್ರತಿಭೆ ಕಾರಂಜಿಯಾಗಿ ಹೊರಹೊಮ್ಮಲು ಸಾಧ್ಯ ಎಂದು ದ.ಕ. ಜಿ.ಪಂ. ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್ ಅಭಿಪ್ರಾಯಪಟ್ಟರು.
ಅವರು ಆ.22ರಂದು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ-ಕ್ಷೇತ್ರ ಸಂಪನ್ಮೂಲ ಕೇಂದ್ರ ಬೆಳ್ತಂಗಡಿ, ಪ್ರತಿಭಾ ಕಾರಂಜಿ ನಿರ್ವಹಣಾ ಸಮಿತಿ ಬೆಳ್ತಂಗಡಿ ಮತ್ತು ಸ.ಪ.ಪೂ. ಕಾಲೇಜು ಪ್ರೌಢ ಶಾಲಾ ವಿಭಾಗ ವೇಣೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ವೇಣೂರು ಪ್ರೌಢ ಶಾಲಾ ಸಭಾಂಗಣದಲ್ಲಿ ಜರಗಿದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಕಲೋತ್ಸವ-2016ರ ಉದ್ಘಾಟನೆಯನ್ನು ಬ್ಯಾಂಡ್ ಬಾರಿಸುವ ಮೂಲಕ ನೆರವೇರಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವೇಣೂರು ಗ್ರಾ.ಪಂ. ಅಧ್ಯಕ್ಷೆ ಮೋಹಿನಿ ವಿ. ಶೆಟ್ಟಿ ವಹಿಸಿದ್ದರು. ನಾರಾವಿ ಕ್ಷೇತ್ರದ ಜಿ.ಪಂ. ಸದಸ್ಯ ಪಿ. ಧರಣೇಂದ್ರ ಕುಮಾರ್ ಮಾತನಾಡಿ, ಗ್ರಾಮೀಣ ಭಾಗದ ಮಕ್ಕಳಲ್ಲಿ ಅದ್ಭುತ ಪ್ರತಿಭೆಗಳಿವೆ. ಇದು ಅಂತಹ ಪ್ರತಿಭೆಗಳನ್ನು ಗುರುತಿಸಲು ಉತ್ತಮ ವೇದಿಕೆಯಾಗಿದೆ ಎಂದರು. ಅಳದಂಗಡಿ ಕ್ಷೇತ್ರದ ಜಿ.ಪಂ. ಸದಸ್ಯ ಶೇಖರ ಕುಕ್ಕೇಡಿ ಮಾತನಾಡಿ, ಬಡವರು ಹಾಗೂ ಗ್ರಾಮೀಣ ಭಾಗದ ಮಕ್ಕಳು ಸಾಂಸ್ಕೃತಿಕ ಕ್ಷೇತ್ರದಲ್ಲಿ ಬೆಳವಣಿಗೆ ಕಾಣಲು ಪ್ರತಿಭಾ ಕಾರಂಜಿ ಸಹಕಾರಿ ಎಂದು ಹೇಳಿದರು. ಪ್ರತಿಭಾ ಕಾರಂಜಿ-2016ರ ಜಿಲ್ಲಾ ನೋಡೆಲ್ ಅಧಿಕಾರಿ ರಾಧಾಕೃಷ್ಣ ಭಟ್ ಶುಭ ಕೋರಿದರು. ವೇಣೂರು ಪ್ರೌಢ ಶಾಲಾ ವಿಭಾಗದ ಉಪ ಪ್ರಾಂಶುಪಾಲ ಸುಕೇಶ್ ಕೆ. ಪ್ರಾಸ್ತಾವಿಕವಾಗಿ ಮಾತನಾಡಿದರು.
ಸಮ್ಮಾನ: ವೇಣೂರು ಪ್ರೌಢ ಶಾಲೆಯಿಂದ ವಯೋ ನಿವೃತ್ತಿ ಹೊಂದಲಿರುವ ಶಿಕ್ಷಕಿ ಮೊಂತಿ ರೆಜಿನಾ ಡಿಮೆಲ್ಲೊ ಹಾಗೂ ಕಳೆದ ಸಾಲಿನ ಎಸ್‌ಎಸ್‌ಎಲ್‌ಸಿಯಲ್ಲಿ ಸಾಧನೆಗೈದ ನಿಶಾ ಅವರನ್ನು ಸಮ್ಮಾನಿಸಲಾಯಿತು.
ವೇಣೂರು ಗ್ರಾ.ಪಂ. ಉಪಾಧ್ಯಕ್ಷ ಅರುಣ್ ಕ್ರಾಸ್ತ, ವೇಣೂರು ವಿದ್ಯೋದಯ ಸಮೂಹ ಸಂಸ್ಥೆಯ ಸಂಚಾಲಕ ಕೆ. ಶಿವರಾಮ ಹೆಗ್ಡೆ, ವೇಣೂರು ಸ.ಪ.ಪೂ. ಕಾಲೇಜಿನ ಪ್ರಾಂಶುಪಾಲ ಚಂದ್ರು ಎಂ.ಎನ್., ತಾಲೂಕು ಪ್ರೌಢ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರಮೇಶ್ ಮಯ್ಯ, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪ್ರಭಾಕರ ಹೆಗ್ಡೆ ಹಟ್ಟಾಜೆ, ತಾಲೂಕು ಪ್ರಾ. ಶಾಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ಕೊಕ್ರಾಡಿ, ತಾಲೂಕು ಪ್ರತಿಭಾ ಕಾರಂಜಿ ಸ್ಪರ್ಧೆಯ ಮಾರ್ಗದರ್ಶಿ ಅಧಿಕಾರಿ ರಮೇಶ್ ಗೌಡ, ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷೆ ಶೀಲಾ ಎಸ್. ಹೆಗ್ಡೆ, ಸ.ಉ.ಪ್ರಾ. ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸತೀಶ್ ಕುಮಾರ್, ಬಜಿರೆ ವಲಯ ಸಿಆರ್‌ಪಿ ಆರತಿ, ಉದ್ಯಮಿ ಗಳಾದ ಜಿನರಾಜ ಜೈನ್, ಲಾರೆನ್ಸ್ ಲೋಬೊ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಪ್ರಜ್ಞಾ ಮತ್ತು ಬಳಗ ಪ್ರಾರ್ಥಿಸಿ ಬೆಳ್ತಂಗಡಿ ಪ್ರಭಾರ ಶಿಕ್ಷಣಾಧಿಕಾರಿ ತಾರಾಕೇಸರಿ ಸ್ವಾಗತಿಸಿ ವೇಣೂರು ಪ್ರೌಢ ಶಾಲೆಯ ಹಿರಿಯ ಶಿಕ್ಷಕಿ ಪೂರ್ಣಿಮಾ ಜೈನ್ ವಂದಿಸಿ ದರು. ಶರತ್ ತುಳುಪುಳೆ ಹಾಗೂ ಜ್ಯೋತಿ ಜ್ಯೂಲಿಯೇಟ್ ಡಿಸೋಜ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.