ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ವಿಶೇಷ ಶೈಕ್ಷಣಿಕ ತರಬೇತಿ

ಬೆಳ್ತಂಗಡಿ :  ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಓದುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಪ್ರಥಮ ಪಿಯುಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಅ.8ರಂದು ವಿಶೇಷ ಶೈಕ್ಷಣಿಕ ತರಭೇತಿ ತರಗತಿಗಳನ್ನು ಸರ್ಕಾರ ಆಯೋಜಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯ ನಾಲ್ಕು ನೋಡಲ್ ಕೇಂದ್ರಗಳಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು, ಬೆಳ್ತಂಗಡಿ ಒಂದಾಗಿದ್ದು, ಬೆಳ್ತಂಗಡಿ ತಾಲೂಕಿನ ಬೇರೆ ಬೇರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರುಗಳು ಇಂಗ್ಲೀಷ್, ಅರ್ಥಶಾಸ್ತ್ರ, ಲೆಕ್ಕಶಾಸ್ತ್ರ, ಬೌತಶಾಸ್ತ್ರ, ರಸಾಯನಶಾಸ್ತ್ರ, ಜೀವಶಾಸ್ತ್ರ ಮತ್ತು ಗಣೀತ ವಿಷಯಗಳೋಲ್ಲಿ ಬೋಧನೆ ಮಾಡಲಿದ್ದು, ಮುಂಬರುವ ಪರೀಕ್ಷೆಗಳಿಗೆ ಸಜ್ಜುಗೊಳಿಸಲು ತಯಾರಿ ಮಾಡಲಾಗುತ್ತಿದೆ. ಪ್ರಥಮ ಮತ್ತು ದ್ವಿತೀಯ ಪಿಯುಸಿಯ ಪ.ಜಾ ಮತ್ತು ಪ.ಪಂ ದ ವಿದ್ಯಾರ್ಥಿಗಳಿಗೆ ಈ ತರಬೇತಿ ಕಡ್ಡಾಯವಾಗಿದ್ದು, ಇದರ ಸದುಪಯೋಗ ಪಡಿಸಿಕೊಳ್ಳಲು ಸರ್ಕಾರಿ ಪದವಿ ಪೂರ್ವ ಕಾಲೇಜಿನ ನೋಡಲ್ ಕೇಂದ್ರದ ಅಧಿಕಾರಿಯಾಗಿರುವ ಪ್ರಾಂಶುಪಾಲರು ಮನವಿ ಮಾಡಿಕೊಂಡಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬೇಕಾದ ಸಂಪರ್ಕ ಸಂಖ್ಯೆ : 8970497575

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.