ಹೊಸಂಗಡಿ ಗ್ರಾ.ಪಂ.ಗೆ ಗಾಂಧಿಗ್ರಾಮ ಪುರಸ್ಕಾರ ಪ್ರದಾನ

Advt_NewsUnder_1
Advt_NewsUnder_1

hosangady panchayath gandi grama puraskara copyಹೊಸಂಗಡಿ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ ವತಿಯಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿನ ತ್ರಿಪುರವಾಸಿನಿ ಅಡಿಟೋರಿಯಂನಲ್ಲಿ ಅ.2ರಂದು ಜರಗಿದ ಗಾಂಧಿ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಹೊಸಂಗಡಿ ಗ್ರಾ.ಪಂ.ಗೆ ಗಾಂಧಿ ಗ್ರಾಮ ಪುರಸ್ಕಾರ ಪ್ರದಾನ ಮಾಡಲಾಯಿತು.
ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 5 ಜಿಲ್ಲೆಗಳು, 20 ತಾಲೂಕುಗಳು ಮತ್ತು 1000 ಗ್ರಾ.ಪಂ.ಗಳನ್ನು ಬಯಲುಮುಕ್ತ ಬಹಿರ್ದೆಸೆ ಗ್ರಾಮ ಎಂದು ಘೋಷಣೆ ಮಾಡಿದರು. ಈ ಸಂದರ್ಭದಲ್ಲಿ ದ.ಕ. ಜಿಲ್ಲೆಯ 5 ಗ್ರಾಮ ಪಂಚಾಯತುಗಳಿಗೆ ಗಾಂಧಿ ಗ್ರಾಮ ಪುರಸ್ಕಾರ ನೀಡಿ ಗೌರವಿಸಲಾಯಿತು.
ಗ್ರಾಮೀಣಾಭಿವೃದ್ಧಿ ಸಚಿವ ಎಚ್.ಕೆ. ಪಾಟೀಲ್, ಕೇಂದ್ರ ಸಚಿವ ರಮೇಶ್ ಜಿಗಜಿಣಗಿ, ವಿಧಾನ ಪರಿಷತ್ ಸದಸ್ಯ ಐವನ್ ಡಿ ಸೋಜ ದ.ಕ.ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಪ್ರಶಸ್ತಿ ಪಡೆಯಲು ತೆರಳಿದ್ದ ನಿಯೋಗದಲ್ಲಿ ಹೊಸಂಗಡಿ ಗ್ರಾ.ಪಂ. ಅಧ್ಯಕ್ಷೆ ಹೇಮಾವಸಂತ್, ಜಿ.ಪಂ. ಸದಸ್ಯ ಪಿ. ಧರಣೇಂದ್ರ ಕುಮಾರ್, ಹೊಸಂಗಡಿ ಗ್ರಾ.ಪಂ.ನ ಅಭಿವೃದ್ಧಿ ಅಧಿಕಾರಿ ಗಣೇಶ್ ಶೆಟ್ಟಿ, ವಿದ್ಯಾನಂದ ಜೈನ್, ಇಸ್ಮಾಯಿಲ್ ಕೆ. ಪೆರಿಂಜೆ, ಪಂ. ಸದಸ್ಯರಾದ ಶ್ರೀಪತಿ ಉಪಾಧ್ಯಾಯ, ಅಕ್ಬರ್ ಆಲಿ ಹಾಗೂ ಪಂ. ಸಿಬ್ಬಂದಿ ಇದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.