ಉಜಿರೆ : ವಿಶ್ವದಾದ್ಯಂತ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಜನಪ್ರಿಯತೆಯನ್ನು ಪಡೆಯುತ್ತಿರುವ ಸಂದರ್ಭದಲ್ಲಿ ಸೌತ್ ಕೋರಿಯಾದ ವಾಂಕ್ ವಾಂಗ್ ಡಿಜಿಟಲ್ ವಿಶ್ವವಿದ್ಯಾಲಯವು ಭಾರತದ ಮೊತ್ತ ಮೊದಲೆನೆಯ ಶ್ರೀ.ಧ. ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಮಹಾವಿದ್ಯಾಲಯದೊಂದಿಗೆ ಸಂಶೋಧನೆ ಶೈಕ್ಷಣಿಕ ಚಟುವಟಿಕೆಗಳು ಮತ್ತು ಚಿಕಿತ್ಸೆಗಳ ವಿಷಯದಲ್ಲಿ ಒಡಂಬಡಿಕೆಯನ್ನು 5 ವರ್ಷಗಳಿಗೆ ನವೀಕರಿಸಲು ಹಾಗೂ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಸಮ್ಮೇಳನದಲ್ಲಿ ಯೋಗ ಮತ್ತು ಪ್ರಕೃತಿ ಚಿಕಿತ್ಸೆಯ ಬಗ್ಗೆ ಶಿಖರ ಉಪನ್ಯಾಸ ನೀಡಲು, ಕಾಲೇಜಿನ ಪ್ರಾಂಶುಪಾಲ ಹಾಗೂ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ಪ್ರಶಾಂತ್ ಶೆಟ್ಟಿ ಅ. 04 ರಿಂದ 12 ರವರೆಗೆ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.