ಕಾಶಿಪಟ್ಣ: ಶ್ರೀ ಆದಿಶಕ್ತಿ ಮಹಾಮ್ಮಾಯಿ ಅಮ್ಮನವರ ದೇವಸ್ಥಾನ ಬಡಕೋಡಿ ಕಾಶಿಪಟ್ಣ ಕ್ಷೇತ್ರವನ್ನು ಸುಮಾರು 1 ಕೋಟಿ ರೂ. ಗಳಿಗೂ ಅಧಿಕ ಮೊತ್ತದಲ್ಲಿ ಜೋರ್ಣೋದ್ಧಾರಗೊಳಿಸಲು ನಿರ್ಧರಿಸಲಾಗಿದ್ದು ಆ ಪ್ರಯುಕ್ತ ಶಿಲಾಮಯ ಗರ್ಭಗುಡಿ ನಿರ್ಮಾಣಕ್ಕೆ ಶಿಲಾನ್ಯಾಸ ಅ. 16 ರಂದು ನಡೆಯಲಿದೆ ಎಂದು ಸಮಿತಿಯ ಕಾರ್ಯಾಧ್ಯಕ್ಷ ಸತೀಶ್ ಕೆ, ಪ್ರಧಾನ ಸಂಚಾಲಕ ಶ್ರೀಪತಿ ಉಪಾಧ್ಯಾಯ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದರು.
ಗೋಷ್ಟಿಯಲ್ಲಿ ಸಮಿತಿ ಪ್ರ. ಕಾರ್ಯದರ್ಶಿ ಸಂತೋಷ್ ಕುಮಾರ್ ಲಾಲ, ಆಡಳಿತ ಸಮಿತಿ ಅಧ್ಯಕ್ಷ ಲಿಂಗಪ್ಪ ನಾಯ್ಕ ಉಪಸ್ಥಿತರಿದ್ದರು.