ಅ.15: ರಾಷ್ಟ್ರಪ್ರಶಸ್ತಿ ಪುರಸ್ಕೃತ ಪ್ರಭಾಕರ ಹೆಗ್ಡೆಯವರಿಗೆ ಸನ್ಮಾನ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

vnr sanmana pressmeet copy   ಪತ್ರಿಕಾಗೋಷ್ಠಿ

ಬೆಳ್ತಂಗಡಿ: ಪ್ರಗತಿಪರ ಕೃಷಿಕರು, ಕಲಾವಿದರು. ಕ್ರೀಡಾಕ್ಷೇತ್ರದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿರುವ ಶಿಕ್ಷಕ ಪ್ರಭಾಕರ ಹೆಗ್ಡೆಯವರಿಗೆ ಶಿಕ್ಷಣ ಕ್ಷೇತ್ರದಲ್ಲಿ ರಾಷ್ಟ್ರಪ್ರಶಸ್ತಿ ಪಡೆದುಕೊಂಡಿರುವುದು ಊರಿಗೆ ಹೆಮ್ಮೆ ಎನಿಸಿದೆ. ಈಗಾಗಿ ಅ.15ರಂದು ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಾಗರಿಕ ಸನ್ಮಾನ ಸಮಿತಿ ವತಿಯಿಂದ ಸನ್ಮಾನಿಸಲು ನಿರ್ಧರಿಸಲಾಗಿದೆ ಎಂದು ಸಮಿತಿ ಅಧ್ಯಕ್ಷ ಪಿ. ಧರಣೇಂದ್ರ ಕುಮಾರ್ ಹೇಳಿದರು.
ಅವರು ಅ.12ರಂದು ಬೆಳ್ತಂಗಡಿ ಪತ್ರಿಕಾ ಭವನದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಸಮಾರಂಭದ ಉದ್ಘಾಟನೆಯನ್ನು ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ್ ಅಜಿಲರು ನೆರವೇರಿಸಲಿದ್ದು, ಅರಣ್ಯ ಸಚಿವ ಬಿ. ರಮಾನಾಥ ರೈ ಅಭಿನಂದನೆ ಸಲ್ಲಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ದ.ಕ. ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಸಾಹುಲ್ ಹಮೀದ್, ನವದೆಹಲಿ ರಾಷ್ಟ್ರೀಯ ಮಾನವ ಹಕ್ಕುಗಳ ಸಮಿತಿ ಅಧ್ಯಕ್ಷ ರಾಬರ್ಟ್ ಡಿಸೋಜ, ವೇಣೂರು ವಿದ್ಯೋದಯ ಸಮೂಹ ಸಂಸ್ಥೆಯ ಅಧ್ಯಕ್ಷ ಕೆ. ಶಿವರಾಮ ಹೆಗ್ಡೆ, ದ.ಕ. ಜಿಲ್ಲಾ ಬಿಜೆಪಿ ಯುವಮೋರ್ಚಾದ ಅಧ್ಯಕ್ಷ ನ್ಯಾಯವಾದಿ ಹರೀಶ್ ಪೂಂಜ, ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತಾಧಿಕಾರಿ ಜಯಕೀರ್ತಿ ಜೈನ್ ಹಾಗೂ ಹಲವು ಗಣ್ಯರು ಭಾಗವಹಿಸಲಿದ್ದಾರೆ ಅಪರಾಹ್ನ ೨.೩೦ರಿಂದ ವೇಣೂರು ಶ್ರೀರಾಮ ಭಜನಾ ಮಂದಿರದ ಬಳಿಯಿಂದ ಭವ್ಯ ಮೆರವಣಿಗೆ ಹೊರಟು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಭಾಕಾರ್ಯಕ್ರಮ ಜರಗಲಿದೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ನಾಗರಿಕ ಸನ್ಮಾನ ಸಮಿತಿ ಕಾರ್ಯದರ್ಶಿ ಮಾರ್ಕ್ ಪಿರೇರಾ, ಉಪಾಧ್ಯಕ್ಷ ಭರತ್‌ರಾಜ್ ಪಾಪುದಡ್ಕ, ಸತೀಶ್ ಹೆಗ್ಡೆ, ಅರವಿಂದ ಶೆಟ್ಟಿ, ಪ್ರದೀಪ್ ಕುಮಾರ್ ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.