ಕೊಲ್ಪೆದಬೈಲು ಪತ್ನಿಯ ಮೇಲೆ ಹಲ್ಲೆ ನಡೆಸಿ ಪತಿ ಆತ್ಮಹತ್ಯೆಗೆ ಶರಣು

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

  ಮಾಲಾಡಿ : ಮಾಲಾಡಿ ಗ್ರಾಮದ ಕೊಲ್ಪೆದಬೈಲು ಎಂಬಲ್ಲಿ ಕೌಟುಂಬಿಕ ವಿಚಾರದಲ್ಲಿ ವೈಮನಸ್ಸಿನಿಂದ ಪತಿ-ಪತ್ನಿ ನಡುವೆ ಜಗಳವಾಗಿದ್ದು, ಪತಿ ಶಾಜಿ(44) ಪತ್ನಿ ಮೋಳಿಗೆ ಮಾರಣಾಂತಿಕ ಹಲ್ಲೆ ನಡೆಸಿ, ಪತಿ ಅ.21ರಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅ.20ರಂದು ಶಾಜಿ ಮತ್ತು ಮೋಳಿ ನಡುವೆ ಕೌಂಟುಬಿಕ ವಿಚಾರದಲ್ಲಿ ವೈಮನಸ್ಸು ನಡೆದಿದ್ದು, ಶಾಜಿಯವರು ಅಮಲು ಪದಾರ್ಥ ಸೇವಿಸಿ ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದರು. ಈ ಕುರಿತು ಮೋಳಿ ಪುಂಜಾಲಕಟ್ಟೆ ಪೋಲಿಸ್ ಠಾಣೆಗೆ ದೂರು ನೀಡಿದ್ದು, ಅ.21ರಂದು ಶಾಜಿಯವರ ಮೇಲೆ ಪ್ರಕರಣ ದಾಖಲಾಗಿತ್ತು.
ಪ್ರಕರಣ ದಾಖಲಾದ ದಿನವೇ ಸಂಜೆ ವೇಳೆ ಶಾಜಿಯು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ.
ಪುಂಜಾಲಕಟ್ಟೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.