ಪ್ರಾಂಶುಪಾಲರ ಮೇಲೆ ಹಲ್ಲೆ: ಸೂಕ್ತ ಕ್ರಮಕ್ಕೆ ಕೆಥೋಲಿಕ್ ಸಭಾ ಬೆಳ್ತಂಗಡಿ ವಲಯ ಒತ್ತಾಯ

Advt_NewsUnder_1
Advt_NewsUnder_1

                Craistha samaja copy

ಬೆಳ್ತಂಗಡಿ : ಮಂಗಳೂರು ನಗರದ ಪ್ರತಿಷ್ಠಿತ ಮಿಲಾಗ್ರಿಸ್ ಕಾಲೇಜಿನ ಪ್ರಾಂಶುಪಾಲರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಆರೋಪಿಯನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಕೆಥೋಲಿಕ್ ಸಭಾ ಮಂಗಳೂರು ಪ್ರದೇಶ ಬೆಳ್ತಂಗಡಿ ವಲಯ ಅಧ್ಯಕ್ಷ ಅರುಣ್ ಸೆರಾವೋ ಒತ್ತಾಯಿಸಿದರು.
ಅವರು ಅ.24ರಂದು ಬೆಳ್ತಂಗಡಿ ಪ್ರೆಸ್‌ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಬುದ್ಧಿವಂತರ ನಾಡು ಎಂದು ಗುರುತಿಸಿಕೊಂಡಿರುವ ಕರಾವಳಿ ಪ್ರದೇಶಕ್ಕೆ ಇದು ಕಪ್ಪುಚುಕ್ಕೆಯಾಗಿದೆ. ‘ಗುರುದೇವೋಭವ’ ಎಂದು ಶಿಕ್ಷಕರನ್ನು ದೇವರ ಸ್ಥಾನದಲ್ಲಿಟ್ಟು ಗೌರವಿಸುವ ಭವ್ಯ ಪರಂಪರೆಯಿರುವ ನಮ್ಮ ದೇಶದಲ್ಲಿ ಶಿಕ್ಷಕರ ಮೇಲೆ ನಡೆದಿರುವ ಹಲ್ಲೆಯಿಂದ ಕರಾವಳಿ ಶಿಕ್ಷಕರೆಲ್ಲರೂ ಭಯಬೀತರಾಗಿದ್ದಾರೆ. ವಿದ್ಯಾರ್ಥಿಗಳ ಒಂದು ಸಣ್ಣ ತಪ್ಪಿಗೆ ಏರುಧ್ವನಿಯಲ್ಲಿ ಮಾತನಾಡಿದರೂ, ಶಿಕ್ಷಕರ ಮೇಲೆ ಉಗ್ರ ಕ್ರಮ ಕೈಗೊಳ್ಳಲು ನಿಯಾಮಾಳಿಯನ್ನು ರೂಪಿಸುವ ಸರಕಾರ ಶಿಕ್ಷಕರಿಗೆ ಸೂಕ್ತ ರಕ್ಷಣೆ ಕೊಡುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದರು.
ಈ ಘಟನೆಯನ್ನು ನಮ್ಮ ಸಂಘಟನೆ ತೀವ್ರವಾಗಿ ಖಂಡಿಸುತ್ತದೆ. ತಪ್ಪಿತಸ್ಥರ ಮೇಲೆ ಕೂಡಲೆ ಕ್ರಮ ಕೈಗೊಳ್ಳಬೇಕು, ಇನ್ನು ಮುಂದೆ ಇಂತಹ ಘಟನೆಗಳು ನಡೆಯದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಅವರು ಸರಕಾರವನ್ನು ಒತ್ತಾಯಿಸಿದರು. ಪತ್ರಿಕಾಗೋಷ್ಠಿಯಲ್ಲಿ ರಾಜಕೀಯ ಸಮಿತಿ ಸಂಚಾಲಕ ಜೊಯೆಲ್ ಮೆಂಡೊನ್ಸಾ, ಕೇಂದ್ರೀಯ ಪ್ರಧಾನ ಕಾರ್ಯದರ್ಶಿ ವಾಲ್ಟರ್ ಮೋನಿಸ್, ವಿಲಿಯಂ ಕೊಡ್ಡೆರೋ, ಲಿಯೋ ರೊಡ್ರಿಗಸ್, ವಿಲಿಯಂ ಲೋಬೊ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.