ಶ್ರೀ ದೇವಿ ಮಹಾಮ್ಮಾಯಿ ಅಮ್ಮನವರ ನೂತನ ಶಿಲಾಮಯ ದೇವಸ್ಥಾನದ ನಿಧಿ ಕುಂಭ ಪ್ರತಿಷ್ಠೆ

news copyಬಡಕೋಡಿ : ಶ್ರೀ ಆದಿಶಕ್ತಿ ಮಹಾಮ್ಮಾಯಿ ಅಮ್ಮನವರ ದೇವಸ್ಥಾನ ಬಡಕೋಡಿ-ಕಾಶಿಪಟ್ಣ ಇದರ ನೂತನ ಶಿಲಾಮಯ ದೇವಸ್ಥಾನದ ನಿಧಿ ಕುಂಭ ಪ್ರತಿಷ್ಠಾ ಕಾರ್ಯಕ್ರಮವು ನ.13ರಂದು ಶ್ರೀ ಕ್ಷೇತ್ರ ಕಟೀಲಿನ ಶ್ರೀ ವೇದಮೂರ್ತಿ ಅನಂತ ಪದ್ಮನಾಭ ಅಸ್ರಣ್ಣ ಇವರ ಅಮೃತ ಹಸ್ತದಿಂದ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಕ್ಷೇತ್ರ ಪಡ್ಯಾರಬೆಟ್ಟದ ಧರ್ಮದರ್ಶಿಗಳು ಮತ್ತು ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷ ಎ.ಜೀವಂಧರ ಕುಮಾರ್ ವಹಿಸಿದ್ದರು.
ಉದ್ಯಮಿ ಪ್ರೇಮನಾಥ ಮಾರ್ಲ, ಬೆಳ್ತಂಗಡಿ ವಲಯ ಅರಣ್ಯಾಧಿಕಾರಿ ಬಿ.ಸುಬ್ಬಯ್ಯ ನಾಯ್ಕ, ಶ್ರೀ ಕ್ಷೇತ್ರದ ಪ್ರಧಾನ ಅರ್ಚಕ ಶ್ರೀ ವೇದಮೂರ್ತಿ ವೆಂಕಟರಮಣ ಅಸ್ರಣ್ಣರು, ಶ್ರೀ ಪಂಚಲಿಂಗೇಶ್ವರ ದೇವಸ್ಥಾನ, ಕೇಳ-ಕಾಶಿಪಟ್ಣ ಇದರ ಪ್ರಧಾನ ಅರ್ಚಕ ಅನಂತ ಅಸ್ರಣ್ಣರು, ಫ್ರೆಂಡ್ಸ್ ಕ್ಲಬ್ ಹೊಸಂಗಡಿ, ಇದರ ಗೌರವಾಧ್ಯಕ್ಷ ಗಣೇಶ್ ರೈ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಜೀರ್ಣೋದ್ಧಾರ ಸಮಿತಿಯ ಕಾರ್ಯಾಧ್ಯಕ್ಷ ಸತೀಶ್ ಕೆ, ಪ್ರಧಾನ ಕಾರ್ಯದರ್ಶಿ ನ್ಯಾಯವಾದಿ ಸಂತೋಷ್ ಕುಮಾರ್ ಬೆಳ್ತಂಗಡಿ ಮತ್ತು ಶ್ರೀ ಕ್ಷೇತ್ರದ ಆಡಳಿತ ಸಮಿತಿ ಅಧ್ಯಕ್ಷ ಲಿಂಗಪ್ಪ ನಾಯ್ಕ, ಪ್ರಧಾನ ಕಾರ್ಯದರ್ಶಿ ವಾಸುದೇವ ನಾಯ್ಕ ಇವರುಗಳು ವೇದಿಕೆಯಲ್ಲಿದ್ದರು.
ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಪಿ.ಧರಣೇಂದ್ರ ಕುಮಾರ್ ಸ್ವಾಗತಿಸಿ, ಪ್ರಧಾನ ಸಂಚಾಲಕ ಶ್ರೀಪತಿ ಉಪಾಧ್ಯಾಯ ಧನ್ಯವಾದವಿತ್ತರು. ಈ ಸಂದರ್ಭದಲ್ಲಿ ಶ್ರೀ ಆದಿಶಕ್ತಿ ಮಹಾಮ್ಮಾಯಿ ಅಮ್ಮನವರ ಸನ್ನಿಧಿಯಲ್ಲಿ ಶ್ರೀ ಕ್ಷೇತ್ರದ ಪ್ರಧಾನ ಅರ್ಚಕ ವೇದಮೂರ್ತಿ ವೆಂಕಟರಾಜ ಅಸ್ರಣ್ಣರು, ಮಾರೂರು ಇವರ ನೇತೃತ್ವದಲ್ಲಿ ಧನ್ವಂತರಿ ಹೋಮ ನಡೆಯಿತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.