ಉಜಿರೆಯಲ್ಲಿ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಚಾಲನೆ

Advt_NewsUnder_1
Advt_NewsUnder_1
Advt_NewsUnder_1

Dhwajarohana copy

Tournament Inaugural session photo copy

ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ರಾಜ್ಯಮಟ್ಟದ ಬಾಲಕ-ಬಾಲಕಿಯರ ವಾಲಿಬಾಲ್ ಪಂದ್ಯಾಟಕ್ಕೆ , ನ.18ರಂದು ವಿಭಿನ್ನ ಚಾಲನೆ ದೊರೆಯಿತು. ಸುವರ್ಣ ಮಹೋತ್ಸವ ಆಚರಣೆಯ ಅಂಗವಾಗಿ ಮಂಗಳೂರಿನ ಪದವಿಪೂರ್ವ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದ್ದ ಪಂದ್ಯಾವಳಿಗೆ ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ‍್ಯದರ್ಶಿ ಡಿ.ಹರ್ಷೇಂದ್ರಕುಮಾರ್ ಉದ್ಘಾಟಿಸಿದರು.
ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ‍್ಯದರ್ಶಿ ಡಾ.ಬಿ.ಯಶೋವರ್ಮ ಅವರು ಕ್ರೀಡಾ ಧ್ವಜಾರೋಹಣ ನೆರವೇರಿಸಿದರು. ಇದೇ ಸಂದರ್ಭ ರಾಷ್ಟ್ರಮಟ್ಟದ ವಾಲಿಬಾಲ್ ಪಟು ಎಸ್‌ಡಿಎಂನ ಯಶೋದ ಕ್ರೀಡಾ ಪ್ರತಿಜ್ಞಾ ವಿಧಿ ಬೋಧಿಸಿದರು. ವೇದಿಕೆಯಲ್ಲಿ ಮಂಗಳೂರು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕೆ.ಆರ್.ತಿಮ್ಮಯ್ಯ, ಅಂತರಾಷ್ಟ್ರೀಯ ಕ್ರೀಡಾಪಟು ಪ್ರೇಮನಾಥ ಶೆಟ್ಟಿ, ಪದವಿಪೂರ್ವ ಶಿಕ್ಷಣ ಇಲಾಖೆಯ ಸಹಾಯಕ ಕ್ರೀಡಾ ನಿರ್ದೆಶಕರಾದ ಧೀರೇಶ್‌ಕುಮಾರ್, ಎಸ್‌ಡಿಎಂ ಪದವಿ ಕಾಲೇಜು ಪ್ರಾಂಶುಪಾಲ ಡಾ.ಕೆ.ಎಸ್.ಮೋಹನ ನಾರಾಯಣ ಮತ್ತಿತರರು ಉಪಸ್ಥಿತರಿದ್ದರು.
ಎಸ್‌ಡಿಎಂ ಪಿಯು ಕಾಲೇಜಿನ ಪ್ರಾಂಶುಪಾಲ ದಿನೇಶ ಚೌಟ ಸ್ವಾಗತಿಸಿದರು. ಎಸ್‌ಡಿಎಂ ಕ್ರೀಡಾ ವಿಭಾಗದ ದೈಹಿಕ ನಿರ್ದೇಶಕ ಸಂದೇಶ ಪೂಂಜ ವಂದಿಸಿದರು. ಎಸ್‌ಡಿಎಂ ಪದವಿ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಬಿ.ಎ. ಕುಮಾರ್ ಹೆಗ್ಡೆ ಕಾರ‍್ಯಕ್ರಮ ನಿರೂಪಿಸಿದರು.
ರಾಜ್ಯದ ವಿವಿಧ ಕಡೆಗಳಿಂದ ಆಗಮಿಸಿದ್ದ ವಿದ್ಯಾರ್ಥಿಗಳು ಮೈದಾನದಲ್ಲಿ ವಿವಿಧ ಬಣ್ಣದ ಸಮವಸ್ತ್ರಗಳಿಂದ ಕಂಗೊಳಿಸುತ್ತಿದ್ದರು. ಕ್ರೀಡಾಕೂಟಕ್ಕೆ ಚಾಲನೆ ದೊರೆಯುತ್ತಿದ್ದಂತೆ ಪಟಾಕಿ ಸಿಡಿಸಿ ವಿದ್ಯಾರ್ಥಿಗಳು ಸಂಭ್ರಮಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.