HomePage_Banner_
HomePage_Banner_

ತುಳು ಸಂಸ್ಕೃತಿಯನ್ನು ಉಳಿಸಿ – ಬೆಳೆಸುವಲ್ಲಿ ಪೂರಕ : ಕನ್ನಡಿಕಟ್ಟೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

Patla yaksha druva udgatane copyಉಜಿರೆ : ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ಇದರ ಬೆಳ್ತಂಗಡಿ ಘಟಕದ ಉದ್ಘಾಟನೆ ಮತ್ತು ಯಕ್ಷಗಾನ ಪರಂಪರೆಯ ಪ್ರದರ್ಶನ ಪರ್ವ ಕಾರ್ಯಕ್ರಮವು ನ.17ರಂದು ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ರಥ ಬೀದಿಯಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಗುರುವಾಯ ನಕೆರೆ ವಿಜಯ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ ಅಧ್ಯಕ್ಷ ಹಾಗೂ ಸೀತಾನದಿ ಗಣಪಯ್ಯ ಶೆಟ್ಟಿ ಪ್ರತಿಷ್ಠಾನದ ಉಪಾಧ್ಯಕ್ಷ ಎಸ್. ಜಯರಾಮ ಶೆಟ್ಟಿ ಪಡಂಗಡಿ ಇವರು ದೀಪ ಬೆಳಗಿಸಿ ಉದ್ಘಾಟಿಸಿ, ಯಕ್ಷಗಾನ ಕಲೆ ಈ ಜಿಲ್ಲೆಯ ಶ್ರೀಮಂತ ಜಾನಪದ ಕಲೆಯಾಗಿದ್ದು, ಮುಂದಿನ ಪೀಳಿಗೆಗೆ ಇದನ್ನು ಉಳಿಸಿ, ಬೆಳೆಸುವ ಕಲಾವಿದರ ಜವಾಬ್ದಾರಿ ಅತ್ಯಂತ ಮಹತ್ವದ್ದಾಗಿದೆ. ಕಲಾವಿದರು ಕಲೆ ಉಳಿಸಲು ತಮ್ಮ ಜೀವನವನ್ನೇ ಮುಡಿಪಾಗಿಡುವಾಗ ಅವರು ತಮ್ಮ ಭವಿಷ್ಯದ ಬಗ್ಗೆಯೂ ಚಿಂತಿಸಬೇಕು ಈ ನಿಟ್ಟಿನಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ವತಿಯಿಂದ ಕಲಾವಿದರ ಮುಂದಿನ ಬದುಕಿನ ಬಗ್ಗೆ ಈಗಲೇ ಕಾಳಜಿ ವಹಿಸಿ ವಿವಿಧ ಯೋಜನೆ ರೂಪಿಸುತ್ತಿರುವುದು ಶ್ಲಾಘನೀಯ ಎಂದರು. ಅಧ್ಯಕ್ಷತೆಯನ್ನು ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಹಾಗೂ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್‌ನ ಗೌರವಾಧ್ಯಕ್ಷ ಯು. ವಿಜಯರಾಘವ ಪಡ್ವೆಟ್ನಾಯ ವಹಿಸಿ, ಕಲಾವಿದರಾಗಿರುವ ಸತೀಶ್ ಶೆಟ್ಟಿಯವರು ಯಕ್ಷಗಾನ ಕಲಾವಿದರ ಕಷ್ಟ-ಸುಖವನ್ನು ಹತ್ತಿರದಿಂದ ಬಲ್ಲವರಾಗಿದ್ದು, ಕಲಾವಿದರ ಶ್ರೋಯೋಭಿವೃದ್ಧಿಗಾಗಿ ಯಕ್ಷಧ್ರುವ ಟ್ರಸ್ಟ್ ಸ್ಥಾಪಿಸಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಯಕ್ಷಧ್ರುವ ಟ್ರಸ್ಟ್‌ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿಯವರು ಟ್ರಸ್ಟ್‌ನ ಉದ್ದೇಶಗಳನ್ನು ವಿವರಿಸಿ, ಮುಂದಿನ ದಿನಗಳಲ್ಲಿ 100 ಅಶಕ್ತ ಕಲಾವಿದರಿಗೆ ಸೂರು ನಿರ್ಮಿಸಿಕೊಡುವ ಯೋಜನೆಯನ್ನು ಹಮ್ಮಿಕೊಳ್ಳಲಾಗಿದ್ದು, ಇದಕ್ಕೆ ಮಾಜಿ ಸಚಿವ ಕೃಷ್ಣ ಜೆ. ಪಾಲೇಮಾರ್ ಜಾಗ ನೀಡುವ ಭರವಸೆ ನೀಡಿದ್ದಾರೆ 40 ಮನೆಗಳ ನಿರ್ಮಾಣಕ್ಕೆ ದಾನಿಗಳು ಮುಂದೆ ಬಂದಿದ್ದಾರೆ ಎಂದು ವಿವರಿಸಿದರು.
ಈ ಸಂದರ್ಭದಲ್ಲಿ 60 ವರ್ಷದ ಸಂಭ್ರದಲ್ಲಿರುವ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಮತ್ತು ಭಾಗವತ ರವಿಚಂದ್ರ ಕನ್ನಡಿಕಟ್ಟೆ ಇವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಬಲಿಪ ನಾರಾಯಣ ಭಾಗವತ, ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಭಂಡಾರಿ, ಕೋಶಾಧಿಕಾರಿ ಸುದೇಶ್ ರೈ ಉಪಸ್ಥಿತರಿದ್ದರು. ಶ್ರೀ ವಿದ್ಯಾ ಅವರ ಪ್ರಾರ್ಥನೆ ಬಳಿಕ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಬೆಳ್ತಂಗಡಿ ಘಟಕದ ಸಂಚಾಲಕ ರಘುರಾಮ ಶೆಟ್ಟಿ ಸಾಧನಾ ಸ್ವಾಗತಿಸಿದರು. ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಭಂಡಾರಿ ಪ್ರಸ್ತಾಪಿಸಿದರು. ಹರೀಶ್ ಪೂಂಜ ಸಂದೇಶ ವಾಚಿಸಿದರು. ಸಂಪತ್ ಬಿ. ಸುವರ್ಣ ಸನ್ಮಾನಿತರನ್ನು ಪರಿಚಯಿಸಿದರು. ಯಕ್ಷಗಾನ ಕಲಾವಿದ ಉಜಿರೆ ಅಶೋಕ್ ಭಟ್ ಕಾರ್ಯಕ್ರಮ ನಿರ್ವಹಿಸಿ, ಬೆಳ್ತಂಗಡಿ ಘಟಕದ ಅಧ್ಯಕ್ಷ ಬಿ. ಭುಜಬಲಿ ವಂದಿಸಿದರು. ಬಳಿಕ ಶೂರ್ಪನಖಾ ವಿವಾಹ, ವಸಂತೋತ್ಸವ, ವನವಿ ಹಾರ, ಕರ್ಣಾರ್ಜುನ ಯಕ್ಷಗಾನ ಪರಂಪರೆಯ ಪ್ರದರ್ಶನ ಜರುಗಿತು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.