ಧರ್ಮಸ್ಥಳ ಲಕ್ಷದೀಪೋತ್ಸವ ರಾಜ್ಯ ಮಟ್ಟದ ವಸ್ತು ಪ್ರದರ್ಶನ ಉದ್ಘಾಟನೆ

dml 1

dml

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ ಪ್ರಯುಕ್ತ ರಾಜ್ಯ ಮಟ್ಟದ ವಸ್ತು ಪ್ರದರ್ಶನವನ್ನು ನ.24ರಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೂಡು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ವಹಿಸಿದ್ದರು. ಈ ಸಂದರ್ಭದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಮಿನಿ ಡಾಕ್ಯುಮೆಂಟರಿಯನ್ನು ಬಿಡುಗಡೆಗೊಳಿಸಲಾಯಿತು. ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಪ್ರೊ| ಎಸ್.ಪ್ರಭಾಕರ್ ಸೇರಿದಂತೆ ಅನೇಕ ಭಕ್ತಾದಿಗಳು ಉಪಸ್ಥಿತರಿದ್ದರು.
ಉಪನ್ಯಾಸಕ ಸುವೀರ್ ಜೈನ್ ಕಾರ್ಯಕ್ರಮ ನಿರ್ವಹಿಸಿ, ಉಪನ್ಯಾಸಕ ಸುನಿಲ್ ಪಂಡಿತ್ ಸ್ವಾಗತಿಸಿದರು. ರುಡ್‌ಸೆಟ್ ಸಂಸ್ಥೆಯ ತರಬೇತಿ ಉಪನ್ಯಾಸಕ ಜೇಮ್ಸ್ ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.