ರಾಷ್ಟ್ರೀಯ ಸೇವಾ ಯೋಜನೆಯಿಂದ ನಾಯಕತ್ವ ಮತ್ತು ವ್ಯಕ್ತಿತ್ವ ವಿಕಸನ : ಕೆ.ಕೆ. ಶಾಹುಲ್ ಹಮೀದ್

Advt_NewsUnder_1
Advt_NewsUnder_1

Melanthabettu NSS copy ಪಡಂಗಡಿ :ಎನ್.ಎಸ್.ಎಸ್.ನಿಂದ ವಿದ್ಯಾರ್ಥಿಗಳು ವ್ಯಕ್ತಿತ್ವ ವಿಕಸನದೊಂದಿಗೆ ನಾಯಕತ್ವ ಗುಣಗಳನ್ನು ಮೈಗೂಡಿಸಿಕೊಳ್ಳಬೇಕೆಂದು ಜಿಲ್ಲಾ ಪಂಚಾಯತ್ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಕೆ.ಕೆ. ಶಾಹುಲ್ ಹಮೀದ್‌ರವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಅವರು ಪಡಂಗಡಿ ಪ್ರೌಢಶಾಲೆಯಲ್ಲಿ ನಡೆಯುತ್ತಿರುವ ಸರಕಾರಿ ಪ್ರಥಮ ದರ್ಜೆ ಕಾಲೇಜು, ಬೆಳ್ತಂಗಡಿಯ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರವನ್ನು ಉದ್ಘಾಟಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಯೋಗೀಶ್ ಕುಮಾರ್ ನಡಕ್ಕರ, ಹೈಕೋರ್ಟ್ ನ್ಯಾಯವಾದಿ ಹರೀಶ್ ಪೂಂಜ, ತಾ.ಪಂ.ಸ. ಶ್ರೀಮತಿ ಸುಶೀಲಾ, ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಮೀನಾಕ್ಷಿ, ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ತಾರಕೇಸರಿ, ಶಿಕ್ಷಣ ಸಂಯೋಜಕ ರಮೇಶ್ ಭಾಗವಹಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಭಾರ ಪ್ರಾಂಶುಪಾಲರಾದ ಡಾ| ಶರತ್ ಕುಮಾರ್ ಟಿ.ಕೆ. ವಹಿಸಿದ್ದರು. ಕಾರ್ಯಕ್ರಮದಲ್ಲಿ ಪಡಂಗಡಿ ಪ್ರೌಢಶಾಲೆ ಮುಖ್ಯೋಪಾಧ್ಯಾಯರಾದ ಶ್ರೀಮತಿ ಪೂರ್ಣಿಮಾ ಹಾಗೂ ಯೋಜನಾಧಿಕಾರಿಗಳಾದ ಶ್ರೀಮತಿ ಸುಮನಾ ಶೆಟ್ಟಿ ಎನ್ ಉಪಸ್ಥಿತರಿದ್ದರು. ಸ್ವಾಗತ ಸಮಿತಿಯ ಅಧ್ಯಕ್ಷರಾದ ಅಹಮದ್ ಬಾವ ಸ್ವಾಗತಿಸಿ, ಯೋಜನಾಧಿಕಾರಿ ಗಂಗಾಧರ್ ವಂದನಾರ್ಪಣೆಗೈದರು. ಶಿಬಿರಾರ್ಥಿ ಪ್ರತೀಕ್‌ರಾಜ್ ಕಾರ್ಯಕ್ರಮ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.