21ನೇ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಲಾಂಛನ ಆಹ್ವಾನ

  ಬೆಳ್ತಂಗಡಿ : ಉಜಿರೆಯಲ್ಲಿ ಜನವರಿ ತಿಂಗಳ ಕೊನೆಯ ವಾರದಲ್ಲಿ 3 ದಿನಗಳ ಕಾಲ ಜರಗಲಿರುವ ನಾಡು ನುಡಿಯ ಸಂಭ್ರಮಾಚರಣೆಯ 21ನೇ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕಲಾವಿದರಿಂದ ಸೂಕ್ತ ಲಾಂಛನವನ್ನು ಆಹ್ವಾನಿಸಲಾಗಿದೆ.
ಕನ್ನಡ ನಾಡು ನುಡಿಯ ಸಾಂಸ್ಕೃತಿಕ ಉತ್ಸವಕ್ಕೆ ಸರಿಹೊಂದುವ ಲಾಂಛನವನ್ನು ರಚಿಸಿ, ಸ್ವವಿಳಾಸ, ದೂರವಾಣಿ ಸಂಖ್ಯೆ ಸಹಿತ ಜನವರಿ 2 ರೊಳಗಾಗಿ ಅಧ್ಯಕ್ಷರು, ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕಲ್ಕೂರ ಪ್ರತಿಷ್ಠಾನ, ಶ್ರೀಕೃಷ್ಣ ಸಂಕೀರ್ಣ, ಮಹಾತ್ಮಾ ಗಾಂಧಿ ರಸ್ತೆ, ಕೊಡಿಯಾಲ್‌ಬೈಲ್ ಮಂಗಳೂರು ಇಲ್ಲಿಗೆ ಕಳುಹಿಸಿಕೊಡುವಂತೆ ಕೋರಲಾಗಿದೆ. ಆಯ್ಕೆಗೊಂಡ ಲಾಂಛನ’ ರಚನಕಾರರನ್ನು ಸಾಹಿತ್ಯ ಸಮ್ಮೇಳನದ ವೇದಿಕೆಯಲ್ಲಿ ಪುರಸ್ಕರಿಸಲಾಗುವುದು ಎಂದು ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *