ಕೊಕ್ಕಡ ಗೌಡರ ಯಾನೆ ಒಕ್ಕಲಿಗ ಸಭಾ ಭವನ ಶಿಲಾನ್ಯಾಸ

kokkada gowda ra sanga shaba bhavana shilanyasa copyಕೊಕ್ಕಡ : ಕೊಕ್ಕಡದ ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿಯ ಸಭಾಭವನವೊಂದು ಕೊಕ್ಕಡದ ಹಲ್ಲಿಂಗೇರಿ ಎಂಬಲ್ಲಿ ನಿರ್ಮಾಣಗೊಳ್ಳಲಿದ್ದು ಈ ಸಭಾಭವನದ ಶಿಲಾನ್ಯಾಸವನ್ನು ಆದಿ ಚುಂಚನಗಿರಿ ಮಹಾ ಸಂಸ್ಥಾನದ ಪೀಠಾಧ್ಯಕ್ಷ ಡಾ. ನಿರ್ಮಲಾನಂದನಾಥ ತೀರ್ಥ ಸ್ವಾಮೀಜಿ ಡಿ.31 ರಂದು ನೆರವೇರಿಸಿದರು.
ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಸ್ವಾಮೀಜಿಗಳು ಮಕ್ಕಳಿಗೆ ಒಳ್ಳೆಯ ಶಿಕ್ಷಣವನ್ನು ನೀಡಬೇಕು. ಆದಿಚುಂಚನಗಿರಿ ಮಠಕ್ಕೆ ಬರುವ ಮಕ್ಕಳಿಗೆ ಶಿಕ್ಷಣ ನೀಡಲಾಗುವುದು ಎಂದರು. ಮಂಗಳೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿ ಉಪಸ್ಥಿತರಿದ್ದರು.
ಕೊಕ್ಕಡದ ಗೌಡರ ಯಾನೆ ಒಕ್ಕಲಿಗ ಸೇವಾ ಸಂಘದ ಅಧ್ಯಕ್ಷ ಶಿವಾನಂದ ಎಸ್. ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಸಂಜೀವ ಮಠಂದೂರು, ಬೆಳ್ತಂಗಡಿ ತಾಲೂಕು ಗೌಡರ ಸಂಘದ ಅಧ್ಯಕ್ಷ ಸೋಮೇಗೌಡ, ತಾಲೂಕು ಮಹಿಳಾ ಘಟಕದ ಕಾರ್ಯದರ್ಶಿ ಉಮಾವತಿ ಎಸ್., ಬೆಳ್ತಂಗಡಿ ವಾಣಿ ವಿದ್ಯಾ ಸಂಸ್ಥೆಯ ಶಿಕ್ಷಕಿ ವಿದ್ಯಾ ಎಸ್. ಗೌಡ, ನೂತನ ಸಭಾಭವನ ರಚನಾ ಸಮಿತಿ ಗೌರವಾಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಸ್ಥಳೀಯರಾದ ಕೆ.ವಿ. ಭಟ್, ಆನಂದ ಉಪ್ಪಾರ್ಣ, ಕೊಕ್ಕಡ ವೈದ್ಯನಾಥೇಶ್ವರ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವಸಂತ ರಾವ್, ಮಾಜಿ ಗ್ರಾ.ಪಂ. ಶಿವರಾಮ ನಾಯ್ಕ್, ಕೊಕ್ಕಡ ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ತುಕ್ರಪ್ಪ ಶೆಟ್ಟಿ ನೂಜೆ ಉಪಸ್ಥಿತರಿದ್ದರು.
ನೂತನ ಸಭಾಭವನ ರಚನಾ ಸಮಿತಿ ಅಧ್ಯಕ್ಷ ಶ್ರೀಧರ ಗೌಡ ಕೆಂಗುಡೇಲು ಸ್ವಾಗತಿಸಿದರು. ದಾಮೋದರ ಅಜ್ಜಾವರ ಕಾರ್ಯಕ್ರಮ ನಿರೂಪಸಿದರು. ಕಾರ್ಯದರ್ಶಿ ಪುರಂದರ ಗೌಡ ಕಡೀರ, ಗ್ರಾಮ ಸಮಿತಿ ಕಾರ್ಯದರ್ಶಿ ಸುಂದರ ಗೌಡ ಕೆಂಗುಡೇಲು ಹಾಗೂ ಸಮಾಜ ಬಾಂಧವರು, ಊರವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.