ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ವಿಗಾಗಿ ವಿಶೇಷ ಸಭೆ

Advt_NewsUnder_1
Advt_NewsUnder_1
Advt_NewsUnder_1

ujireee

ujireeeeee
ಜನವರಿ 27, 28, 29 ರಂದು ಉಜಿರೆಯಲ್ಲಿ ನಡೆಯುವ ದ.ಕ.ಜಿಲ್ಲಾ ಮಟ್ಟದ 21ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ವಿಗಾಗಿ ವಿಶೇಷ ಸಭೆಯು ಇಂದು
ಎಸ್.ಡಿ.ಎಮ್. ಕಲಾಭವನ(ಸಮಾಜ ಮಂದಿರ) ಬೆಳ್ತಂಗಡಿಯಲ್ಲಿ ನಡೆಯಿತು.
ವಾಣಿ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಂದ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ಪ್ರದೀಪ ಕುಮಾರ ಕಲ್ಕೂರ ಸಮ್ಮೇಳನದ ಸ್ವರೂಪವನ್ನು ಹೇಳಿದರು.
ಶಾಸಕ ಕೆ.ವಸಂತ ಬಂಗೇರ ಮತ್ತು ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಆಡಳಿತ ಮೊಕ್ತೇಸರ ಯು.ವಿಜಯ ರಾಘವ ಪಡ್ವೆಟ್ನಾಯ ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ವಿಗಾಗಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ವೇದಿಕೆಯಲ್ಲಿ ತಾ.ಪಂ ಅಧ್ಯಕ್ಷೆ ದಿವ್ಯಜ್ಯೋತಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಪ್ರತಾಪಸಿಂಹ ನಾಯಕ್ ಸ್ವಾಗತಿಸಿ, ಪ್ರಸ್ತಾಪಿಸಿದರು. ಕಸಪ ಕಾರ್ಯದರ್ಶಿ ಅಶ್ರಫ್ ಆಲಿಕುಂಞಿ ನಿರೂಪಿಸಿ, ಉಜಿರೆ ವಲಯದ ಜೇಸಿ ಅಧ್ಯಕ್ಷ ದೇವದಾಸ್ ನಾಯಕ್ ಧನ್ಯವಾದವಿತ್ತರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.