HomePage_Banner_
HomePage_Banner_

ಅಂತರಾಷ್ಟ್ರೀಯ ಮಟ್ಟದ ಸ್ಪರ್ಧಾ ಸಾಮರ್ಥ್ಯ ನಮ್ಮ ಕ್ರೀಡಾಳುಗಳಲ್ಲಿದೆ: ಡಾ| ಹೆಗ್ಗಡೆ

ಉಜಿರೆಯಲ್ಲಿ ರಾಷ್ಟ್ರಮಟ್ಟದ ಬಾಲಕಿಯರ ವಾಲಿಬಾಲ್ ಪಂದ್ಯಾಟ

vollibol ujire copy  ರಾಜ್ಯದ ಯುವಜನ ಸೇವಾ ಮತ್ತು ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಅವರು ಮಾತನಾಡುತ್ತಿರುವುದು

ಉಜಿರೆ : ಕರ್ನಾಟಕ ಸರಕಾರ ಪದವಿ ಪೂರ್ವ ಶಿಕ್ಷಣ ಇಲಾಖೆ, ಎಸ್.ಡಿ. ಎಂ. ಎಜ್ಯುಕೇಶನ್ ಟ್ರಸ್ಟ್ ಹಾಗೂ ಎಸ್.ಡಿ.ಎಂ ಪದವಿ ಪೂರ್ವ ಕಾಲೇಜು ಉಜಿರೆ ಇದರ ಸಂಯುಕ್ತ ಆಶ್ರಯದಲ್ಲಿ ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ ಇದರ ಸಹಯೋಗದಲ್ಲಿ, ಉಜಿರೆ ಶ್ರೀ ಧ.ಮಂ ಕಾಲೇಜಿನ ಸುವರ್ಣ ಮಹೋತ್ಸವದ ವರ್ಷಾಚರಣೆ ಅಂಗವಾಗಿ ಉಜಿರೆಯ ಶ್ರೀ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಜ.9ರಂದು ಸಂಜೆ ಆರಂಭಗೊಂಡ 19 ವರ್ಷದೊಳಗಿನ ಬಾಲಕಿಯರ 62ನೇ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಚಾಲನೆ ನೀಡಿದರು.
ನಂತರ ಮಾತನಾಡಿದ ಹೆಗ್ಗಡೆಯವರು ಕ್ರೀಡೆ ಮಕ್ಕಳ ದೈಹಿಕ ಮತ್ತು ಬೌದ್ಧಿಕ ಉನ್ನತಿಗೆ ಸಹಕಾರಿಯಾಗಿದ್ದು, ಇಂದು ಮಾಹಿತಿ-ತಂತ್ರಜ್ಞಾನದಿಂದಾಗಿ ಅಂತರಾಷ್ಟ್ರೀಯ ಮಟ್ಟದ ತರಬೇತಿ ಮತ್ತು ಮಾಹಿತಿಯನ್ನು ಕ್ರೀಡಾಳುಗಳು ಪಡೆಯಬಹುದು ಇದು ವಿದ್ಯಾರ್ಥಿಗಳಿಗೆ ಹೆಚ್ಚು ಅನುಕೂಲವಾಗಿದೆ ಎಂದರು. ಗ್ರಾಮೀಣ ಮಟ್ಟದಲ್ಲಿ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ದೊರೆಯುತ್ತಿಲ್ಲ. ಆರ್ಥಿಕ ಕೊರೆಯೂ ಇರುತ್ತದೆ. ಆದರೂ ಅಂತರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧಿಸುವಷ್ಟು ಸಾಮರ್ಥ್ಯವನ್ನು ನಮ್ಮ ದೇಶದ ಕ್ರೀಡಾಳುಗಳು ಹೊಂದಿದ್ದಾರೆ ಎಂದು ತಿಳಿಸಿದರು. ಎಸ್.ಡಿ.ಎಂ ಸ್ಪೋರ್ಟ್ಸ್ ಕ್ಲಬ್ ಮೂಲಕ ಕಳೆದ 35 ವರ್ಷಗಳಿಂದ ಕ್ರೀಡಾ ವಿದ್ಯಾರ್ಥಿಗಳಿಗೆ ಹೆಚ್ಚಿನ ಪ್ರೋತ್ಸಾಹ ಹಾಗೂ ತರಬೇತಿಗಳನ್ನು ನೀಡುತ್ತಾ ಬರಲಾಗುತ್ತಿದೆ ಎಂದು ಹೇಳಿದರು. ಕ್ರೀಡಾ ಧ್ವಜಾರೋಹಣ ನೆರವೇರಿಸಿದ ರಾಜ್ಯದ ಕ್ರೀಡಾ ಮತ್ತು ಯುವಜನ ಸೇವಾ ಸಚಿವ ಪ್ರಮೋದ್ ಮಧ್ವರಾಜ್ ಅವರು ಸರಕಾರದ ವತಿಯಿಂದ ಮಂಜೂರುಗೊಂಡ ರೂ. ೫ಲಕ್ಷ ಅನುದಾನದ ಚೆಕ್‌ನ್ನು ಎಸ್.ಡಿ.ಎಂ ಪ.ಪೂ.ಕಾಲೇಜಿನ ಪ್ರಾಚಾರ್ಯ ಪ್ರೊ. ಎನ್ ದಿನೇಶ್ ಚೌಟರವರಿಗೆ ಹಸ್ತಾಂತರಿಸಿದರು. ಎಸ್.ಡಿ.ಎಂ ಸ್ಪೋರ್ಟ್ಸ್ ಕ್ಲಬ್ ಮೂಲಕ ಡಾ. ಹೆಗ್ಗಡೆಯವರು ಪ್ರತಿ ವರ್ಷ ಕ್ರೀಡೆಗಾಗಿ ರೂ.50 ಲಕ್ಷವನ್ನು ವೆಚ್ಚ ಮಾಡುತ್ತಿದ್ದಾರೆ ಇದು ಎಲ್ಲರಿಗೂ ಅನುಕರಣೀಯವಾಗಿದೆ ಇದರಿಂದಾಗಿ ಉಜಿರೆಯಂತಹ ಗ್ರಾಮೀಣ ಭಾಗದಿಂದಲೂ ಕ್ರೀಡಾ ಪ್ರತಿಭೆಗಳು ಹೊರಬರಲು ಕಾರಣವಾಗುತ್ತದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಅಧ್ಯಕ್ಷತೆ ವಹಿಸಿದ್ದ ಮಾಜಿ ಸಚಿವ ಅಭಯಚಂದ್ರ ಜೈನ್ ಮಾತನಾಡಿ ಕ್ರೀಡೆ ದೈಹಿಕ ಆರೋಗ್ಯಕ್ಕೆ ಪೂರಕವಾಗಿದ್ದು, ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ಗ್ರಾಮೀಣ ಕ್ರೀಡಾ ಪ್ರತಿಭೆಗಳು ಬೆಳಗಲು ಎಸ್.ಡಿ.ಎಂ ಸ್ಪೋರ್ಟ್ಸ್ ಕ್ಲಬ್ ವಿಶೇಷ ಕೊಡುಗೆ ನೀಡಿದೆ ಎಂದರು. ವೇದಿಕೆಯಲ್ಲಿ ಉಜಿರೆ ಗ್ರಾ.ಪಂ ಅಧ್ಯಕ್ಷ ಶ್ರೀಧರ ಪೂಜಾರಿ, ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಆಡಳಿತ ಮೊಕ್ತೇಸರ ಯು. ವಿಜಯರಾಘವ ಪಡ್ವೆಟ್ನಾಯ,ಸ್ಕೂಲ್ ಗೇಮ್ ಫೆಡರೇಶನ್ ಆಫ್ ಇಂಡಿಯಾ ಉಪಾಧ್ಯಕ್ಷ ಆರ್.ಕೆ ಪರಿವಾರ್, ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಮಿಶ್ರಾ. ನಿರೀಕ್ಷಕ ದಿನೇಶ್ ಕುಮಾರ್, ಪ.ಪೂ. ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕ ತಿಮ್ಮಯ್ಯ, ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಪ್ರೋ. ಎಸ್. ಪ್ರಭಾಕರ್, ಎಸ್‌ಡಿಎಂ ಕಾಲೇಜಿನ ಪ್ರಾಂಶುಪಾಲ ಡಾ. ಮೋಹನ್ ನಾರಾಯಣ್, ಪ.ಪೂ. ಕಾಲೇಜಿನ ಉಪ ಪ್ರಾಂಶುಪಾಲ ಪ್ರಮೋದ್ ಕುಮಾರ್, ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರಮೇಶ್, ಸಂದೇಶ್ ಪೂಂಜ ಉಪಸ್ಥಿತರಿದ್ದರು.
ಎಸ್.ಡಿ.ಎಂ ಪ.ಪೂ.ಕಾಲೇಜಿನ ಪ್ರಾಂಶುಪಾಲ ದಿನೇಶ್ ಚೌಟ ಸ್ವಾಗತಿಸಿದರು. ಕರ್ನಾಟಕ ತಂಡದ ನಾಯಕಿ ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಯಶೋದಾ ಪ್ರಮಾಣ ವಚನ ಬೋಧಿಸಿದರು. ಉಪನ್ಯಾಸಕ ಡಾ. ಬಿ.ಎ ಕುಮಾರ ಹೆಗ್ಡೆ ಕಾರ್ಯಕ್ರಮ ನಿರೂಪಿಸಿ, ಎಸ್.ಡಿ.ಎಂ ಸ್ಪೋರ್ಟ್ಸ್ ಕ್ಲಬ್‌ನ ಕಾರ್ಯದರ್ಶಿ ಬಾಲಭಾಸ್ಕರ್ ವಂದಿಸಿದರು.

ಚಿತ್ರ: ಶರ್ಮಾ ಉಜಿರೆ

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.