ಎಪಿಎಂಸಿ ಚುನಾವಣೆ ಫಲಿತಾಂಶ : ಕಾಂಗ್ರೆಸ್ 7, ಬಿಜೆಪಿ 5 ಆಯ್ಕೆ

1ಎಪಿಎಂಸಿ ಚುನಾವಣೆ ಫಲಿತಾಂಸವು ಇಂದು ಪ್ರಕಟಗೊಂಡಿದ್ದು, ಸ್ಪರ್ಧೆಯಲ್ಲಿದ್ದ 12 ಕ್ಷೇತ್ರಗಳ ಪೈಕಿ 7 ಕ್ಷೇತ್ರಗಳಲ್ಲಿ ಕಾಂಗ್ರಸ್ ಬೆಂಬಲಿಗರು, 5 ಕ್ಷೇತ್ರಗಳಲ್ಲಿ ಬಿಜೆಪಿ ಬೆಂಬಲಿತರು ಚುನಾಯಿತರಾಗಿದ್ದಾರೆ. ಕಾಂಗ್ರೆಸ್ ಬೆಂಬಲಿತ ಮಡಂತ್ಯಾರು ಸೇವಾ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ವರ್ತಕರ ಕ್ಷೇತ್ರದಿಂದ ನಡೆದ ಚುನಾವಣೆಯಲ್ಲಿ ಪುಷ್ಪರಾಜ ಹೆಗ್ಡೆ 72 ಮತದೊಂದಿಗೆ ವರ್ತಕರ ಕ್ಷೇತ್ರದಿಂದ ಬಿಜೆಪಿ ಬೆಂಬಲಿತ ತಾಲೂಕು ರೈತ ಮೋರ್ಚಾದ ಉಪಾಧ್ಯಕ್ಷ ಡಿ. ಚಂದ್ರಶೇಖರ ಗೌಡರವರು 17 ಮತ ಪಡೆದಿದ್ದಾರೆ. ಕಾಂಗ್ರೆಸ್ ಬೆಂಬಲಿತ ಪುಷ್ಪರಾಜ್ ಹೆಗ್ಡೆ ಜಯ ಗಳಿಸಿದ್ದಾರೆ.
ಬೆಳ್ತಂಗಡಿ ಕೃಷಿಕರ ಮಹಿಳಾ ಮೀಸಲು ಕ್ಷೇತ್ರದಲ್ಲಿ ಕಾಂಗ್ರೆಸ್ ಬೆಂಬಲಿತ ಪಲ್ಲವಿರಾಜು, ಉಜಿರೆ ಕೃಷಿಕರ ಸಾಮಾನ್ಯ ಕ್ಷೇತ್ರದಲ್ಲಿ ಕಾಂಗ್ರೆಸ್ ಬೆಂಬಲಿತ ನ್ಯಾಯವಾದಿ ಕೇಶವ ಗೌಡ ಪಿ., ನೆರಿಯ ಕೃಷಿಕರ ಸಾಮಾನ್ಯ ಕ್ಷೇತ್ರದಲ್ಲಿ ಕಾಂಗ್ರೆಸ್ ಬೆಂಬಲಿತ ಪುದುವೆಟ್ಟು ಗ್ರಾ.ಪಂ ಮಾಜಿ ಅಧ್ಯಕ್ಷ ಅಬ್ದುಲ್‌ಗಫೂರ್, ಕಣಿಯೂರು ಕೃಷಿಕರ ಸಾಮಾನ್ಯ ಕ್ಷೇತ್ರದಲ್ಲಿ ಕಾಂಗ್ರೆಸ್ ಬೆಂಬಲಿತ ಗ್ರಾ.ಪಂ. ಮಾಜಿ ಅಧ್ಯಕ್ಷ ಗಣೇಶ್ ಪ್ರಸಾದ್ ಕೆರ್ಮುನ್ನಾಯ, ನಾರಾವಿ ಕೃಷಿಕರ ಹಿಂದುಳಿದ ವರ್ಗ ಎ ಮೀಸಲು ಕ್ಷೇತ್ರದಲ್ಲಿ ಕಾಂಗ್ರೆಸ್ ಬೆಂಬಲಿತ ಕಾಶಿಪಟ್ಣ ಗ್ರಾ.ಪಂ ಅಧ್ಯಕ್ಷ ಸತೀಶ್ ಕೆ. ಕಾಶಿಪಟ್ಣ, ಅಳದಂಗಡಿ ಕೃಷಿಕರ ಸಾಮಾನ್ಯ ಕ್ಷೇತ್ರದಲ್ಲಿ ಕಾಂಗ್ರೆಸ್ ಬೆಂಬಲಿತ ಸುಲ್ಕೇರಿಮೊಗ್ರು ಸಹಕಾರಿ ಸಂಘದ ಮಾಜಿ ನಿರ್ದೇಶಕ ಚಿದಾನಂದ ಪೂಜಾರಿ ಎಲ್ಡಕ್ಕ ಚುನಾಯಿತರಾಗಿದ್ದಾರೆ.
ಕೊಕ್ಕಡ ಕೃಷಿಕರ ಅನುಸೂಚಿತ ಜಾತಿ ಮೀಸಲು ಕ್ಷೇತ್ರದಲ್ಲಿ ಬಿಜೆಪಿ ಬೆಂಬಲಿತ ತಾ.ಪಂ ಮಾಜಿ ಸದಸ್ಯ ಈಶ್ವರ ಭೈರ, ಮಚ್ಚಿನ ಕೃಷಿಕರ ಸಾಮಾನ್ಯ ಕ್ಷೇತ್ರದಲ್ಲಿ ಬಿಜೆಪಿ ಬೆಂಬಲಿತ ಜಯಾನಂದ ಕಲ್ಲಾಪು, ಮಡಂತ್ಯಾರು ಕೃಷಿಕರ ಮಹಿಳಾ ಮೀಸಲು ಮೀಸಲು ಕ್ಷೇತ್ರದಲ್ಲಿ ಬಿಜೆಪಿ ಬೆಂಬಲಿತ ಸೆಲೆಸ್ಟಿನ್ ಡಿ ಸೋಜಾ, ವೇಣೂರು ಕೃಷಿಕರ ಹಿಂದುಳಿದ ವರ್ಗ ಬಿ ಮೀಸಲು ಕ್ಷೇತ್ರದಲ್ಲಿ ಬಿಜೆಪಿ ಬೆಂಬಲಿತ ಬಿಜೆಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾದ ಸಂಘಟಕ ಅಶೋಕ್ ಗೋವಿಯಸ್, ಇಂದಬೆಟ್ಟು ಕೃಷಿಕರ ಅನುಸೂಚಿತ ಪಂಗಡ ಮೀಸಲು ಕ್ಷೇತ್ರದಲ್ಲಿ ಬಿಜೆಪಿ ಬೆಂಬಲಿತ ಲ್ಯಾಂಪ್ ಸೊಸೈಟಿ ಮಾಜಿ ನಿರ್ದೇಶಕ ಆನಂದ ನಾಯ್ಕ ಪಡೀಲು ಆಯ್ಕೆಯಾಗಿದ್ದಾರೆ.
ಸಹಕಾರಿ ಕ್ಷೇತ್ರದ 2 ಕ್ಷೇತ್ರಗಳಲ್ಲಿ ಈಗಾಗಲೇ ಕಾಂಗ್ರೆಸ್ ಬೆಂಬಲಿತರಾದ ಇಚ್ಚಿಲ ಸುಂದರ ಗೌಡ ಹಾಗೂ ಜೀವಂದರ್ ಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.