ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆ

Advt_NewsUnder_1
Advt_NewsUnder_1
Advt_NewsUnder_1

ujire ಉಜಿರೆ : ತುಳುನಾಡಿನ ಸಾಹಿತ್ಯ ಸಂಸ್ಕೃತಿಯ ಹಿಂದಿನ ಪರಂಪರೆಯನ್ನು ಪ್ರತಿಬಿಂಬಿಸುವ ಚಿಂತನ ಮಂಥನವನ್ನು ನಡೆಸುವುದೇ 21ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ದೇಶವಾಗಿದೆ ಎಂದು ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷರಾದ ಎಸ್. ಪ್ರದೀಪ್ ಕುಮಾರ್ ಕಲ್ಕೂರ ಹೇಳಿದರು.
ಉಜಿರೆಯ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಠಾರದಲ್ಲಿ ನಡೆದ 21ನೇ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾಲೋಚನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
ಧರ್ಮಸ್ಥಳದ ಮಂಜಯ್ಯ ಹೆಗ್ಗಡೆಯವರು ಈ ಹಿಂದೆ ನಡೆಸಿದ್ದ ತಾಲೂಕು ಸಾಹಿತ್ಯ ಸಮ್ಮೇಳನ ಪರಂಪರೆಯಿಂದ ಇಂದು ಉಜಿರೆಯಲ್ಲಿ ನಡೆಯಲಿರುವ ಸಾಹಿತ್ಯ ಸಮ್ಮೇಳನಕ್ಕೆ ಹೊಸ ಆಯಾಮ ಸಿಕ್ಕಂತಾಗಿದೆ, ಜಿಲ್ಲಾ ಸಾಹಿತ್ಯ ಸಮ್ಮೇಳನಕ್ಕೆ ಕೃಷಿಕರ, ವ್ಯಾಪಾರಸ್ಥರ, ಚಿಂತಕರ ಮತ್ತು ಸ್ಥಳೀಯ ನಾಗರಿಕರ ತನು ಮನ, ಧನದ ಸಹಕಾರದಿಂದಾಗಿ ಉಜಿರೆ ಮನೆಯಂಗಳದಲ್ಲಿ ಸಾಹಿತ್ಯ ಸಮ್ಮೇಳನ ನಡೆಯುವಂತಾಗಿದೆ ಎಂದು ಅಭಿಪ್ರಾಯಪಟ್ಟರು.
ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕಾಗಿ ಅಭೂತಪೂರ್ವವಾದ ಬೆಂಬಲ ದೊರೆತ್ತಿದ್ದು, ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಮಟ್ಟಕ್ಕೆ ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಲಾಗುತ್ತಿದೆ. ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನ, ಜನಾರ್ದನ ಸ್ವಾಮಿ ದೇವಸ್ಥಾನದ ಮೊಕ್ತೇಸರ ಹಾಗೂ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷರಾದ ವಿಜಯರಾಘವ ಪಡೆಟ್ನಾಯರವರ ಮಾರ್ಗದರ್ಶನದ ಜೊತೆಗೆ, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಡಾ. ಬಿ. ಯಶೋವರ್ಮ ಅವರ ಚಿಂತನ ಶೀಲತೆ ಸಮ್ಮೇಳನಕ್ಕೆ ಬಲ ಬಂದತಾಗಿದೆ ಎಂದು ಆಶಯ ವ್ಯಕ್ತಪಡಿಸಿದರು.
ಸ್ಥಳೀಯರು ಜನಪದ ವಿದ್ವಾಂಸರು, ಕೃಷಿಕರರಾದ ಡಾ. ಕೆ. ಚಿನ್ನಪ್ಪ ಗೌಡ ಅಧ್ಯಕ್ಷತೆಯಲ್ಲಿ ನಡೆಯುವ ಸಾಹಿತ್ಯ ಸಮ್ಮೇಳನದಲ್ಲಿ ನೆಲ, ಜಲ, ಭಾಷೆ, ಸಂಸ್ಕೃತಿ ಬಗ್ಗೆ ಬೆಳಕು ಚೆಲ್ಲುವಂತಹ ಚಿಂತನ ಗೋಷ್ಠಿಗಳನ್ನು ಏರ್ಪಡಿಸಲಾಗಿದೆ. ಅದೇ ರೀತಿ ಹೆಗ್ಗಡೆಯವರ ಆಶಯದಂತೆ ಮಕ್ಕಳ ಸಾಹಿತ್ಯ ಸಮ್ಮೇಳನವನ್ನು ವಿಶೇಷವಾಗಿ ಆಯೋಜಿಸಲಾಗಿದೆ. ಜೊತೆಗೆ ಸದಭಿರುಚಿಯ ವಸ್ತು ಪ್ರರ್ದಶನ ಮತ್ತು ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಅದಕ್ಕಾಗಿ ಜಿಲ್ಲೆಯ ಸಾಹಿತ್ಯಾಸಕ್ತರು, ಕನ್ನಡ ಅಭಿಮಾನಿಗಳು, ಸಂಘ-ಸಂಸ್ಥೆಗಳು, ನಾಗರಿಕರು ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ತಿಳಿಸಿದರು.
ಸಭೆಯಲ್ಲಿ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷರಾದ ವಿಜಯರಾಘವ ಪಡ್ವೆಟ್ನಾಯ, ತಾಲೂಕ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಡಾ. ಬಿ ಯಶೋವರ್ಮ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಸಂಯೋಜಕರಾದ ಡಾ. ಎಂ. ಪಿ. ಶ್ರೀನಾಥ್ ನಿರ್ವಹಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.