ಕನ್ನಡ ಸಾಹಿತ್ಯ ಸಮ್ಮೇಳನದ ಭಾಗವಾಗಿ ಶಿಕ್ಷಣ ಇಲಾಖೆಯ ಅಧಿಕಾರಿಗಳ ವಿಶೇಷ ಸಭೆ

Advt_NewsUnder_1
Advt_NewsUnder_1
Advt_NewsUnder_1

acchuಜ.27, 28, 29ರಂದು ಉಜಿರೆಯಲ್ಲಿ ನಡೆಯುವ ದ.ಕ ಜಿಲ್ಲಾ ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನದ ಭಾಗವಾಗಿ ಶಿಕ್ಷಣ ಇಲಾಖೆಯ ಅಧಿಕಾರಿಗಳ ಜೊತೆ ವಿಶೇಷ ಸಭೆ ಜ.21ರಂದು ಬಿ.ಆರ್.ಸಿ ಸೆಂಟರ್ ಬೆಳ್ತಂಗಡಿಯಲ್ಲಿ ನಡೆಯಿತು.
ಅಧ್ಯಕ್ಷತೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಸಮ್ಮೇಳನ ಸ್ವಾಗತ ಸಮಿತಿಯ ಉಪಾಧ್ಯಕ್ಷರಾಗಿರುವ ತಾರಾಕೆಸರಿ ವಹಿಸಿದ್ದರು. ವೇದಿಕೆಯಲ್ಲಿ ಸಮೂಹ ಸಂಪನ್ಮೂಲ ಅಧಿಕಾರಿಗಳಾದ ಗಣೇಶ್ ಐತಾಳ್, ಶಿಕ್ಷಣ ಇಲಾಖೆಯ ಸುಭಾಷ್ ಜಾದವ್ ಉಪಸ್ಥಿತರಿದ್ದರು. ಸಮ್ಮೇಳನದ ಭಾಗವಾಗಿ ಸಮ್ಮೇಳನದ ಮಕ್ಕಳ ಸಮ್ಮೇಳನದ ವಿಭಾಗದ ಸಂಯೋಜಕರಾದ ಬಿ.ಸೋಮಶೇಖರ್ ಶೆಟ್ಟಿ, ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ನ ಗೌರವ ಕಾರ್ಯದರ್ಶಿಗಳಾದ ರಾಮಕೃಷ್ಣ ಭಟ್ ಚೊಕ್ಕಾಡಿ ಮತ್ತು ಅಶ್ರಫ್ ಆಲಿಕುಂಞಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದ ಸಂಯೋಜಕರಾದ ಶಿಕ್ಷಕ ರಮೇಶ್ ಮಯ್ಯ ಉಪಸ್ಥಿತರಿದ್ದು, ಸಮ್ಮೇಳನದ ಮಾಹಿತಿ ನೀಡಿದರು. ಸಭೆಯಲ್ಲಿ ಶಿಕ್ಷಣ ಇಲಾಖೆಯ ಪಿ.ಆರ್.ಸಿ ಮತ್ತು ಸಿ.ಆರ್.ಪಿ ಭಾಗವಹಿಸಿ, ಪೂರ್ಣ ಸಹಕಾರ ನೀಡುವ ಭರವಸೆ ನೀಡಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.