ಬೆಳಾಲು : ಸಾರ್ವಜನಿಕ ಸತ್ಯನಾರಾಯಣ ಪೂಜೆ ಹಾಗೂ ಒಕ್ಕೂಟ ಪದಗ್ರಹಣ

belalಬೆಳಾಲು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳಾಲು, ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಬೆಳಾಲು ಮತ್ತು ಸ್ಥಳೀಯ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ 35ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಒಕ್ಕೂಟ ಪದಗ್ರಹಣ ಸಮಾರಂಭ ಜ.22ರಂದು ಬೆಳಾಲು ಶ್ರೀ.ಧ.ಮಂ ಪ್ರೌಢಶಾಲೆಯಲ್ಲಿ ಜರಗಿತು.
ಇದರ ಅಂಗವಾಗಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಅಧ್ಯಕ್ಷ ಶಶಿಧರ ಆಚಾರ್ಯ ಎಂ ವಹಿಸಿದ್ದರು.
ಮುಂಡಾಜೆ ಕಲಾಕುಂಚ ಕಲಾವಿದರಿಂದ ಜಯರಾಮ್ ಕೆ ಧಾರ್ಮಿಕ ಉಪನ್ಯಾಸ ನೀಡಿದರು. ಮುಖ್ಯ ಅತಿಥಿಗಳಾಗಿ ಶ್ರೀ.ಕ್ಷೇ.ಧ.ಗ್ರಾ ಯೋಜನೆಯ ಕೃಷಿ ಅಧಿಕಾರಿ ರಾಮ್ ಕುಮಾರ್, ಬೆಳಾಲು ಗ್ರಾ.ಪಂ ಅಧ್ಯಕ್ಷ ದಿನೇಶ್ ಕೋಟ್ಯಾನ್ ಭಾಗವಹಿಸಿದ್ದರು.
ಇದೇ ಸಂದರ್ಭದಲ್ಲಿ ಬೆಳಾಲು, ಕೊಲ್ಪಾಡಿ, ಮಾಯಾ ಮೂರು ಒಕ್ಕೂಟಗಳ ನೂತನ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರ ಗಣ್ಯರ ಉಪಸ್ಥಿತಿಯಲ್ಲಿ ಜರಗಿತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.