HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷ ಜಯಕೀರ್ತಿ ಜೈನ್‌ರಿಗೆ ಸರ್ವೋತ್ತಮ ರಾಜ್ಯ ಪ್ರಶಸ್ತಿ

Jayakeerthi jain new copyಬೆಳ್ತಂಗಡಿ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಜಯಕೀರ್ತಿ ಜೈನ್ ಅವರು ಪ್ರತಿಷ್ಠಿತ ‘ಸರ್ವೋತ್ತಮ ರಾಜ್ಯ ಗೌರವ ಪ್ರಶಸ್ತಿ’ಗೆ ಪಾತ್ರರಾಗಿದ್ದಾರೆ. ರಾಜ್ಯ ಸರಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷರಾಗಿ ಮಾಡಿದ ವಿವಿಧ ಚಟುವಟಿಕೆ ಹಾಗೂ ಸಾಧನೆಗಳು, ಜನೋಪಯೋಗಿ ಕಾರ್ಯಗಳನ್ನು ಗುರುತಿಸಿ ಜಯಕೀರ್ತಿ ಜೈನ್ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಇವರು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯ ಕಾರ್ಯದರ್ಶಿಯಾಗಿ, ತಾಲೂಕು ಸಂಘದ ಅಧ್ಯಕ್ಷರಾಗಿ, ಸರಕಾರಿ ನೌಕರರ ಸಹಕಾರಿ ಸಂಘದ ಅಧ್ಯಕ್ಷರಾಗಿ, ವೇಣೂರು ದೇವಸ್ಥಾನದ ಆಡಳಿತಾಧಿಕಾರಿಯಾಗಿ, ಶ್ರೀ ಮಹಾವೀರ ಕೋ-ಆಪರೇಟಿವ್ ಸೊಸೈಟಿಯ ನಿರ್ದೇಶಕರಾಗಿ, ಪಶುವೈದ್ಯ ಪರೀಕ್ಷಕರ ಸಂಘದ ಜಿಲ್ಲಾಧ್ಯಕ್ಷರಾಗಿ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.
ಜ.೨೬ರಂದು ಬೆಂಗಳೂರಿನಲ್ಲಿ ನಡೆಯುವ ಗಣರಾಜೋತ್ಸವ ಸಮಾರಂಭದಲ್ಲಿ ಮುಖ್ಯ ಮಂತ್ರಿ ಸಿದ್ಧರಾಮಯ್ಯ ಅವರ ಉಪಸ್ಥಿತಿಯಲ್ಲಿ ರಾಜ್ಯಪಾಲ ವಜುಭಾಯಿ ರೂಢಾ ಬಾಯಿ ವಾಲಾ ಅವರು ಪ್ರಶಸ್ತಿಯನ್ನು ವಿತರಿಸಲಿದ್ದಾರೆ.

Advt_NewsUnder_
Advt_NewsUnder_
Advt_NewsUnder_

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.