ಉಜಿರೆ : ಸಾಹಿತ್ಯ ಸಮ್ಮೇಳನದ ಮಾಧ್ಯಮ ಕಛೇರಿಯ ಉದ್ಘಾಟನೆ

UJIRE 2ಉಜಿರೆ : ದಕ್ಷಿಣ ಕನ್ನಡ ಜಿಲ್ಲಾ 21ನೇ ಯ ಕನ್ನಡ ಸಾಹಿತ್ಯ ಸಮ್ಮೇಳನದ ಮಾಧ್ಯಮ ಕಛೇರಿಯ ಉದ್ಘಾಟನೆ ಇಂದು ನಡೆಯಿತು. ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾದ ದೇವಿಪ್ರಸಾದ್‌ರವರು ಉದ್ಘಾಟನೆಯನ್ನು ನೆರವೇರಿಸಿದರು.
ಈ ಸಂದರ್ಭದಲ್ಲಿ ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ಡಾ| ಬಿ.ಯಶೋವರ್ಮ, ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷ ವಿಜಯರಾಘವ ಪಡ್ವೆಟ್ನಾಯ, ಕಾಯಾಧ್ಯಕ್ಷರಾಗಿರುವ ಪ್ರತಾಪಸಿಂಹ ನಾಯಕ್, ಕಾರ್ಯದರ್ಶಿಗಳಾಗಿರುವ ಡಾ| ಎಂ.ಎಂ ದಯಾಕರ್, ಉಪಾಧ್ಯಕ್ಷರಾಗಿರುವ ಶ್ರೀಧರ ಪೂಜಾರಿ, ಮೊದಲಾದವರು ಉಪಸ್ಥಿತರಿದ್ದರು.
ಈ ಸಮಾರಂಭದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಗೌರವ ಕಾರ್ಯದರ್ಶಿ ಡಾ| ಎಂ.ಪಿ ಶ್ರೀನಾಥ್, ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ನ ಗೌರವ ಕಾರ್ಯದರ್ಶಿಗಳಾದ ರಾಮಕೃಷ್ಣ ಚೊಕ್ಕಾಡಿ ಮತ್ತು ಅಶ್ರಫ್ ಆಲಿಕುಂಞಿ, ಮಾಧ್ಯಮ ಸಂಯೋಜಕರಾಗಿರುವ ಪ್ರೊ| ಭಾಸ್ಕರ ಹೆಗ್ಡೆಯವರು ಕಾರ್ಯಕ್ರಮವನ್ನು ನಡೆಸಿಕೊಟ್ಟರು.
ಈ ಸಮಾರಂಭದಲ್ಲಿ ಸಮಿತಿಯ ಎಲ್ಲಾ ಉಪಾಧ್ಯಕ್ಷರು, ಪದಾಧಿಕಾರಿಗಳು ಹಾಗೂ ಸಾಹಿತಿಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.