ಉಜಿರೆ : ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟನಾ ಸಮಾರಂಭ

Advt_NewsUnder_1
Advt_NewsUnder_1
Advt_NewsUnder_1

sa

saa

saaa

saaaaa

saaaaaaa saaaaaaaaaa

ಉಜಿರೆ :   ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ವಠಾರದಲ್ಲಿ ಜ.27ರಿಂದ ಆರಂಭವಾಗಿ ಜ.29ರವರೆಗೆ ನಡೆಯಲಿದೆ.
ಆ ಪ್ರಯುಕ್ತ ಜ.27ರಂದು ಉದ್ಘಾಟನಾ ಸಮಾರಂಭವನ್ನು ಏರ್ಪಡಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಬೆಳ್ಳಿಪ್ಪಾಡಿ ರಮಾನಾಥ ರೈ ವಹಿಸಿದ್ದರು. ಧರ್ಮಸ್ಥಳ ಶ್ರೀ ರಾಮ ಕ್ಷೇತ್ರ, ನಿತ್ಯಾನಂದ ನಗರ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯ ದಿವ್ಯ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಿತು.
ಬೆಂಗಳೂರು ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷೆ ಶ್ರೀಮತಿ ಮಾಲತಿ ಪಟ್ಟಣಶೆಟ್ಟಿ ಕಾರ್ಯಕ್ರಮದ ಉದ್ಗಾಟನೆಯನ್ನು ನೆರವೇರಿಸಿದರು. ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆಯನ್ನು ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮ ಶಾಸಕರು ಹಾಗೂ ಅಧ್ಯಕ್ಷರು, ಕೆ.ವಸಂತ ಬಂಗೇರ ನೆರವೇರಿಸಿದರು.
ನಿಕಟಪೂರ್ವ ಸಮ್ಮೇಳನಾಧ್ಯಕ್ಷರ ನುಡಿಯನ್ನು ಹಿರಿಯ ಶಿಕ್ಷಣ ತಜ್ಞರು ಡಾ| ಎನ್. ಸುಕುಮಾರ ಗೌಡ, ಹಾಗೆಯೇ ಸಮ್ಮೇಳನಾಧ್ಯಕ್ಷರ ನುಡಿಯನ್ನು ಹಾವೇರಿ ಜಾನಪದ ವಿಶ್ವವಿದ್ಯಾನಿಲಯ, ಕುಲಪತಿಗಳು ಡಾ. ಕೆ. ಚಿನ್ನಪ್ಪ ಗೌಡ, ಮಾಡಿದರು.
ಪುಸ್ತಕಗಳ ಲೋಕಾರ್ಪಣೆಯನ್ನು ಹಿರಿಯ ಸಾಹಿತಿಗಳು ಕೆ. ಟಿ. ಗಟ್ಟಿ,
ಪುಸ್ತಕ ಮಳಿಗೆಗಳ ಉದ್ಘಾಟನೆಯನ್ನು ಬೆಂಗಳೂರು ಕನ್ನಡ ಸಾಹಿತ್ಯ ಪರಿಷತ್ತು, ಮಾಜಿ ಅಧ್ಯಕ್ಷರು, ಹರಿಕೃಷ್ಣ ಪುನರೂರು, ಹಳೆ ಪುಸ್ತಕಗಳ ಪ್ರದರ್ಶನ ಮಾರಾಟ ಮಳಿಗೆ ಉದ್ಘಾಟನೆಯನ್ನು ಕರ್ನಾಟಕ ವಿಧಾನ ಪರಿಷತ್ತು ಮುಖ್ಯ ಸಚೇತಕರಾದ ಐವನ್ ಡಿಸೋಜಾ, ಚಿತ್ರಕಲೆ ಮತ್ತು ರಂಗೋಲಿ ಪ್ರದರ್ಶನಗಳ ಉದ್ಘಾಟನೆಯನ್ನು ವಿಧಾನಪರಿಷತ್ತು ಶಾಸಕರು, ಕೋಟ ಶ್ರೀನಿವಾಸ ಪೂಜಾರಿ ನೆರವೇರಿಸಿದರು.
ಪ್ರಧಾನ ಅಭ್ಯಾಗತರಾಗಿ ಬೆಳ್ತಂಗಡಿ ಧರ್ಮಪ್ರಾಂತ್ಯ ಧರ್ಮಾಧ್ಯಕ್ಷರಾಗಿ ಅತೀ ವಂದನೀಯ ಬಿಷಪ್ ಲಾರೆನ್ಸ್ ಮುಕ್ಕುಯಿ ಆಗಮಿಸಿದ್ದರು.
ದ.ಕ. ಜಿಲ್ಲೆ ಭಾ.ಆ.ಸೇ. ಜಿಲ್ಲಾಧಿಕಾರಿ ಡಾ| ಕೆ.ಜಿ. ಜಗದೀಶ, ಟ ಡಿ. ಹರ್ಷೇಂದ್ರ ಕುಮಾರ್ ಧರ್ಮಸ್ಥಳ, ನೀಲಾವರ ಸುರೇಂದ್ರ ಅಡಿಗ ಉಡುಪಿ ಜಿಲ್ಲಾ ಕ.ಸಾ.ಪ ಅಧ್ಯಕ್ಷರು, ಕಾಸರಗೋಡು ಜಿಲ್ಲಾ ಕ.ಸಾ.ಪ ಅಧ್ಯಕ್ಷ ಸುಬ್ರಹ್ಮಣ್ಯ ವಿ. ಭಟ್, ದ.ಕ.ಜಿ.ಪಂ ಉಜಿರೆ ಸದಸ್ಯೆ, ಶ್ರೀಮತಿ ನಮಿತಾ, ಬೆಳ್ತಂಗಡಿ ತಾ.ಪಂ. ಅಧ್ಯಕ್ಷರಾದ ಶ್ರೀಮತಿ ದಿವ್ಯಜ್ಯೋತಿ, ಶ್ರೀಧರ ಜಿ. ಭಿಡೆ ಭಿಡೆ ಮನೆ, ಮುಂಡಾಜೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷರಾದ ವಿಜಯರಾಘವ ಪಡ್ವೆಟ್ನಾಯ, ಪ್ರಸ್ತಾವನೆಗೈದರು. ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಎಸ್. ಪ್ರದೀಪ ಕುಮಾರ ಕಲ್ಕೂರ ಆಶಯ ಭಾಷಣ ಮಾಡಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.