ಕೊಲ್ಪಾಡಿ ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ ಚಾಲನೆ

Advt_NewsUnder_1
Advt_NewsUnder_1

kolpady news copy ಬೆಳಾಲು  :  ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನ ಕೊಲ್ಪಾಡಿ ಇದರ ಪುನರ್‌ಪ್ರತಿಷ್ಟಾಷ್ಠಬಂಧ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರೆ ಫೆ.1ರಿಂದ 6ರವರೆಗೆ ಸುಬ್ರಹ್ಮಣ್ಯ ಮಠಾಧೀಶ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರ ಆಶಿರ್ವಾದದೊಂದಿಗೆ ನೀಲೇಶ್ವರ ಆಲಂಬಾಡಿ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಜರಗಲಿದ್ದು, ಇದರ ಅಂಗವಾಗಿ ಫೆ.೧ರಂದು ಸಾಮೂಹಿಕ ಪ್ರಾರ್ಥನೆಯ ಬಳಿಕ ಬ್ರಹ್ಮಕಲಶೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನಡೆಯಿತು.
ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ಎಸ್.ಪ್ರದೀಪ ಕುಮಾರ್ ಕಲ್ಕೂರ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಧರ್ಮದರ್ಶಿ ಬ್ರಹ್ಮಕಲಶೋತ್ಸವದ ಮಾರ್ಗದರ್ಶಕರಾದ ಯು.ವಿಜಯ ರಾಘವ ಪಡ್ವೆಟ್ನಾಯ, ಅನುವಂಶಿಯ ಮೊಕ್ತೇಸರರುಗಳಾದ ಕೆ.ಸೂರ್ಯನಾರಾಯಣ ಶರ್ಮ, ಕೆ.ಶ್ರೀನಿವಾಸ್ ಭಟ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಡಾ| ಎಂ.ಪಿ ಶ್ರೀನಾಥ್, ಮಂಗಳೂರು ಶಿಕ್ಷಣ ತಜ್ಞ ಎಂ.ಬಿ ಪುರಾಣಿಕ್, ಕೆ.ರಾಜಾರಾಮ ಶರ್ಮ ಕೊಲ್ಪಾಡಿ, ಬೆಳಾಲು ಶ್ರೀ.ಧ.ಮಂ ಮುಖ್ಯೋಪಾಧ್ಯಾಯ ರಾಮಕೃಷ್ಣ ಭಟ್ ಚೊಕ್ಕಾಡಿ, ಪ್ರಧಾನ ಅರ್ಚಕ ಸುಬ್ರಾಯ ನೂರಿತ್ತಾಯ ಹಾಗೂ ಇನ್ನಿತರ ಗಣ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಉಗ್ರಾಣ ಮುಹೂರ್ತ ಬೆಳಾಲು ಗ್ರಾಮಸ್ಥರಿಂದ ಹಸಿರುವಾಣಿ ಸಮರ್ಪಣೆಗೊಂಡಿತು. ಫೆ.9ರವರೆಗೆ ವಿವಿಧ ವೈಧಿಕ ಕಾರ್ಯಕ್ರಮಗಳು ಜರಗಲಿದೆ. ಫೆ.6ರಂದು ಶ್ರೀ ಸುಬ್ರಹ್ಮಣ್ಯ ದೇವರ ಪ್ರತಿಷ್ಠೆ, ಅಷ್ಠಬಂಧ ಕ್ರಿಯೆ, ಬ್ರಹ್ಮಕಲಶಾಭಿಷೇಕ, ಸಂಜೆ ಧಾರ್ಮಿಕ ಸಭೆ ನಡೆಯಲಿದೆ. ಚಿತ್ರ : ಶ್ರದ್ಧಾ, ಉಜಿರೆ

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.