ವಿದ್ಯಾರ್ಥಿಗಳು ಸತತ ಶ್ರಮಪಟ್ಟರೆ ಉತ್ತಮ ಫಲಿತಾಂಶ: ಬಂಗೇರ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

Prerana shibhira copyಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪ್ರೇರಣಾ ಶಿಬಿರ

ಬೆಳ್ತಂಗಡಿ: ದ.ಕ. ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೆಳ್ತಂಗಡಿ, ಶಿಶು ಮತ್ತು ಮಹಿಳಾ ಅಭಿವೃದ್ಧಿ ಇಲಾಖೆ ಬೆಳ್ತಂಗಡಿ, ಜಮ್ಯೀಯತುಲ್ ಫಲಾಹ್ ಬೆಳ್ತಂಗಡಿ ಘಟಕ ಇದರ ಸಹಯೋಗದಲ್ಲಿ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಪ್ರೇರಣಾ ಶಿಬಿರ ಹಾಗೂ ಪೋಷಕರೊಂದಿಗೆ ಸಂವಾದ ಕಾರ್ಯಕ್ರಮ ಫೆ.15ರಂದು ಇಲ್ಲಿಯ ಶ್ರೀ ಧ.ಮಂ. ಸಭಾಭವನದಲ್ಲಿ ಜರುಗಿತು.
ಬೆಳ್ತಂಗಡಿ ಕ್ಷೇತ್ರದ ಶಾಸಕ ಕೆ. ವಸಂತ ಬಂಗೇರ ಅವರು ಶಿಬಿರವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿ, ಈ ಬಾರಿ ಎಸ್ಸೆಸ್ಸೆಲ್ಸಿಯಲ್ಲಿ ಪರೀಕ್ಷೆಗೆ ಹಾಜರಾದ ತಾಲೂಕಿನ ಎಲ್ಲಾ ವಿದ್ಯಾರ್ಥಿಗಳು ಪಾಸಾಗಿ ಉತ್ತಮ ಫಲಿತಾಂಶ ಬರಬೇಕು ಎಂಬ ಉದ್ದೇಶದಿಂದ ಈ ಶಿಬಿರ ಹಮ್ಮಿಕೊಳ್ಳಲಾಗಿದೆ. ವಿದ್ಯಾರ್ಥಿಗಳು ಸತತ ಶ್ರಮವಹಿಸಿ ಉತ್ತಮ ಸಾಧನೆ ಮಾಡಬೇಕು ಎಂದರು. ಪೋಷಕರು ವಿದ್ಯಾರ್ಥಿಗಳಿಂದ ಮನೆ ಕೆಲಸವನ್ನು ಮಾಡಿಸಿದರೆ ಅವರಿಗೆ ಓದಲು ಸಮಯ ಸಿಗುವುದಿಲ್ಲ. ಆದ್ದರಿಂದ ವಿದ್ಯಾರ್ಥಿಗಳಿಂದ ಯಾವುದೇ ಕೆಲಸವನ್ನು ಮಾಡಿಸದೇ ಅವರಿಗೆ ಓದಲು ಹೆಚ್ಚು ಸಮಯ ಸಿಗುವಂತೆ ಮಾಡಬೇಕು ಎಂದು ತಿಳಿಸಿದರು.
ಇಂದು ಸರಕಾರಿ ಶಾಲೆಯಲ್ಲಿ ಉತ್ತಮ ಶಿಕ್ಷಣ ದೊರೆಯುತ್ತಿದೆ. ಎಲ್ಲಾ ಶಿಕ್ಷಕರು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳ ಸಾಧನೆ, ಅಧ್ಯಾಪಕರ ಪ್ರಾಮಾಣಿಕ ಪ್ರಯತ್ನ ಜೊತೆಗೆ ಹೆತ್ತವರ ಸಹಕಾರ ಇದ್ದರೆ ಶಾಲೆಗೆ ಉತ್ತಮ ಫಲಿತಾಂಶ ಬರುತ್ತದೆ ಎಂಬುದಕ್ಕೆ ಗುರುವಾಯನಕೆರೆ ಪ್ರೌಢ ಶಾಲೆ ಉದಾರಣೆಯಾಗಿದೆ. ಈ ವರ್ಷ 6ನೇ ಬಾರಿ ಶೇ. 100 ಫಲಿತಾಂಶ ಪಡೆಯಲು ಈ ಶಾಲೆಯವರು ಸತತ ಪ್ರಯತ್ನಗಳನ್ನು ಮಾಡುತ್ತಿದ್ದಾರೆ ಎಂದು ತಿಳಿಸಿದರು.
ಜಿಲ್ಲಾ ವಿದ್ಯಾಂಗ ಉಪನಿರ್ದೇಶಕ ವಾಲ್ಟರ್ ಡಿ’ಮೆಲ್ಲೋ ಮಾತನಾಡಿ ದ.ಕ ಜಿಲ್ಲೆಯಲ್ಲಿ ಬೆಳ್ತಂಗಡಿ ತಾಲೂಕು ಶಿಕ್ಷಣ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದ್ದು, ಇದಕ್ಕೆ ಇಲ್ಲಿಯ ಮುಖ್ಯ ಶಿಕ್ಷಕರು ಹಾಗೂ ಸಹ ಶಿಕ್ಷಕರು, ಶಿಕ್ಷಕರ ಸಂಘಟನೆಗಳು ಕಾರಣರಾಗಿದ್ದಾರೆ ಎಂದರು. ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಇನ್ನೂ ಕೇವಲ ೪೨ ದಿನಗಳು ಮಾತ್ರ ಬಾಕಿಯಿದ್ದು, ವಿದ್ಯಾರ್ಥಿಗಳು ಓದಿನ ಕಡೆಗೆ ಹೆಚ್ಚು ಗಮನ ಹರಿಸಿ ಉತ್ತಮ ಫಲಿತಾಂಶವನ್ನು ಪಡೆಯಲು ಶ್ರಮವಹಿಸುವಂತೆ ಕರೆ ನೀಡಿದರು.
ದ.ಕ. ಜಿ.ಪಂ. ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಶಾಹುಲ್ ಹಮೀದ್ ಪ್ರಾಸ್ತಾವಿಕವಾಗಿ ಮಾತನಾಡಿ ಶಿಬಿರದ ಉದ್ದೇಶಗಳನ್ನು ವಿವರಿಸಿದರು. ನ.ಪಂ ಅಧ್ಯಕ್ಷ ಮುಗುಳಿ ನಾರಾಯಣ ರಾವ್, ಜಿ.ಪಂ. ಸದಸ್ಯೆ ಮಮತಾ ಎಂ. ಶೆಟ್ಟಿ, ತಾ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷ ಸುಧೀರ್ ಆರ್.ಸುವರ್ಣ, ಜಮ್ಯೀಯತುಲ್ ಫಲಾಹ್ ತಾಲೂಕು ಅಧ್ಯಕ್ಷ ಅಬ್ಬೋನು ಮದ್ದಡ್ಕ, ಪ್ರಧಾನ ಕಾರ್ಯದರ್ಶಿ ಹಾಜಿ ಅಬ್ದುಲ್‌ಲತೀಫ್ ಸಾಹೇಬ್, ಮಾಜಿ ಅಧ್ಯಕ್ಷ ಉಮ್ಮರ್‌ಕುಂಞ ನಾಡ್ಜೆ, ಜಿ.ಪಂ. ಮಾಜಿ ಸದಸ್ಯ ರಾಜಶೇಖರ ಅಜ್ರಿ, ತಾ.ಪಂ. ಸದಸ್ಯರಾದ ಗೋಪಿನಾಥ ನಾಯಕ್, ಜಯರಾಮ, ಜಮ್ಯೀಯತುಲ್ ಫಲಾಹ್‌ನ ಜಿಲ್ಲಾ ಕಾರ್ಯದರ್ಶಿ ಜಮೀರ್‌ಷಾ, ತಾಲೂಕು ಸದಸ್ಯರಾದ ಕಾಸಿಂ ಪದ್ಮುಂಜ, ಅಹಮ್ಮದ್ ಉಜಿರೆ, ಎಸ್.ಎಂ. ಕೋಯ, ಶಿಶುಅಭಿವೃದ್ಧಿ ಅಧಿಕಾರಿ ಸರಸ್ವತಿ, ಪ್ರೌಢ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರಾಜಗುರು ಹೆಬ್ಬಾರ್, ಶಿಕ್ಷಣ ಸಮನ್ವಯಾಧಿಕಾರಿ ಗಣೇಶ್ ಉಪಸ್ಥಿತರಿದ್ದರು.
ಜಿಲ್ಲಾ ಪ್ರಶಸ್ತಿ ಪಡೆದ, ಗಣಿತ ಲೋಕದ ರೂವಾರಿ ನಡ ಪ್ರೌಢ ಶಾಲಾ ಶಿಕ್ಷಕ ಯಾಕೂಬ್ ಇವರಿಗೆ ಸನ್ಮಾನ ಹಾಗೂ ವಿಕಲಾಂಗ ನಡ ಶಾಲೆಯ ವಿದ್ಯಾರ್ಥಿ ವಸೀಂ ಅಕ್ರಮ್‌ಗೆ ಜಮ್ಯೀಯತುಲ್ ಫಲಾಹ್ ವತಿಯಿಂದ ನೀಡಿದ ತ್ರಿಚಕ್ರ ವಾಹನದ ಕೀಯನ್ನು ಶಾಸಕರು ಹಸ್ತಾಂತರಿಸಿದರು. ಹಾಜಿ ಅಬ್ದುಲ್ ಲತೀಫ್ ಸಾಹೇಬ್ ಕುರಾನ್ ಪಠಿಸಿದರು. ವಾಣಿ ಪ್ರೌಢ ಶಾಲಾ ವಿದ್ಯಾರ್ಥಿಗಳ ಪ್ರಾರ್ಥನೆ ಬಳಿಕ ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಕೇಸರಿ ಸ್ವಾಗತಿಸಿದರು.
ಶಿಕ್ಷಣ ಸಂಯೋಜಕ ಸುಭಾಶ್ ಜಾದವ್ ಕಾರ್ಯಕ್ರಮ ನಿರೂಪಿಸಿ, ರಮೇಶ್ ಕೆ.ವಂದಿಸಿದರು. ಶಿಬಿರದಲ್ಲಿ ಸುಮಾರು 600ಕ್ಕೂ ಹೆಚ್ಚು ವಿದ್ಯಾರ್ಥಿಗಳು ಷೋಷಕರ ಜೊತೆ ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.