HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿಗೆ ಅತ್ಯುತ್ತಮ ಐಎಸ್‌ಟಿಇ ಘಟಕ ಪ್ರಶಸ್ತಿ

SDM ISTE prashasthi copyಉಜಿರೆ : ದಿಲ್ಲಿಯ ಭಾರತೀಯ ತಾಂತ್ರಿಕ ಶಿಕ್ಷಣ ಸಮಾಜ (ಐಎಸ್‌ಟಿಇ) ಇವರು ಕೊಡ ಮಾಡುವ ಅತ್ಯುತ್ತಮ ಐಎಸ್‌ಟಿಇ ಘಟಕ ಪ್ರಶಸ್ತಿಯನ್ನು ಉಜಿರೆ ಎಸ್‌ಡಿಎಂ ತಾಂತ್ರಿಕ ಮಹಾವಿದ್ಯಾಲ ಯಕ್ಕೆ ನೀಡಿ ಗೌರವಿಸಿದೆ. ಪಂಜಾಬಿನ ಲೂದಿಯಾನದಲ್ಲಿ ನಡೆದ 46ನೇ ರಾಷ್ಟ್ರೀಯ ವಾರ್ಷಿಕ ಕಾರ್ಯಕಾರಿಣಿ ಯಲ್ಲಿ ಈ ಪ್ರಶಸ್ತಿ ಪ್ರದಾನ ನಡೆಯಿತು. ಕಾಲೇಜಿನ ಪ್ರಾಚಾರ್ಯ ಡಾ| ಕೆ. ಸುರೇಶ್ ಅವರು ಪ್ರಶಸ್ತಿ ಸ್ವೀಕರಿಸಿದ್ದಾರೆ. ಈ ಹಿಂದೆಯೂ ಎರಡು ಬಾರಿ ಈ ಕಾಲೇಜು ರಾಜ್ಯಮಟ್ಟದಲ್ಲಿ ಉತ್ತಮ ಘಟಕ ಪ್ರಶಸ್ತಿ ಪಡೆದಿದ್ದು ಇದೀಗ ಸತತ 2 ಬಾರಿ ರಾಷ್ಟ್ರಮಟ್ಟದ ಪ್ರಶಸ್ತಿ ಗಳಿಸಿಕೊಂಡಿದೆ. ಈ ಪ್ರಶಸ್ತಿಯ ಹಿಂದೆ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಸಕ್ರೀಯವಾಗಿ ಶ್ರಮಿಸಿದ್ದಾರೆ ಎಂದು ಪ್ರಾಂಶುಪಾಲರು ತಿಳಿಸಿದರು.
ಈ ಸಂಬಂಧ ಫೆ. 19 ರಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಬೀಡಿನಲ್ಲಿ ಸಂಸ್ಥೆಯ ಅಧ್ಯಕ್ಷರೂ ಆಗಿರುವ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಕಾರ್ಯದರ್ಶಿ ಡಾ| ಬಿ. ಯಶೋವರ್ಮ ಅವರ ಸಮ್ಮುಖ ಎಸ್‌ಡಿಐ ಐಟಿ ಕಾಲೇಜಿನ ಪ್ರಾಚಾರ್ಯ ಡಾ| ಕೆ ಸುರೇಶ್ ಅವರು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದರು.
ಎಸ್‌ಡಿಎಂ ಐಟಿ ಕಾಲೇಜು 2007 ರಲ್ಲಿ ಸ್ಥಾಪನೆಯಾಗಿರುವ ಗ್ರಾಮೀಣ ಪ್ರದೇಶದ ಸಂಸ್ಥೆಯಾಗಿದ್ದು ಇಲ್ಲಿನ ವಿದ್ಯಾರ್ಥಿಗಳಿಗೆ ವಿಶ್ವದರ್ಜೆಯ ಉತ್ತಮ ತಾಂತ್ರಿಕ ಶಿಕ್ಷಣವನ್ನು ನೀಡುತ್ತಾ ಬರುತ್ತಿದೆ. ಉಪನ್ಯಾಸಕರಿಗೆ ಹಾಗೂ ವಿದ್ಯಾರ್ಥಿಗಳಿಗಾಗಿ ಉದ್ಯಮಶೀಲತಾ ಕೌಶಲ್ಯಾಭಿವೃದ್ಧಿ ಕಾರ್ಯಾಗಾರಗಳನ್ನು ನಿಯ ಮಿತವಾಗಿ ನಡೆಸಿಕೊಂಡು ಬರುತ್ತಿದ್ದು ಇದರ ಸದುಪಯೋಗವನ್ನು ರಾಜ್ಯಾಧ್ಯಂತ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕವೃಂದ ಪ್ರಯೋಜನ ಪಡೆಯುತ್ತಿದೆ.

Advt_NewsUnder_
Advt_NewsUnder_
Advt_NewsUnder_

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.