ಉಜಿರೆ : ಮಹಿಳೆಯರ ಸಬಲೀಕರಣಕ್ಕೆ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯು ಕಾರ್ಯನಿರ್ವಹಿಸುತ್ತಿದ್ದು, ಮಹಿಳೆಯರು ತಯಾರಿಸಿದ ಉತ್ಪನ್ನಗಳನ್ನು ಮಾರುಕಟ್ಟೆಗೆ ಒದಗಿಸುವ ಉದ್ದೇಶದಿಂದ ಉಜಿರೆಯ ಟಿ.ಬಿ ಕ್ರಾಸ್ ಬಳಿ ಇರುವ ಸಿರಿ ಕೇಂದ್ರ ಕಛೇರಿಯಲ್ಲಿ ಉತ್ಪನ್ನಗಳ ಬೃಹತ್ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಆಯೋಜಿಸಲಾಗಿದೆ. ಸಾರ್ವಜನಿಕರು ಇಂತಹ ಉತ್ಪನ್ನಗಳನ್ನು ಖರೀದಿಸುವ ಮೂಲಕ ಮಹಿಳೆಯರ ಸಬಲೀಕರಣಕ್ಕೆ ಕೈ ಜೋಡಿಸಬೇಕೆಂದು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ| ಬಿ.ಯಶೋವರ್ಮರವರು ನುಡಿದರು.
ಅವರು ಮಾ.4 ರಂದು ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಉದ್ಘಾಟಿಸಿ ಮಾತನಾಡಿದರು. ಶ್ರೀ ಧರ್ಮಸ್ಥಳ ಸಿರಿ ಗ್ರಾಮೊದ್ಯೋಗ ವತಿಯಿಂದ ಸಿರಿ ಕೇಂದ್ರ ಕಛೇರಿಯಲ್ಲಿ ಮಾ.4 ರಿಂದ 28ರ ವರೆಗೆ ಸಿರಿ ಉತ್ಪನ್ನಗಳ ಬೃಹತ್ ಪ್ರದರ್ಶನ ಹಾಗೂ ಮಾರಾಟ ಮಾಡುತ್ತಿದ್ದು, ಗ್ರಾಹಕರ ಅನುಕೂಲಕ್ಕಾಗಿ ಬೆಳಿಗ್ಗೆ 9.00 ರಿಂದ ರಾತ್ರಿ 8.00ರ ವರೆಗೆ ಹಾಗೂ ಭಾನುವಾರವೂ ಮಳಿಗೆ ತೆರೆಯುತ್ತಿದ್ದು, ಇವರ ಪ್ರಯೋಜನವನ್ನು ಗ್ರಾಹಕರು ಪಡೆಯಬೇಕೆಂದು ಸಿರಿ ಸಂಸ್ಥೆಯ ನಿರ್ದೇಶಕರಾದ ಶ್ರೀಮತಿ ಮನೋರಮಾ ಭಟ್ ವಿನಂತಿಸಿದರು.
ಕಾರ್ಯಕ್ರಮದಲ್ಲಿ ಶಾಂತಿವನ ಟ್ರಸ್ಟ್ನ ಕಾರ್ಯದರ್ಶಿ ಸೀತಾರಾಮ ತೋಳ್ಪಡಿತ್ತಾಯ, ರೋಟರಿ ಸಂಸ್ಥೆಯ ಅಧ್ಯಕ್ಷ ಡಿ.ಎಂ ಗೌಡ, ಎಸ್.ಕೆ.ಡಿ.ಆರ್.ಡಿ.ಪಿ ಬೆಳ್ತಂಗಡಿ ತಾಲೂಕು ಯೋಜನಾಧಿಕಾರಿ ಶ್ರೀಮತಿ ರೂಪಾ ಜಿ.ಜೈನ್, ಸಿರಿ ಸಿಬ್ಬಂದಿಗಳು ಮತ್ತಿತರರು ಉಪಸ್ಥಿತರಿದ್ದರು.
ಸಿರಿ ಸಂಸ್ಥೆಯ ಯೋಜನಾಧಿಕಾರಿ ರೋಹಿತಾಕ್ಷ ಸ್ವಾಗತಿಸಿ, ಸತೀಶ್ ಕಾರ್ಯಕ್ರಮ ನಿರೂಪಿಸಿದರು.