ಮರೋಡಿ: ಆಳ್ವಾಸ್ ಕಾಲೇಜಿನ ಸಮುದಾಯ ಶಿಬಿರ

marody alvas shibira copy

ಮರೋಡಿ : ದೇಶದ ವಿದ್ಯಾವಂತ ಯುವಕರು ಉದ್ಯೋಗಕ್ಕಾಗಿ ಪಟ್ಟಣ, ವಿದೇಶಗಳನ್ನು ಅವಲಭಿಸುತ್ತಿದ್ದಾರೆ. ಇದರಿಂದಲೇ ಕೃಷಿಯ ಆಶಾಭಾವನೆ ಕಡಿಮೆ ಆಗಿದೆ. ರೈತರ ಮಕ್ಕಳು ಹಳ್ಳಿಯಲ್ಲೇ ಉಳಿಯುವಂತಾಗಬೇಕು. ಅದಕ್ಕೆ ಇಂತಹ ಸಮುದಾಯ ಶಿಬಿರಗಳು ಪ್ರೇರಣೆಯಾಗಲಿ ಎಂದು ಶಿರ್ತಾಡಿ ಶಿಮುಂಜೆ ಗುತ್ತುವಿನ ಸಂಪತ್ ಸಾಮ್ರಾಜ್ಯ ಹೇಳಿದರು.

ಅವರು ಮಾ. ೧೦ ರಂದು ಮರೋಡಿ ಗ್ರಾ.ಪಂ. ಸಭಾಭವನದಲ್ಲಿ ಮೂಡಬಿದಿರೆ ಆಳ್ವಾಸ್ ಕಾಲೇಜು ಸಮಾಜಕಾರ್ಯ ವಿಭಾಗ, ಗ್ರಾಮ ಪಂಚಾಯತು ಮರೋಡಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಜರಗಿದ ಸಮುದಾಯದ ಶಿಬಿರದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.
ಆಳ್ವಾಸ್ ಹೋಮಿಯೋಪತಿ ಕಾಲೇಜಿನ ಪ್ರಾಂಶುಪಾಲ ಪ್ರವೀಣ್‌ರಾಜ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಬೆಳ್ತಂಗಡಿ ಎಪಿಎಂಸಿ ನೂತನ ಅಧ್ಯಕ್ಷ ಸತೀಶ್ ಕೆ. ಕಾಶಿಪಟ್ಣ ಅವರು ಮಾತನಾಡಿ, ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿರುವ ಕಾಲೇಜು ವಿದ್ಯಾರ್ಥಿಗಳಿಂದ ಗ್ರಾಮೀಣ ಭಾಗಗಳಲ್ಲಿ ನಡೆಯುವ ಇಂತಹ ಶಿಬಿರಗಳು ಹಳ್ಳಿಯ ಜನತೆಯ ಅಭಿವೃದ್ಧಿಗೆ ಪೂರಕವಾಗಿದೆ ಎಂದರು.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ ವಿವೇಕ್ ಆಳ್ವ, ನಾರಾವಿ ಜಿ.ಪಂ. ಸದಸ್ಯ ಪಿ. ಧರಣೇಂದ್ರ ಕುಮಾರ್, ಮರೋಡಿ ಗ್ರಾ.ಪಂ. ಸದಸ್ಯ ಸದಾನಂದ ಶೆಟ್ಟಿ, ಪೆರಾಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಸಂಜೀವ ಶೆಟ್ಟಿ, ಮಾವಿನಕಟ್ಟೆ ಸ.ಹಿ.ಪ್ರಾ. ಶಾಲಾ ಮುಖ್ಯ ಶಿಕ್ಷಕ ವಿಷ್ಣುಮೂರ್ತಿ, ಆಳ್ವಾಸ್ ಆರ್ಯುವೇದಿಕ್ ಕಾಲೇಜಿನ ಸಹ ಪ್ರಾಧ್ಯಾಪಕ ಡಾ| ಪ್ರದೀಪ್, ಆಳ್ವಾಸ್ ಸಮಾಜಕಾರ್ಯ ವಿಭಾಗದ ಮುಖ್ಯಸ್ಥೆ ಡಾ| ಮಧುಮಾಲ, ಪೆರಾಡಿ ಪ್ರಾ.ಕೃ.ಪ.ಸ. ಸಂಘದ ಮುಖ್ಯಕಾರ್ಯ ನಿರ್ವಹಣಾಧಿಕಾರಿ ಶೇಖ್ ಲತೀಫ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಆಳ್ವಾಸ್ ಸಮಾಜಕಾರ್ಯ ವಿಭಾಗದ ಉಪನ್ಯಾಸಕಿ ಹಾಗೂ ಶಿಬಿರದ ಸಂಯೋಜಕಿ ಪವಿತ್ರ ಪ್ರಸಾದ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಆಳ್ವಾಸ್ ಸಮಾಜಕಾರ್ಯ ವಿಭಾಗದ ಉಪನ್ಯಾಸಕಿ ಸ್ವಪ್ನ ಆಳ್ವ ಸ್ವಾಗತಿಸಿ ವಿದ್ಯಾರ್ಥಿನಿ ದಿವ್ಯಾ ವಂದಿಸಿದರು. ವಿದ್ಯಾರ್ಥಿಗಳಾದ ಚರಣ್‌ರಾಜ್ ಮತ್ತು ಕು| ಅಕಿತಾ ಕಾಮತ್ ಕಾರ್ಯಕ್ರಮ ನಿರೂಪಿಸಿದರು. ಮಾ.೧೨ರವರೆಗೆ ಜರಗಲಿರುವ ಶಿಬಿರದಲ್ಲಿ ನೇತ್ರ ತಪಾಸಣಾ ಶಿಬಿರ, ಮಾಹಿತಿ ಶಿಕ್ಷಣ, ಜಾಗೃತಿ ಅಭಿಯಾನ, ಬೀದಿ ನಾಟಕ, ಉಚಿತ ಆರೋಗ್ಯ ತಪಾಸಣೆ, ಆಳ್ವಾಸ್ ಆರೋಗ್ಯ ಕಾರ್ಡ್ ವಿತರಣೆ ಹಾಗೂ ವಿವಿಧ ಮನರಂಜನಾ ಕಾರ್ಯಕ್ರಮ ಜರಗಲಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.