ವಿಶ್ವ ಮಹಿಳಾ ದಿನಾಚರಣೆ

Advt_NewsUnder_1
Advt_NewsUnder_1
Advt_NewsUnder_1

mahila dinacharaneಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಬೆಳ್ತಂಗಡಿ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಬೆಳ್ತಂಗಡಿ, ವಿವಿಧ ಸರಕಾರಿ ಇಲಾಖೆಗಳು, ಸರಕಾರಿ ನೌಕರರ ಸಂಘ ಬೆಳ್ತಂಗಡಿ, ನಿವೃತ್ತ ಸರಕಾರಿ ನೌಕರರ, ಹಿರಿಯ ನಾಗರಿಕರ ಸಂಘ ಬೆಳ್ತಂಗಡಿ, ಮಹಿಳಾ ಮಂಡಲಗಳ ಒಕ್ಕೂಟ, ಅಂಗನವಾಡಿ ಕಾರ್ಯಕರ್ತರ, ಸಹಾಯಕಿಯರ ಸಂಘ ಬೆಳ್ತಂಗಡಿ, ತಾಲೂಕು ಸ್ತ್ರೀ ಬ್ಲಾಕ್ ಸೊಸೈಟಿ, ಕಪಿಲ ಸ್ತ್ರೀಶಕ್ತಿ ಮಹಿಳಾ ವಿವಿಧೋದ್ಧೇಶ ಸಹಕಾರಿ ಸಂಘ ಬೆಳ್ತಂಗಡಿ, ಜ್ಞಾನಜ್ಯೋತಿ ಆರ್ಥಿಕ ಸಾಕ್ಷರತಾ ಕೇಂದ್ರ ಬೆಳ್ತಂಗಡಿ ಮತ್ತು ಮಹಿಳಾ ಪೂರಕ ಪೌಷ್ಟಿಕ ಆಹಾರ ತಯಾರಿಕ ಘಟಕ ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆಯನ್ನು ಮಾ. 13 ರಂದು ಬೆಳ್ತಂಗಡಿ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ಆಚರಿಸಲಾಯಿತು.
ಕಾರ್ಯಕ್ರಮವನ್ನು ಬೆಳ್ತಂಗಡಿ ಶಾಸಕ ವಸಂತ ಬಂಗೇರ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಬೆಳ್ತಂಗಡಿ ನಗರ ಪಂಚಾಯತ್ ಅಧ್ಯಕ್ಷ ಮುಗುಳಿ ನಾರಾಯಣ ರಾವ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜಿ.ಪಂ ಸದಸ್ಯ ಶಾಹುಲ್ ಹಮೀದ್ ಕೆ.ಕೆ, ಜಿ.ಪಂ ಸದಸ್ಯ ಕೊರಗಪ್ಪ ನಾಕ, ಜಿ.ಪಂ ಸದಸ್ಯೆ ಮಮತಾ ಎಂ. ಶೆಟ್ಟಿ, ಬೆಳ್ತಂಗಡಿ ತಾ.ಪಂ ಅಧ್ಯಕ್ಷೆ ಶ್ರೀಮತಿ ದಿವ್ಯಜ್ಯೋತಿ, ಬೆಳ್ತಂಗಡಿ ತಾ. ಪಂ ಉಪಾಧ್ಯಕ್ಷೆ ವೇದಾವತಿ, ನಗರ ಪಂಚಾಯತ್ ಸದಸ್ಯ ಗೋಪಿನಾಥ್ ನಾಯಕ್, ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ಜಯಕೀರ್ತಿ ಜೈನ್, ಯುವಜನ ಸೇವಾ ಮತ್ತು ಕ್ರೀಡಾ ಅಧಿಕಾರಿ ಪ್ರಭಾಕರ ನಾರಾವಿ, ಬೆಳ್ತಂಗಡಿ ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಸುಧೀರ್ ಆರ್. ಸುವರ್ಣ, ಬೆಳ್ತಂಗಡಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಸುಂದರ ಪೂಜಾರಿ, ಬೆಳ್ತಂಗಡಿ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ನರೇಂದ್ರ ಸಿ.ಆರ್., ಬೆಳ್ತಂಗಡಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ತಾಲೂಕು ಆರೋಗ್ಯ ಅಧಿಕಾರಿ ಡಾ. ಕಲಾಮಧು, ಮಂಗಳೂರು ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟ ಅಧ್ಯಕ್ಷೆ ಸವಿತಾ ಜಯದೇವ್, ಉಪಸ್ಥಿತರಿದ್ದರು. ಬೆಳ್ತಂಗಡಿ ಜ್ಞಾನಜ್ಯೋತಿ ಆರ್ಥಿಕ ಸಾಕ್ಷರತಾ ಕೇಂದ್ರದ ಶ್ರೀಮತಿ ಉಷಾ ಕಾಮತ್ ಮತ್ತು ಬೆಳ್ತಂಗಡಿ ನ್ಯಾಯವಾದಿ ಶ್ರೀಮತಿ ಸ್ವರ್ಣಲತಾ ಉಪನ್ಯಾಸ ನೀಡಿದರು. ಇಂದಬೆಟ್ಟು ವಲಯ ಅಂಗನವಾಡಿಯ ದಮಯಂತಿ ಬಳಗ ಪ್ರಾರ್ಥನೆ ಹಾಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಸರಸ್ವತಿ ಸ್ವಾಗತಿಸಿ, ಉಷಾ ಲಕ್ಷ್ಮಣ ಗೌಡ ಮತ್ತು ರತ್ನಾವತಿ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.