ಕುರಾಯ ಶ್ರೀ ಸದಾಶಿವ ದೇವಸ್ಥಾನ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

DSC01901 copyಬಂದಾರು: ಕುರಾಯ ಶ್ರೀ ಸದಾಶಿವ ದೇವಸ್ಥಾನ ಬಂದಾರು ಇದರ ನವೀಕರಣ ಪನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶಾಭಿಷೇಕ ಮಹೋತ್ಸವ ಮತ್ತು ಜಾತ್ರಾಮಹೋತ್ಸವ ಮಾ.28ರಿಂದ ಎ.5ರ ವರೆಗೆ ನಡೆಯಲಿದೆ. ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಮಾ.12 ರಂದು ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷರು ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಆಡಳಿತ ಮೊಕ್ತೇಸರ ಯು. ವಿಜಯರಾಘವ ಪಡ್ವೆಟ್ನಾಯ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಹರೀಶ್ ಪೂಂಜ, ಜೀರ್ಣೋದ್ಧಾರ ಸಮಿತಿಯ ಪ್ರಧಾನ ಕಾರ್ಯದರ್ಶಿ ತಿಮ್ಮಯ್ಯ ಗೌಡ, ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಧರ್ಣಪ್ಪ ಗೌಡ ಅಂಡಿಲ, ಜೀರ್ಣೋದ್ಧಾರ ಸಮಿತಿಯ ಜೊತೆ ಕಾರ್ಯದರ್ಶಿ ಅಶೋಕ ಕಾನಿಷ್ಕ, ಬಂದಾರು ಗ್ರಾ.ಪಂ. ಅಧ್ಯಕ್ಷ ಉದಯ ಬಿ.ಕೆ., ತಾ.ಪಂ. ಸದಸ್ಯ ಕೃಷ್ಣಯ್ಯ ಆಚಾರ್ಯ, ಪ್ರಚಾರ ಸಮಿತಿಯ ಸಂಚಾಲಕ ಮೋಹನ ಬಂಗೇರ, ಸೇವಾ ಪ್ರತಿನಿಧಿ ಡೊಂಬಯ್ಯ ಗೌಡ, ನಿರಂಜನ್ ಗೌಡ, ಸಮಿತಿಯ ಪದಾಧಿಕಾರಿಗಳಾದ ರುಕ್ಮಯ್ಯ ಮುತ್ತಾಡಿ ಪ್ರಶಾಂತ್ ನಿರ್ಮೂಡ, ಶೀನಪ್ಪ ಗೌಡ ನಡುಮಜಲು, ಭರತ್ ಕುರಿಯ, ವಾಸಪ್ಪ ಗೌಡ ಅತ್ತಾವು ಮೊದಲಾದವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.