ಶ್ರೀನಿವಾಸ ಕಲ್ಯಾಣೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Advt_NewsUnder_1
Advt_NewsUnder_1
Advt_NewsUnder_1

kalyanostava copy

kalyanostava poonja copyಅರಸಿನಮಕ್ಕಿ: ಲೋಕಕಲ್ಯಾಣಾರ್ಥವಾಗಿ ಸಕಲ ಆಸ್ತಿಕ ಸಜ್ಜನರ ಸಹಕಾರಗಳಿಂದ ಶಿಬಾಜೆ ಶ್ರೀ ಕ್ಷೇತ್ರ ಮೊಂಟೆತಡ್ಕ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ವತಿಯಿಂದ ಎ. ೮ರಂದು ಜರಗಲಿರುವ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ಬೆಳ್ತಂಗಡಿಯ ಸುವರ್ಣ ಆರ್ಕೆಡ್ ಸಭಾಂಗಣದಲ್ಲಿ ಮಾ. 22ರಂದು ಜರಗಿತು.
ಬೆಳ್ತಂಗಡಿ ಮಾಜಿ ಶಾಸಕ ಕೆ. ಪ್ರಭಾಕರ ಬಂಗೇರ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿ, ಸಾಮೂಹಿಕವಾಗಿ ನಡೆಯುವ ಈ ಕಾರ್ಯಕ್ರಮದಿಂದ ಇಡೀ ಊರಿನಲ್ಲಿ ಸಂಭ್ರಮದ, ಭಕ್ತಿಯ ವಾತಾವರಣ ನಿರ್ಮಾಣವಾಗಲಿದೆ ಎಂದರು. ಬಿಜೆಪಿ ಯುವಮೋರ್ಚಾದ ಜಿಲ್ಲಾಧ್ಯಕ್ಷ ಹರೀಶ್ ಪೂಂಜ ಮಾತನಾಡಿ, ಜಗತ್ತಿನ ತಂದೆ-ತಾಯಿಯಾದ ಲಕ್ಷ್ಮೀನಾರಾಯಣ ಸ್ವರೂಪಿಯಾದ ಸಂಪತ್ತಿನ ಅಧಿಪತಿ ಶ್ರೀನಿವಾಸ-ಪದ್ಮಾವತಿಯವರ ಕಲ್ಯಾಣೋತ್ಸವದಿಂದ ಪಾಪ ಕ್ಷಯ, ಅವಿವಾಹಿತರಿಗೆ ವಿವಾಹ ಯೋಗ, ಸಂತಾನ ಫಲಪ್ರಾಪ್ತಿ, ಸಕಲ ಇಷ್ಟಾರ್ಥ ಸಿದ್ದಿಯಾಗುತ್ತದೆ. ಅಗಸ್ತ್ಯೇಶ್ವರ ಸ್ವಾಮಿ ದೇವಾಲಯ ಸೇವಾ ಟ್ರಸ್ಟ್ ಅವರು ವೈಧಿಕ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ ಎಂದರು. ಬೆಳ್ತಂಗಡಿ ಬಿಜೆಪಿ ಅಧ್ಯಕ್ಷ ರಂಜನ್ ಜಿ. ಗೌಡ ಮಾತನಾಡಿ, ಕಾರ್ಯಕ್ರಮದಲ್ಲಿ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಹಾಗೂ ಮಾಣಿಲ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ ಎಂದರು. ಸಭೆಯಲ್ಲಿ ಗ್ರಾಮ ಮಟ್ಟದ ವಿವಿಧ ಪ್ರಚಾರ ಸಮಿತಿಯನ್ನು ರಚಿಸಲಾಯಿತು. ಕಲ್ಯಾಣೋತ್ಸವ ಸಮಿತಿ ಅಧ್ಯಕ್ಷ ಪ್ರಕಾಶ್ ಟಿ. ಪಿಲಿಕಜೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಮಿತಿ ಕಾರ್ಯಾಧ್ಯಕ್ಷ ಅರವಿಂದ ಕುಡ್ವ, ದಿನಕರ ಆದೇಲು, ಉಪಾಧ್ಯಕ್ಷ ಕೃಷ್ಣಪ್ಪ ಗೌಡ ಬೇಂಗಳ ಉಪಸ್ಥಿತರಿದ್ದರು. ಗಿರೀಶ್ ಭಟ್ ಸ್ವಾಗತಿಸಿ ನಿರೂಪಿಸಿದರು. ದೀಕ್ಷಿತ್ ಶೆಟ್ಟಿ ಹತ್ಯಡ್ಕ ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.