ಕುರಾಯ ಶ್ರೀ ಸದಾಶಿವ ದೇವಸ್ಥಾನದಲ್ಲಿ ಧಾರ್ಮಿಕ ಕಾರ್ಯಕ್ರಮ

Advt_NewsUnder_1
Advt_NewsUnder_1
Advt_NewsUnder_1

kuraya6ಬಂದಾರು : ಕುರಾಯ ಶ್ರೀ ಸದಾಶಿವ ದೇವಸ್ಥಾನದಲ್ಲಿ ಪ್ರತಿಷ್ಠಾಷ್ಟಬಂಧ, ಬ್ರಹ್ಮಕಲಶಾಭಿಷೇಕ ಮಹೋತ್ಸವ ಹಾಗೂ ಜಾತ್ರಾಮಹೋತ್ಸವ ಪ್ರಯುಕ್ತ ಮೊದಲ ದಿನದ ಧಾರ್ಮಿಕ ಕಾರ್ಯಕ್ರಮದ ಉದ್ಘಾಟನೆಯು ಮಾ. 29ರಂದು ನಡೆಯಿತು.
ಕಾರ‍್ಯಕ್ರಮದ ಅಧ್ಯಕ್ಷತೆಯನ್ನು ಕಣಿಯೂರು ರೈತಬಂಧು ಮಾರುತಿಪುರದ ಉದ್ಯಮಿ ಶಿವಶಂಕರ್ ನಾಯಕ್ ವಹಿಸಿದ್ದರು. ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆಯನ್ನು ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಚಿದಾನಂದ ರಾವ್ ಕೊಲ್ಲಾಜೆ, ನೆರವೇರಿಸಿದರು. ಪುತ್ತೂರು ವಿವೇಕಾನಂದ ಕಾಲೇಜಿನ ಸಂಸ್ಕೃತ ಉಪನ್ಯಾಸಕ ಡಾ| ಶ್ರೀಶ ಕುಮಾರ್ ಧಾರ್ಮಿಕ ಉಪನ್ಯಾಸ ನೀಡಿದರು. ಅತಿಥಿಗಳಾಗಿ ಉದ್ಯಮಿ ಕರುಣಾಕರ ಸುವರ್ಣ,ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಹರೀಶ್ ಪೂಂಜ, ಬೆಳ್ತಂಗಡಿ ಶ್ರೀ.ಕ್ಷೇ.ಧ.ಗ್ರಾ. ಯೋಜನೆಯ ಯೋಜನಾಧಿಕಾರಿ ಶ್ರೀಮತಿ ರೂಪಾ ಜಿ. ಜೈನ್, ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ದಿನಕರ ಪೂಜಾರಿ ಕಡ್ತಿಲ, ವಕೀಲ ಸುಬ್ರಹ್ಮಣ್ಯ ಕುಮಾರ್ ಅಗರ್ತ, ಜಿ.ಪಂ ಮಾಜಿ ಸದಸ್ಯೆ ಶ್ರೀಮತಿ ದೇವಕಿ ಸಂಜೀವ ಗೌಡ, ಉಪ್ಪಿನಂಗಡಿ ಅರಣ್ಯಾಧಿಕಾರಿ ಶ್ರೀಮತಿ ಸಂಧ್ಯಾ, ಬಂದಾರು ಗ್ರಾ.ಪಂ ಅಧ್ಯಕ್ಷ ಉದಯ ಕುಮಾರ್ ಬಿ.ಕೆ., ಗುರುವಾಯನಕೆರೆ ಬಾಲಕೃಷ್ಣ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.