ಬೆಳ್ತಂಗಡಿ: ಎಪ್ರಿಲ್ 2 ಮತ್ತು 30 ರಂದು ಎರಡು ಸುತ್ತುಗಳಲ್ಲಿ ಪಲ್ಸ್ ಪೋಲಿಯೋ ಹನಿ ಮದ್ದು ಕಾರ್ಯಕ್ರಮ ತಾಲೂಕಿನಾದ್ಯಂತ ನಡೆಯಲಿದೆ ಎಂದು ತಾ| ಆರೋಗ್ಯಾಧಿಕಾರಿ ಡಾ| ಕಲಾಮಧು ಶೆಟ್ಟಿ ಮತ್ತು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಅಮ್ಮಿ ಎ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹುಟ್ಟಿದ ಮಗುವಿನಿಂದ ಪ್ರಾರಂಭಗೊಂಡು 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಈ ಹನಿ ಮದ್ದನ್ನು ಕೊಡಿಸಿ ಮಕ್ಕಳನ್ನು ಪೋಲಿಯೋ ಕಾಯಿಲೆಯಿಂದ ರಕ್ಷಿಸಿಕೊಳ್ಳಿ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.