ಬೆಳ್ತಂಗಡಿ: ವಾಣಿ ಪ್ರೌಢಶಾಲೆಯ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾಗಿದ್ದ ಬಳೆಂಜ ಗ್ರಾಮದ ಅಟ್ಲಾಜೆ ನಿವಾಸಿ ಅನಿಲ್ ನಾಯ್ಗ ಅವರು ಮಾ.೨೩ ರಂದು ನಿಧನರಾದ ಹಿನ್ನೆಲೆಯಲ್ಲಿ ವಾಣಿ ಪ್ರೌಢ ಶಾಲಾ ಸಭಾಂಗಣದಲ್ಲಿ ನುಡಿನಮನ ಸಲ್ಲಿಸಲಾಯಿತು.
ಕಾರ್ಯಕ್ರಮದಲ್ಲಿ ಅನಿಲ್ ನಾಯ್ಗ ಅವರ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಗೈದು, ಮೌನ ಪ್ರಾರ್ಥನೆ ಸಲ್ಲಿಸಲಾಯಿತು.
ಕಾರ್ಯಕ್ರಮದಲ್ಲಿ ವಾಣಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಯ ಗೌರವಾಧ್ಯಕ್ಷ ಪದ್ಮ ಗೌಡ.ಎಚ್, ಅಧ್ಯಕ್ಷ ಸೋಮೆ ಗೌಡ, ವಾಣಿ ಪ್ರೌಢ ಶಾಲಾ ಮುಖ್ಯೋಪಾಧ್ಯಾಯ ಲಕ್ಷ್ಮೀನಾರಾಯಣ ಕೆ ಹಾಗೂ ಪ್ರೌಢ ಶಾಲಾ ವಿಜ್ಞಾನ ಶಿಕ್ಷಕಿ ಶ್ರೀಮತಿ ವಿದ್ಯಾ ಶ್ರೀನಿವಾಸ ಗೌಡ, ನುಡಿನಮನ ಸಲ್ಲಿಸಿದರು
ವೇದಿಕೆಯಲ್ಲಿ ಕಾರ್ಯದರ್ಶಿ ಮೋಹನ್ ಗೌಡ, ಕೋಶಾಧಿಕಾರಿ ರಾಜೀವ ಗೌಡ, ಉಪಾಧ್ಯಕ್ಷ ನಾರಾಯಣ ಗೌಡ ದೇವಸ್ಯ, ಸದಸ್ಯರುಗಳಾದ ಶ್ರೀಮತಿ ಲೋಕೇಶ್ವರಿ ವಿನಯ ಚಂದ್ರ, ಕುಶಾಲಪ್ಪ ಗೌಡ, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿಯಾದ ಶ್ರೀಮತಿ ಕೃಷ್ಣವೇಣಿ, ವಾಣಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಯದುಪತಿ ಗೌಡ ಉಪಸ್ಥಿತರಿದ್ದರು ಮತ್ತು ವಾಣಿ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ ವೃಂದ, ಹೆತ್ತವರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.