ಅಳದಂಗಡಿ : ಮರದ ಕೊಂಬೆಯನ್ನು ಕಡಿಯುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶದಿಂದಾಗಿ ವ್ಯಕ್ತಿಯೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಅಳದಂಗಡಿಯಲ್ಲಿ ಇಂದು ನಡೆದಿದೆ.
ಅಳದಂಗಡಿ ಕಂಬಳದಡ್ಡ ಬರಮೇಲು ನಿವಾಸಿ ಬಾಬು ಮಡಿವಾಳ(55ವ) ಮೃತಪಟ್ಟ ವ್ಯಕ್ತಿ. ವಿದ್ಯುತ್ ತಂತಿಗೆ ತಾಗುತ್ತಿದ್ದ ಮರದ ಕೊಂಬೆಯನ್ನು ಕಡಿಯುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ವೇಣೂರು ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಮೃತ ದೇಹವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.