HomePage_Banner_
HomePage_Banner_
HomePage_Banner_

ಪ್ರಶಸ್ತಿ ಪುರಸ್ಕೃತರಾದ ಬೆಳ್ತಂಗಡಿಯ ಸಾಧಕರಿಗೆ ಅಭಿನಂದನಾ ಕಾರ್ಯಕ್ರಮ

Advt_NewsUnder_1

abhinandana karyakrama

abhinandana karyakrama1ಬೆಳ್ತಂಗಡಿ : 2016-17ನೇ ಸಾಲಿನಲ್ಲಿ ಜಿಲ್ಲಾ ಮಟ್ಟದಿಂದ ರಾಷ್ಟ್ರಮಟ್ಟದವರೆಗೆ ಪ್ರಶಸ್ತಿ ಪುರಸ್ಕೃತರಾದ ಬೆಳ್ತಂಗಡಿ ತಾಲೂಕಿನ ಹೆಮ್ಮೆಯ ಸಾಧಕರನ್ನು ಗುರುತಿಸಿ, ಗೌರವಿಸುವ ಅಭಿನಂದನಾ ಸಮಾರಂಭ ಕಾರ್ಯಕ್ರಮವು ಎ. 14ರಂದು ಬೆಳ್ತಂಗಡಿ ಶ್ರೀ ಮಂಜುನಾಥ ಸ್ವಾಮಿ ಕಲಾಭವನದ ಬಳಿ ಬಯಲು ರಂಗಮಂದಿರಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಕೆ. ವಸಂತ ಬಂಗೇರ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಅಳದಂಗಡಿ ಅರಮನೆಯ ತಿಮ್ಮಣ್ಣರಸ ಡಾ| ಪದ್ಮಪ್ರಸಾದ್ ಅಜಿಲರು, ಉಜಿರೆ ಶ್ರೀ.ಧ.ಮಂ. ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಪ್ರೊ| ಎಸ್. ಪ್ರಭಾಕರ್ ಭಾಗವಹಿಸಿದ್ದರು. ಜೆಸಿಐ ರಾಷ್ಟ್ರೀಯ ತರಬೇತುದಾರ ಜೇಸಿ ರಾಜೇಂದ್ರ ಭಟ್ ಅಭಿನಂದನಾ ಭಾಷಣವನ್ನು ಮಾಡಿದರು.
ಈ ಸಂದರ್ಭದಲ್ಲಿ ಸಿ.ಆರ್ ನರೇಂದ್ರ, ಪ್ರಭಾಕರ ನಾರಾವಿ, ಭಗೀರಥ ಜಿ. ರಾಮಕೃಷ್ಣ ಭಟ್ ಬೆಳಾಲು, ಹರೀಶ್ ಕಾರಿಂಜ, ದೇವಿಪ್ರಸಾದ್, ಸುಬ್ರಹ್ಮಣ್ಯ ಕುಮಾರ್ ಅಗರ್ತ, ಜಯಾನಂದ್ ಲಾಯಿಲ, ಕೆ. ಧರಣೇಂದ್ರ ಜೈನ್ ಉಪಸ್ಥಿತರಿದ್ದರು.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.