ಮಲೆಕುಡಿಯರಿಗಾಗಿ ಸಿಕ್ಲ್ ಸೆಲ್ ಅನೇಮಿಯ ತಪಾಸಣಾ ಶಿಬಿರಗಳ ಆಯೋಜನೆ

malekudiya 1

malekudiyaಬೆಳ್ತಂಗಡಿ : ಮಲೆಕುಡಿಯರಲ್ಲಿ ವಂಶವಾಹಿನಿಯಿಂದ ಬರುವ ಸಿಕ್ಲ್ ಸೆಲ್ ಅನೇಮಿಯ ಕಾಯಿಲೆಯನ್ನು ಪತ್ತೆಹಚ್ಚುವುದಕ್ಕಾಗಿ ಆರೋಗ್ಯ ಶಿಬಿರಗಳನ್ನು ಆಯೋಜಿಸುವ ಕುರಿತು ಸಮಾಲೋಚನಾ ಸಭೆಯು ಜಿಲ್ಲಾ ಆರೋಗ್ಯ ಅಧಿಕಾರಿಗಳ ಅದ್ಯಕ್ಷತೆಯಲ್ಲಿ ಬೆಳ್ತಂಗಡಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಪುತ್ತೂರು ಸುಳ್ಯ ಬಂಟ್ವಾಳ ಮಂಗಳೂರು ತಾಲೂಕಿನ ಮಲೆಕುಡಿಯ ಸಂಘದ ಪಧಾಧಿಕಾರಿಗಳಿಗೆ ಮಾಹಿತಿ ನೀಡದಿರುವುದು ಮತ್ತು ಮಲೆಕುಡಿಯರ ಸಂಪೂರ್ಣ ಆರೋಗ್ಯ ತಪಾಸಣೆ ಮಾಡಲು ನಿರ್ಲಕ್ಷ್ಯ ಮಾಡುತ್ತಿರುವ ಬಗ್ಗೆ ಬೆಳ್ತಂಗಡಿ ತಾಲೂಕು ಸಮಿತಿಯ ಪ್ರಧಾನ ಕಾರ್ಯದರ್ಶಿ ಹರೀಶ್ ಎಳನೀರ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಜಿಲ್ಲಾ ಆರೋಗ್ಯ ಅಧಿಕಾರಿಗಳು ಮಾತನಾಡಿ ಮಲೆಕುಡಿಯರ ಬಗ್ಗೆ ಇಲಾಖೆಗೆ ಕಾಳಜಿ ಇದೆ ಮುಂದಿನ ದಿನಗಳಲ್ಲಿ ಸಂಪೂರ್ಣ ಆರೋಗ್ಯ ತಪಾಸಣಾ ಶಿಬಿರಗಳನ್ನು ಆಯೋಜಿಸಲು ಪ್ರಯತ್ನಿಸಲಾಗುವುದು. ಸಮಾಜ ಕಲ್ಯಾಣಾಧಿಕಾರಿ ಮೋಹನ್‌ರವರು ಸಮಗ್ರ ಗಿರಿಜನ ಕಲ್ಯಾಣ ಇಲಾಖೆಯಿಂದ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ತಾಲೂಕು ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳು, ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ತಾಲೂಕು ಆರೋಗ್ಯ ಅಧಿಕಾರಿಗಳು, ತಾಲೂಕು ಪಂಚಾಯತ್ ಸದಸ್ಯ ಜಯರಾಮ್ ಆಲಂಗಾರು, ಜಿಲ್ಲಾ ಮಲೆಕುಡಿಯ ಸಂಘದ ಅಧ್ಯಕ್ಷ ಸಂಜೀವ ಕುಳ್ಳಾಜೆ ಮತ್ತು ಪಧಾದಿಕಾರಿಗಳು, ಮಲೆಕುಡಿಯ ಸಂಘ ತಾಲೂಕು ಸಮಿತಿ ಬೆಳ್ತಂಗಡಿಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು ಸಮಾಜ ಕಲ್ಯಾಣ ಅಧಿಕಾರಿ ಮೋಹನ್ ಸ್ವಾಗತಿಸಿ ಹೇಮಲತಾ ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.