HomePage_Banner_
HomePage_Banner_
HomePage_Banner_

ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಓರಿಯೆಂಟೇಷನ್

Advt_NewsUnder_1

Orientation copy

ಉಜಿರೆ : ಸತತ ಅಧ್ಯಯನ ಮಾಡುವ ಮೂಲಕ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ವಿಶ್ವಾಸದಿಂದ ಎದುರಿಸಲು ಸಾದ್ಯವಾಗುತ್ತದೆ. ಅಸಕ್ತಿಯಿಂದ ಓದಿದ ವಿಷಯಗಳನ್ನು ಪುನರ್ಮನನ ಮಾಡುವುದರಿಂದ ಉತ್ತಮ ಅಂಕಗಳನ್ನು ಗಳಿಸಲು ಅನುಕೂಲವಾಗುತ್ತದೆ ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ವಸತಿ ಕಾಲೇಜಿನ ಪ್ರಾಂಶುಪಾಲ ಪ್ರೊ. ಟಿ. ಕೃಷ್ಣಮೂರ್ತಿ ಹೇಳಿದರು.
ಇಲ್ಲಿನ ಎಸ್‌ಡಿಎಂ ಪಿಯು ವಸತಿ ಕಾಲೇಜಿಗೆ ಸೇರ್ಪಡೆಗೊಂಡ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಏರ್ಪಡಿಸಿದ ಓರಿಯೆಂಟೇಷನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡುತ್ತಾ ವಿದ್ಯಾರ್ಥಿಗಳು ತಮ್ಮ ವ್ಯಾಸಂಗದ ಅವಧಿಯಲ್ಲಿ ಕೇವಲ ಅಂಕಗಳ ಮೇಲೆ ಮಾತ್ರ ಗಮನ ವಹಿಸದೆ ವಿವಿಧ ಕೌಶಲಗಳನ್ನು ರೂಢಿಸಿಕೊಳ್ಳುವುದರ ಜೊತೆಗೆ ಸಮಾಜದ ಆಗು-ಹೋಗುಗಳಿಗೆ ಸ್ಪಂದಿಸುವ ಗುಣವನ್ನು ಹೊಂದಬೇಕು ಎಂದರು
ವೇದಿಕೆಯಲ್ಲಿ ಕಾಲೇಜಿನ ಉಪ ಪ್ರಾಂಶುಪಾಲ ಮನೀಷ್ ಕುಮಾರ್, ಹಾಸ್ಟೆಲ್ ವಾರ್ಡನ್ ಸುನಿಲ್ ಪಂಡಿತ್ ಹಾಗೂ ಕನ್ನಡ ಉಪನ್ಯಾಸಕ ನಾಗಣ್ಣ ಡಿ.ಎ ಉಪಸ್ಥಿತರಿದ್ದರು. ಕಾಲೇಜಿನಲ್ಲಿ ಶೈಕ್ಷಣಿಕ ಬೆಳವಣಿಗೆಗೆ ಸಿಗುವ ವಿವಿಧ ಸೌಲಭ್ಯಗಳ ಬಗ್ಗೆ ಉಪನ್ಯಾಸಕರು ಮಾಹಿತಿ ನೀಡಿದರು. ಇಂಗ್ಲೀಷ್ ಉಪನ್ಯಾಸಕಿ ಭವ್ಯಶ್ರೀ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Advt_NewsUnder_2
Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.