ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ

Advt_NewsUnder_1
Advt_NewsUnder_1

ಬೆಳ್ತಂಗಡಿ : ಇಲ್ಲಿನ ಜ್ಯೂನಿಯರ್ ಕಾಲೇಜು ಬಳಿ ಇರುವ ದೇವರಾಜ ಅರಸು ಹಿಂದುಳಿದ ವರ್ಗಗಳ ವಸತಿ ನಿಲಯದಲ್ಲಿ, ಉಜಿರೆ ಖಾಸಗಿ ಕಾಲೇಜಿನ ಅಂತಿಮ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಸಂದೇಶ್(21ವ) ಜೂ.11 ರಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇವರು ಕಾಸರಗೋಡು ತಲಪಾಡಿ ನಿವಾಸಿಯಾಗಿದ್ದು ಬೆಳ್ತಂಗಡಿ ವಸತಿ ನಿಲಯದಿಂದ ಕಾಲೇಜಿಗೆ ಹೋಗುತ್ತಿದ್ದು, ಜೂ. 11ರ ಮಧ್ಯಾಹ್ನ ಕೊಠಡಿಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಘಟನೆಗೆ ಕಾರಣವೇನೆಂದು ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಬೆಳ್ತಂಗಡಿ ಶಾಸಕ ಕೆ. ವಸಂತ ಬಂಗೇರ, ಕಾಲೇಜಿನ ಪ್ರಾಚಾರ್ಯರು, ಉಪನ್ಯಾಸಕರು ಭೇಟಿ ನೀಡಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.