ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘ : ಪತ್ರಿಕಾ ದಿನಾಚರಣೆ

pathrika dinacharaneಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆಯು ಜು. 1 ರಂದು ಬೆಳ್ತಂಗಡಿ ಶ್ರೀ ಗುರುನಾರಾಯಣ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸದಾಶಿವ ಶೆಣೈ ನೆರವೇರಿಸಿದರು. ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಮನೋಹರ ಬಳಂಜ ವಹಿಸಿದ್ದರು. ಹಿರಿಯ ಪತ್ರಕರ್ತ ಚಿದಂಬರ ಬೈಕಂಪಾಡಿ ಉಪನ್ಯಾಸ ನೀಡಿದರು. ಉದಯವಾಣಿಯ ಬೆಳ್ತಂಗಡಿಯ ಹಿರಿಯ ಪತ್ರಕರ್ತ ಅಶೋಕ್ ಪಿ.ಎಸ್.ರವರನ್ನು ಸನ್ಮಾನಿಸಲಾಯಿತು. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಶ್ರೀನಿವಾಸ್ ನಾಯಕ್ ಇಂದಾಜೆ ಭಾಗವಹಿಸಿದ್ದರು.
ಸಂಘದ ಕಾರ್ಯದರ್ಶಿ ಶಿಬಿ ಧರ್ಮಸ್ಥಳ ಸ್ವಾಗತಿಸಿ, ಜೊತೆ ಕಾರ್ಯದರ್ಶಿ ಪದ್ಮನಾಭ ಕುಲಾಲ್ ವಂದಿಸಿದರು. ಉಪಾಧ್ಯಕ್ಷ ಭುವನೇಶ್ ಗೇರುಕಟ್ಟೆ ಕಾರ್ಯಕ್ರಮ ನಿರ್ವಹಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.