HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಬಂಟರ ಸಂಘದಿಂದ ಪ್ರತಿಭಾ ಪುರಸ್ಕಾರ, ಶೈಕ್ಷಣಿಕ ಪ್ರೋತ್ಸಾಹ ಧನ ವಿರತಣೆ

bantara sanga 1

bantara sanga 2

bantara sangaಬೆಳ್ತಂಗಡಿ : ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ ಮತ್ತು ಯುವ ಬಂಟರ ವಿಭಾಗ ಹಾಗೂ ಮಹಿಳಾ ವಿಭಾಗ ಗುರುವಾಯನಕೆರೆ ಇದರ ಆಶ್ರಯದಲ್ಲಿ 2016-17 ನೇ ಸಾಲಿನ ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ ಹಾಗೂ ಶೈಕ್ಷಣಿಕ ಪ್ರೋತ್ಸಾಹಧನ ವಿತರಣಾ ಕಾರ್ಯಕ್ರಮ ಜು. 16ರಂದು ಗುರುವಾಯನಕೆರೆ ಬಂಟರ ಭವನದಲ್ಲಿ ನಡೆಯಿತು.
ಪ್ರಧಾನ ಅತಿಥಿಯಾಗಿ ಮುಂಬೈಯ ಭವಾನಿ ಶಿಪ್ಪಿಂಗ್ ಸರ್ವಿಸಸ್ ಇಂಡಿಯಾ ಪ್ರೈವೆಟ್ ಲಿಮಿಟೆಡ್ ಸಂಸ್ಥೆಯ ಆಡಳಿತ ನಿರ್ದೇಶಕ ಕುಸುಮೋದರ ಡಿ ಶೆಟ್ಟಿ ಚೆಲ್ಲಡ್ಕ ಭಾಗವಹಿಸಿದ್ದರು. ಅಧ್ಯಕ್ಷತೆಯನ್ನು ಬಂಟರ ಸಂಘದ ಅಧ್ಯಕ್ಷ ಎ ರಘುರಾಮ ಶೆಟ್ಟಿ ಸಾಧನಾ ವಹಿಸಿದ್ದರು.
ವೇದಿಕೆಯಲ್ಲಿ ಮಹಿಳಾ ವಿಭಾಗದ ಅಧ್ಯಕ್ಷೆ ಹೇಮಾವತಿ ಎಸ್ ಶೆಟ್ಟಿ ಪಾರೆಂಕಿ, ಯುವ ವಿಭಾಗದ ಅಧ್ಯಕ್ಷ ಸುರೇಶ್ ಶೆಟ್ಟಿ, ಬಂಟರ ಸಂಘದ ಜೊತೆ ಕಾರ್ಯದರ್ಶಿ ಟಿ ಕೃಷ್ಣ ರೈ ಇವರುಗಳು ಉಪಸ್ಥಿತರಿದ್ದರು.
ಸುಮಂಗಲಾ ಪ್ರಾರ್ಥನೆ ಹಾಡಿದರು. ಕಿಶೋರ್ ಶೆಟ್ಟಿ ಅರಸಿನಮಕ್ಕಿ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ ಪಟ್ಟಿಯನ್ನು ವಿದ್ಯಾರ್ಥಿ ನಿಧಿ ಸಂಚಾಲಕ ವಿಠಲ ಶೆಟ್ಟಿ ನಿರ್ವಹಿಸಿದರು.

Advt_NewsUnder_
Advt_NewsUnder_
Advt_NewsUnder_

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.