ಅಳದಂಗಡಿ: ಕಾಲೇಜು ಕೊಠಡಿಗಳ ನಿರ್ಮಾಣಕ್ಕೆ ಬಂಗೇರರಿಂದ ಶಿಲಾನ್ಯಾಸ

aladangady shilanyasaಅಳದಂಗಡಿ: ಇಲ್ಲಿಯ ಸ.ಪ.ಪೂ. ಕಾಲೇಜಿನಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಹೆಚ್ಚುವರಿ ತರಗತಿ ಕೊಠಡಿಗಳಿಗೆ ರಾಜ್ಯ ಸಣ್ಣ ಕೈಗಾರಿಕೆ ನಿಗಮದ ಅಧ್ಯಕ್ಷರು, ಬೆಳ್ತಂಗಡಿ ಶಾಸಕ ಕೆ. ವಸಂತ ಬಂಗೇರ ಅವರು ಜು. 19ರಂದು ಶಿಲಾನ್ಯಾಸ ನೆರವೇರಿಸಿದರು.
ಈ ವೇಳೆಯಲ್ಲಿ ಬೆಳ್ತಂಗಡಿ ತಾ.ಪಂ. ಅಧ್ಯಕ್ಷೆ ಶ್ರೀಮತಿ ದಿವ್ಯಜ್ಯೋತಿ, ಅಳದಂಗಡಿ ಜಿ.ಪಂ. ಸದಸ್ಯ ಶೇಖರ ಕುಕ್ಕೇಡಿ, ಬೆಳ್ತಂಗಡಿ ನಗರ ಪಂಚಾಯತು ಅಧ್ಯಕ್ಷ ಮುಗುಳಿ ನಾರಾಯಣ ರಾವ್, ತಾ.ಪಂ. ಸದಸ್ಯೆ ಶ್ರೀಮತಿ ವಿನುಷಾ ಪ್ರಕಾಶ್, ಅಳದಂಗಡಿ ಗ್ರಾ.ಪಂ. ಅಧ್ಯಕ್ಷ ಸತೀಶ್ ಮಿತ್ತಮಾರು, ದ.ಕ.ಜಿ.ಪಂ. ಇಂಜಿನಿಯರಿಂಗ್ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ಸಿ.ಆರ್. ನರೇಂದ್ರ, ಪಿಡ್ಲಬ್ಯೂಡಿ ಗುತ್ತಿಗೆದಾರ ರಫೀಕ್, ಗ್ರಾ.ಪಂ. ಸದಸ್ಯರು, ಕಾಲೇಜು ಉಪನ್ಯಾಸಕರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.