ವೇಣೂರು ಎಪಿಎಂಸಿ ಕಟ್ಟಡ ಉದ್ಘಾಟನೆ-ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಶಿಲಾನ್ಯಾಸ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

1

ವೇಣೂರು: ರೈತರ ಉತ್ಪನ್ನಗಳನ್ನು ಗ್ರಾಮೀಣ ಸಂತೆ ಮಾರುಕಟ್ಟೆಯಲ್ಲಿ ಮಾರಾಟ ಮಾಡಬಹುದು. ರೈತರಿಗೆ ಉತ್ಪನ್ನಗಳನ್ನು ಸಾಗಿಸಲು ಅನುಕೂಲವಾಗುವ ನಿಟ್ಟಿನಲ್ಲಿ ರೈತರ ಗದ್ದೆ, ತೋಟಕ್ಕೆ ಹೋಗುವ ರಸ್ತೆಗಳನ್ನು ಎಪಿಎಂಸಿ ಅಭಿವೃದ್ದಿ ಗೊಳಿಸಬೇಕು. ಗ್ರಾಮೀಣ ಸಂತೆ ಮಾರುಕಟ್ಟೆಯನ್ನು ರೈತರು ಸಂಪೂರ್ಣವಾಗಿ ಅವಲಂಬಿಸುವಂತಾಗಬೇಕು ಎಂದು ರಾಜ್ಯ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ, ಬೆಳ್ತಂಗಡಿ ಶಾಸಕ ಕೆ. ವಸಂತ ಬಂಗೇರ ಹೇಳಿದರು.
ಅವರು ಜು. ೨೦ರಂದು ವೇಣೂರು ಗ್ರಾ.ಪಂ. ವ್ಯಾಪ್ತಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ ಹಾಗೂ ವೇಣೂರಿನಲ್ಲಿ ೫೦ ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾದ ಕೃಷಿ ಉತ್ಪನ್ನ ಗ್ರಾಮೀಣ ಸಂತೆ ಮಾರುಕಟ್ಟೆ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು.

ಸಮಾರಂಭದ ಅಧ್ಯಕ್ಷತೆಯನ್ನು ಬೆಳ್ತಂಗಡಿ ಎಪಿಎಂಸಿ ಅಧ್ಯಕ್ಷ ಸತೀಶ್ ಕೆ. ಕಾಶಿಪಟ್ಣ  ವಹಿಸಿದ್ದರು. ನಾರಾವಿ ಜಿ.ಪಂ. ಸದಸ್ಯ ಪಿ. ಧರಣೇಂದ್ರ ಕುಮಾರ್, ಅಳದಂಗಡಿ ಜಿ.ಪಂ. ಸದಸ್ಯ ಶೇಖರ ಕುಕ್ಕೇಡಿ,  ಬೆಳ್ತಂಗಡಿ ತಾ.ಪಂ. ಅಧ್ಯಕ್ಷೆ ದಿವ್ಯಜ್ಯೋತಿ, ಮಂಗಳೂರು ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷ ಸರ್ವೋತ್ತಮ ಗೌಡ, ಜಿಲ್ಲಾ ಕೃಷಿ ಮಾರಾಟ ಇಲಾಖೆಯ ಪ್ರಭಾರ ಸಹಾಯಕ ನಿರ್ದೇಶಕಿ ಭಾರತಿ ಪಿ.ಎಸ್., ವೇಣೂರು ಗ್ರಾ.ಪಂ. ಅಧ್ಯಕ್ಷೆ ಮೋಹಿನಿ ವಿ. ಶೆಟ್ಟಿ, ಎಪಿಎಂಸಿ ಆಡಳಿತ ಮಂಡಳಿ ನಿರ್ದೇಶಕರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಹೋಬಳಿ ಮಟ್ಟದ ಗ್ರಾ.ಪಂ. ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ವಿವಿಧ ಇಲಾಖೆಯ ಅಧಿಕಾರಿಗಳು, ಗುತ್ತಿಗೆದಾರರಾದ ರಫೀಕ್, ಪ್ರಕಾಶ್ ಜೈನ್, ಮನ್ಸೂರ್ ಅಹ್ಮದ್, ಜಗನ್ನಾಥ ಬೆಳ್ತಂಗಡಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಬೆಳ್ತಂಗಡಿ ಎಪಿಎಂಸಿ ಕಾರ್ಯದರ್ಶಿ ಎಚ್.ಕೆ. ಕೃಷ್ಣಮೂರ್ತಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಎಪಿಎಂಸಿ ಉಪಾಧ್ಯಕ್ಷ ಗಣೇಶ್ ಪ್ರಸಾದ್ ಎಂ.ಕೆ. ಸ್ವಾಗತಿಸಿ ವೇಣೂರು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಕೆ. ವೆಂಕಟಕೃಷ್ಣರಾಜ ವಂದಿಸಿದರು. ತಾ.ಪಂ. ಕಾರ್ಯಕ್ರಮ ಸಂಯೋಜಕ ಜಯಾನಂದ ಲಾಲ ಕಾರ್ಯಕ್ರಮ ನಿರ್ವಹಿಸಿದರು.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.